Breaking : ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹೊರಗುಳಿದ ನೀರಜ್ ಚೋಪ್ರಾ
ನವದೆಹಲಿ, ಜುಲೈ 26: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಆದ ಗಾಯದಿಂದಾಗಿ ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಮುಂಬರುವ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹೊರಗುಳಿದಿದ್ದಾರೆ.
ಒರೆಗಾನ್‌ನಲ್ಲಿ ಭಾನುವಾರ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 88.13 ಮೀಟರ್ ದೂರ ಎಸೆದು ಬೆಳ್ಳಿ ಪದಕ ಗೆದ್ದಿದ್ದ ನೀರಜ್, ಪ್ರದರ್ಶನದ ವೇಳೆ ಗಾಯಗೊಂಡಿದ್ದರು.
ಕಳೆದ ವರ್ಷದ ಟೋಕಿಯೊ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಹಾಲಿ ಒಲಿಂಪಿಕ್ ಚಾಂಪಿಯನ್ ಕೂಡ ಆಗಿದ್ದಾರೆ.

ಇತ್ತೀಚೆಗೆ ಒರೆಗಾನ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ನೀರಜ್, ಫೈನಲ್‌ನಲ್ಲಿ ನಾಲ್ಕನೇ ಪ್ರಯತ್ನದ ನಂತರ ತನ್ನ ಕಾಲುಗಳಲ್ಲಿ ನೋವು ಕಾಣಿಸಿಕೊಂಡ ಬಗ್ಗೆ ದೂರು ನೀಡಿದ್ದರು.
"ನೀರಜ್ ಚೋಪ್ರಾ ಅವರು ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾಗವಹಿಸುವುದಿಲ್ಲ. ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಗಾಯಗೊಂಡಿದ್ದರಿಂದ ಅವರು ಫಿಟ್ ಆಗಿಲ್ಲ. ಅವರು ಈ ಬಗ್ಗೆ ನಮಗೆ ಮಾಹಿತಿ ನೀಡಿದ್ದಾರೆ" ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ನಾಲ್ಕನೇ ರೌಂಡ್‌ನಲ್ಲಿ 88.13 ಮೀಟರ್ ದೂರ ಜಾವೆಲಿನ್ ಥ್ರೋ ಮಾಡುವ ಮೂಲಕ ನೀರಜ್ ಚೋಪ್ರಾ ಬೆಳ್ಳಿಪದಕ ಪಡೆದರು.












Click it and Unblock the Notifications