ಭಾರತ ಟೆಸ್ಟ್ ಕ್ರಿಕೆಟ್‌ಗೆ ಹೊಸ ನಾಯಕ
India Test Cricket's New Captain: ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಟಿಂ-20 ಬಳಿಕ ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್‌ಗೂ ನಿವೃತ್ತಿ ಘೋಷೋಸಿದ್ದರು. ಇದರ ಬೆನ್ನಲ್ಲೇ ಇವರ ಸ್ಥಾನವನ್ನು ಯಾರು ತುಂಬಲಿದ್ದಾರೆ ಎನ್ನುವ ಪ್ರಶ್ನೆಗಳು ಎದ್ದಿದ್ದು, ಇದಕ್ಕೆ ಇದೀಗ ಉತ್ತರ ಲಭ್ಯವಾಗಿದೆ. ಹಾಗಾದರೆ ಯಾರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಬೈ ಇಂಡಿಯನ್ಸ್ ತಂಡದ ಪರ ಐಪಿಎಲ್ ಆಡುತ್ತಿರುವಾಗಲೇ 38 ವರ್ಷದ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದರು. ಇದೀಗ ಅವರು 50 ಓವರ್‌ಗಳ ಕ್ರಿಕೆಟ್‌ನಲ್ಲಿ ಮಾತ್ರ ಆಡಲಿದ್ದು, ಟೆಸ್ಟ್ ಕ್ರಿಕೆಟ್‌ಗೆ ನಾಯಕ ಯಾರಾಗಲಿದ್ದಾರೆ ಎನ್ನುವ ಪ್ರಶ್ನೆಗಳಿಗೆ ಇದೀಗ ಉತ್ತರ ಸಿಕ್ಕಿದೆ..

ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ಗುಡ್ ಬೈ ಹೇಳುತ್ತಿದ್ದಂತೆ ನಾಯಕತ್ವ ಸ್ಥಾನ ಯಾರು ತುಂಬಲಿದ್ದಾರೆ ಎನ್ನುವ ಪ್ರಶ್ನೆಗಳು ಜೋರಾಗಿ ಕೇಳಿಬಂದಿದ್ದವು. ಇದೀಗ ಉತ್ತರ ಸಿಕ್ಕಿದ್ದು, ಟೆಸ್ಟ್ ಕ್ರಿಕೆಟ್‌ಗೆ ಮುಂದಿನ ಹೊಸ ನಾಯಕ ಯುವ ಆಟಗಾರ ಶುಭ್‌ಮನ್ ಗಿಲ್ ಅವರೇ ಬಹುತೇಕ ಫಿಕ್ಸ್ ಆಗಲಿದ್ದಾರೆ ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿದೆ.
ಮುಂದಿನ ತಿಂಗಳು ಅದರೆ ಜೂನ್‌ನಲ್ಲಿ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಸರಣಿಗೆ ಯುವ ಆಟಗಾರ ಶುಭ್‌ಮನ್ ಗಿಲ್ ನಾಯಕತ್ವ ವಹಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಯಾಕೆಂದರೆ ಅವರು ಉತ್ತಮ ಹಾಗೂ ಜವಾಬ್ದಾರಿಯುತ ಆಟ ಆಡಿಕೊಂಡು ಬಂದಿದ್ದಾರೆ. ಈ ಮೂದಲು ಜಸ್ಪ್ರಿತ್ ಬುಮ್ರಾ, ಕೆ.ಎಲ್. ರಾಹುಲ್ ಹಾಗೂ ರಿಷಭ್ ಪಂತ್ ಹೆಸರುಗಳು ಕೂಡ ಮುಂಚೂಣಿಯಲ್ಲಿದ್ದವು.
ಹೊಸ ನಾಯಕನ ಹುಡುಕಾಟದಲ್ಲಿದ್ದ ಬಿಸಿಸಿಐ: ಟೆಸ್ಟ್ ಕ್ರಿಕೆಟ್ ನಾಯಕನ ಜವಾಬ್ದಾರಿಯನ್ನು ರೋಹಿತ್ ಶರ್ಮಾ ಹೊತ್ತಿದ್ದರು. ಈ ವೇಳೆ ಹೊಸ ನಾಯಕನ ಹುಡುಕಾಟದಲ್ಲಿ ಬಿಸಿಸಿಐ ಇತ್ತು. ಈ ನಡುವೆಯೇ ರೋಹಿತ್ ಟೆಸ್ಟ್ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿ ಅಚ್ಚರಿ ಮೂಡಿಸುವ ಮೂಲಕ ಬಿಸಿಸಿಐಗೆ ಶಾಕ್ ನೀಡಿದ್ದರು.
67 ಟೆಸ್ಟ್ ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ ಅವರು, 18 ಅರ್ಧ ಶತಕ, 12 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಒಟ್ಟು 4,301 ರನ್‌ಗಳನ್ನು ಕಲೆಹಾಕಿದ್ದಾರೆ. ಚಾಂಪಿಯನ್ ಟ್ರೋಫಿ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ-20 ಕ್ರಕಿಕೆಟ್‌ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಟೆಸ್ಟ್‌ಗೂ ನಿವೃತ್ತಿ ಘೋಷಣೆ ಮಾಡಿದ್ದರು.
ಟಸ್ಟ್‌ನಲ್ಲಿ ರೋಹಿತ್ ಶರ್ಮಾ ಸಾಧನೆ
ಪಂದ್ಯ: 67
ರನ್: 4,301
ಅರ್ಧ ಶತಕ: 18
ಶತಕ, 12 ಶತಕ
ರೋಹಿತ್ ಶರ್ಮಾ ಅವರು 2013ರಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಟೆಸ್ಸ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಪದಾರ್ಪಣೆ ಪಂದ್ಯದಲ್ಲೇ ಸ್ಫೋಟಕ ಬ್ಯಾಟಿಂಗ್ ಮೂಲಕ ತಾವು ಟೆಸ್ಟ್ ಅಡಲು ಕೂಡ ತಯಾರಗಿದ್ದೇನೆ ಎಂದು ತೋರಿಸಿದ್ದರು. ಅವರಯ ಮೊದಲ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಮೂಲಕ 177 ರನ್ ಸಿಡಿಸಿ ಮಿಂಚಿದ್ದರು.












Click it and Unblock the Notifications