Voters List: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಯುವ ಸಮೂಹ ನಿರಾಸಕ್ತಿ!

ಮೈಸೂರು: ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು 18 ವರ್ಷ ಪೂರೈಸಿದ ಯುವ ಸಮೂಹ ಹಿಂದೇಟು ಹಾಕುತ್ತಿದ್ದು, ಜಿಲ್ಲಾಡಳಿತ ಜಾಗೃತಿ ಮೂಡಿಸಿದರೂ ಈ ಬಾರಿ ಕೇವಲ 50 ಸಾವಿರ ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಏಪ್ರಿಲ್-ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೂತನ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ವಿಳಾಸ ಬದಲು ಸೇರಿದಂತೆ ಇನ್ನಿತರೆ ತಿದ್ದುಪಡಿಗೆ ವಿಶೇಷ ಆಂದೋಲನ ನಡೆಸಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ಪಟ್ಟಿ ಬಿಡುಗಡೆಯಾಗಿದ್ದು, ಜಿಲ್ಲಾಡಳಿತ ನಿರೀಕ್ಷಿಸಿದಷ್ಟು ಯುವ ಸಮೂಹ ತಮ್ಮ ಹೆಸರು ನೋಂದಣಿ ಮಾಡಿಕೊಂಡಿಲ್ಲ. ಜಿಲ್ಲಾಡಳಿತ ನಿರೀಕ್ಷಿಸಿದ್ದು 80 ಸಾವಿರ ಮಂದಿ. ಆದರೆ, ನೋಂದಣಿಯಾಗಿದ್ದು ಕೇವಲ 50 ಸಾವಿರ ಮಾತ್ರ.

Mysuru Youth

ಮೈಸೂರು ಜಿಲ್ಲೆಯಲ್ಲಿ 18 ವರ್ಷ ಪೂರೈಸಿದ ಅಂದಾಜು 80 ಸಾವಿರ ಹೊಸ ಮತದಾರರು ಇದ್ದಾರೆ. ಕಳೆದ ವರ್ಷ 66 ಸಾವಿರ ಮತದಾರರು ತಮ್ಮ ಹೆಸರನ್ನು ಪಟ್ಟಿಗೆ ನೋಂದಣಿ ಮಾಡಿಸಿಕೊಂಡಿದ್ದರು. ಆದರೆ, ಈ ವರ್ಷ 50 ಸಾವಿರ ಮಂದಿ ಮಾತ್ರ ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ.

ಜಿಲ್ಲಾಮಟ್ಟದ ಸ್ವೀಪ್ ಸಮಿತಿ ಕಾಲೇಜುಗಳು, ವಿದ್ಯಾಸಂಸ್ಥೆಗಳಲ್ಲಿ ನಿರಂತರವಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಜಾಗೃತಿ ಮೂಡಿಸುತ್ತಿದ್ದರೂ ಯುವಜನರು ಮಾತ್ರ ಉತ್ಸಾಹ ತೋರಿಲ್ಲ. ಜತೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗಳನ್ನು ಸ್ವತಃ ಮತದಾರರೇ ಮಾಡಿಕೊಳ್ಳಬಹುದಾದ 'ವೋಟರ್ ಹೆಲ್ಪ್‌ಲೈನ್' ಮೊಬೈಲ್ ಆ್ಯಪ್ ಸಿದ್ಧಪಡಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಯುವ ಜನರು ಹೆಸರು ನೋಂದಾಯಿಸಲು ಮುಂದಾಗುತ್ತಿಲ್ಲ ಎನ್ನುತ್ತಾರೆ ಅಧಿಕಾರಿಗಳು.

ಮರಣ ಹೊಂದಿದವರ ಮಾಹಿತಿ ನೀಡಿ

ಜಿಲ್ಲೆಯಲ್ಲಿ ಮರಣ ಹೊಂದಿದವರ ಹಾಗೂ ಬೇರೆ ಊರಿಗೆ ಸ್ಥಳಾಂತರಗೊಂಡವರ ಮಾಹಿತಿ ಜಿಲ್ಲಾಡಳಿತಕ್ಕೆ ನಿಯಮಿತವಾಗಿ ಲಭ್ಯವಾಗುತ್ತಿಲ್ಲ. ಇದರಿಂದ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಮುಂದುವರಿಯುತ್ತಿದೆ. ಹೀಗಾಗಿ ಸಾರ್ವಜನಿಕರು ಮರಣ ಪ್ರಮಾಣ ಪತ್ರದೊಂದಿಗೆ ಮೃತಪಟ್ಟವರ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ತೃತೀಯ ಲಿಂಗಿ ಮತದಾರರ ಸಂಖ್ಯೆ ಹೆಚ್ಚಳ

2019ರ ಲೋಕಸಭಾ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಇತರೆ ವರ್ಗದಲ್ಲಿ ತೃತೀಯ ಲಿಂಗಿಗಳನ್ನು ಪರಿಗಣಿಸಿ 153 ಜನರನ್ನು ಸೇರ್ಪಡೆ ಮಾಡಲಾಗಿತ್ತು. ಈ ಬಾರಿ ತೃತೀಯ ಲಿಂಗಿಗಳಿಗೆ ಪ್ರತ್ಯೇಕ ಕಾಲಂ ನಿಗದಿಪಡಿಸಲಾಗಿದ್ದು, 220 ಜನರು ಹೆಸರು ನೋಂದಾಯಿಸಿಕೊಂಡಿದ್ದಾರೆ.

'18 ವರ್ಷ ತುಂಬುವ ಮೊದಲೇ ಅರ್ಜಿ ಸಲ್ಲಿಕೆಗೆ ಅವಕಾಶ ಇರುವ ಕಾರಣ ಯುವ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಆ್ಯಪ್ ಮೂಲಕವೂ ಯುವ ಮತದಾರರು, ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಸಾಕಷ್ಟು ಪ್ರಚಾರ ಕಾರ್ಯ ನಡೆಸಿ ಜಾಗೃತಿ ಮೂಡಿಸಲಾಗಿದೆ,' ಎಂದು ಡಿಸಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+