ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಸರಾ ಕ್ರೀಡಾಕೂಟಕ್ಕೆ ಒಲಿಂಪಿಕ್ಸ್‌ ವಿಜೇತೆಯಿಂದ ಚಾಲನೆ; ಕ್ರೀಡೆಗೆ ಸ್ಫೂರ್ತಿಯಾದ ಸಾಕ್ಷಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್‌, 30: ದಸರಾ ಕ್ರೀಡಾಕೂಟಕ್ಕೆ ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲ್ಲಿಕ್ ಅವರು ಆಗಮಿಸಿರುವುದು ಕ್ರೀಡಾಪಟುಗಳಿಗೆ ಸ್ಫೂರ್ತಿ ಸಿಕ್ಕಂತಾಗಲಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಚಾಮುಂಡಿ ವಿಹಾರ್‌ನಲ್ಲಿ ಆಯೋಜಿಸಿರುವ ದಸರಾ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಮಾತನಾಡಿದ ಸಚಿವರು, ದಸರಾ ಕುಸ್ತಿ ಪಂದ್ಯಾವಳಿಗೆ ವಿವಿಧ ರಾಜ್ಯಗಳಿಂದ ಕುಸ್ತಿಪಟುಗಳು ಆಗಮಿಸಿದ್ದಾರೆ. ಸಾಕ್ಷಿ ಮಲ್ಲಿಕ್ ಅವರು ಕುಸ್ತಿಪಟ್ಟುಗಳಿಗೆ ಸಲಹೆ, ಸೂಚನೆಗಳನ್ನು ನೀಡಬೇಕು ಎಂದರು.

4,600 ಕ್ರೀಡಾ ಸ್ಪರ್ಧಿಗಳು, 800 ತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 5,400ಕ್ಕೂ ಹೆಚ್ಚು ಜನರು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಕ್ರೀಡಾಪಟುಗಳಿಗೆ ಸಕಲ ಸೌಕರ್ಯ ಕಲ್ಪಿಸುವುದರ ಜೊತೆಗೆ ಕ್ರೀಡಾ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಸಚಿವ ನಾರಾಯಣ ಗೌಡ ಅವರು ಮಾಡುತ್ತಿದ್ದಾರೆ ಎಂದು ಹೇಳಿದರು.

ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಲಿರುವ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಲಿರುವ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್

ಈ ಸಂದರ್ಭದಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಕೆ.ಗೋವಿಂದರಾಜು, ಮೈಸೂರು ಮೇಯರ್ ಶಿವಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಎಸ್‌ಪಿ ಚೇತನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಬಾಲಕಿ ಧವನಿ ಮತ್ತೊಂದು ದಾಖಲೆ

ಬಾಲಕಿ ಧವನಿ ಮತ್ತೊಂದು ದಾಖಲೆ

ಇನ್ನು ಬಾಲಪ್ರತಿಭೆ ವಂಶಿಕಾ ಅಂಜನಿ ಕಶ್ಯಪ್‌ರಿಂದ ಈ ಬಾರಿಯ ಮಕ್ಕಳ ದಸರಾವನ್ನು ಉದ್ಘಾಟಿಸಲಾಯಿತು. ಬಾಲಕಿ ಧವನಿ ನಿಮಿಷದಲ್ಲಿ 224 ಕ್ಷೇತ್ರದ ಹೆಸರು ಹೇಳುವ ಸ್ಮರಣ ಶಕ್ತಿ ಈ ಬಾರಿ ಮಕ್ಕಳ ದಸರಾಗೆ ನೈಜ ಕಳೆ ತಂದುಕೊಟ್ಟಿತು. ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿರುವ ರಿಯಾಲಿಟಿ ಶೋ ಖ್ಯಾತಿಯ ಬಾಲ ಪ್ರತಿಭೆ ವಂಶಿಕಾ ಅಂಜನಿ ಕಶ್ಯಪ್ ಅತಿಥಿಯಾಗಿ ಪಾಲ್ಗೊಂಡಿದ್ದರು. ವಿಕ್ರಾಂತ್ ರೋಣ ಚಿತ್ರದ ರಾ..ರಾ.. ರಕ್ಕಮ್ಮ ಹಾಡಿಗೆ ನೃತ್ಯ ಮಾಡುವ ಮೂಲಕ ನೆರೆದಿದ್ದ ವಿದ್ಯಾರ್ಥಿಗಳನ್ನು ಮನರಂಜಿಸಿದ್ದರು. ಜೊತೆಗೆ ಗಿನ್ನಿಸ್ ಬುಕ್ ಆಫ್‌ ರೆಕಾರ್ಡ್ ದಾಖಲೆ ಮಾಡಿರುವ ಧವನಿ ಎಂಬ ಪುಟ್ಟ ಬಾಲಕಿ 224 ವಿಧಾನ ಸಭಾ ಕ್ಷೇತ್ರದ ಹೆಸರನ್ನು ಒಂದು ನಿಮಿಷದಲ್ಲಿ ಹೇಳಿ ಅಚ್ಚರಿ ಮೂಡಿಸಿದರು.

ಮಕ್ಕಳ ದಸರಾದ ಕಾರ್ಯಕ್ರಮಗಳ ಪಟ್ಟಿ

ಮಕ್ಕಳ ದಸರಾದ ಕಾರ್ಯಕ್ರಮಗಳ ಪಟ್ಟಿ

ಮಕ್ಕಳ ದಸರಾ ಅಂಗವಾಗಿ ಜಗನ್ಮೋಹನ ಅರಮನೆ ಆವರಣದಲ್ಲಿ ಏರ್ಪಡಿಸಲಾಗಿರುವ ವಿಜ್ಞಾನ ಹಾಗೂ ಕರಕುಶಲ ವಸ್ತು ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಮತ್ತು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು. ವಸ್ತು ಪ್ರದರ್ಶನದಲ್ಲಿ ಜಿಲ್ಲೆಯ ಎಚ್.ಡಿ.ಕೋಟೆ ಸರ್ಕಾರಿ ಶಾಲಾ ಮಕ್ಕಳು ಶಿಕ್ಷಣದಲ್ಲಿ ಚಿತ್ರಕಲೆಯ ಉಪಯುಕ್ತತೆ, ಭೌಗೋಳಿಕ ಮತ್ತು ಪ್ರಾಕೃತಿಕ ವೈಪರೀತ್ಯಕ್ಕೆ ಕಾರಣಗಳು, ಪರಿಣಾಮಗಳು, ಪಿರಿಯಾಪಟ್ಟಣ ಶಾಲಾ ಮಕ್ಕಳಿಂದ ಕನ್ನಡದ ಶ್ರೇಷ್ಠ ಕವಿ ಪರಂಪರೆ, ಟಿ.ನರಸೀಪುರದಿಂದ ಶಿಕ್ಷಣ ಇಲಾಖೆಯ ಪ್ರೋತ್ಸಾಹದಾಯಕ ಯೋಜನೆಗಳು, ಕೆ.ಆರ್.ನಗರದ ಶಾಲಾ ಮಕ್ಕಳಿಂದ ಕಲಿಕಾ ಚೇತರಿಕೆ ಕುರಿತು ಪ್ರದರ್ಶನ ಗಮನ ಸೆಳೆದಿವೆ.

ಶಾಲೆಗಳಿಂದ ಏರ್ಪಡಿಸಿದ್ದ ಕಾರ್ಯಕ್ರಮಗಳ ಪಟ್ಟಿ

ಶಾಲೆಗಳಿಂದ ಏರ್ಪಡಿಸಿದ್ದ ಕಾರ್ಯಕ್ರಮಗಳ ಪಟ್ಟಿ

ಇನ್ನು ನಂಜನಗೂಡು ಶಾಲೆಯಿಂದ ಮೈಸೂರು ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ, ಮೈಸೂರು ದಕ್ಷಿಣ, ಉತ್ತರ ಹಾಗೂ ಗ್ರಾಮಾಂತರ ವಲಯದ ಸರ್ಕಾರಿ ಶಾಲಾ ಮಕ್ಕಳಿಂದ ಯೋಗ, ಸ್ವಾಸ್ಥ್ಯ ಹಾಗೂ ಕೊರೊನಾ ಮುನ್ನೆಚ್ಚರಿಕೆ, ಕಲಿಕಾ ಪ್ರಕ್ರಿಯೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳ ಕುರಿತು ವಸ್ತು ಪ್ರದರ್ಶನ ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಜಿ.ಬಗಾದಿ ಗೌತಮ್, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್ ಸೇರಿದಂತೆ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಪದಾಧಿಕಾರಿಗಳು ಹಾಜರಿದ್ದರು.

ಬಿ.ಸಿ.ನಾಗೇಶ್‌ರಿಂದ ಮಕ್ಕಳ ದಸರಾ ಉದ್ಘಾಟನೆ

ಬಿ.ಸಿ.ನಾಗೇಶ್‌ರಿಂದ ಮಕ್ಕಳ ದಸರಾ ಉದ್ಘಾಟನೆ

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಏರ್ಪಡಿಸಲಾಗಿರುವ ಮಕ್ಕಳ ದಸರಾ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಿದರು. ''ಕೋವಿಡ್ ನಂತರ ದಸರಾ ಹಬ್ಬವು ಮತ್ತೆ ಮೆರಗನ್ನು ಪಡೆದುಕೊಳ್ಳುತ್ತಿದೆ. ಅದರಂತೆ ವಿದ್ಯಾರ್ಥಿಗಳಿಗೂ ತಮ್ಮಲ್ಲಿರುವ ಪ್ರತಿಭೆ ಅನಾವರಣಕ್ಕೆ ಇಂತಹ ವೇದಿಕೆ ಅಗತ್ಯವಿದೆ. ಎಲ್ಲಾ ಮಕ್ಕಳಿಗೂ ಸಮಾನ ಅವಕಾಶ ನೀಡಲು ಸರ್ಕಾರದಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ,''ಎಂದರು.

English summary
Mysuru Dasara 2022: Rio Olympics bronze medalist, Ace Wrestler Sakshi malik inaugurated Dasara sports, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X