ಭಾರತ ಟೆಸ್ಟ್ ಕ್ರಿಕೆಟ್‌ಗೆ ಹೊಸ ನಾಯಕ!
ಭಾರತ ಕ್ರಿಕೆಟ್ ತಂಡದ ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಟಿ-20 ಬಳಿಕ ಇದೀಗ ಟೆಸ್ಟ್ ಕ್ರಿಕೆಟ್‌ಗೂ ನಿವೃತಿ ಘೋಷಿಸಿದ್ದಾರೆ. ಐಪಿಎಲ್ ನಡೆಯುವಾಗಲೇ ಈ ನಿರ್ಧಾರ ತೆಗೆದುಕೊಂಡಿರುವ ಅಚ್ಚರಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮುಂದಿನ ಟೆಸ್ಟ್ ಪಂದ್ಯಕ್ಕೆ ನಾಯಕನ ಸ್ಥಾನಕ್ಕೆ ಯಾರು ಎನ್ನುವ ಚರ್ಚೆಗಳು ಆರಂಭವಾಗಿವೆ. ಹಾಗಾದ್ರೆ ಇದಕ್ಕೆ ಉತ್ತರ ಇಲ್ಲಿದೆ ಗಮನಿಸಿ.
ಚಾಂಪಿಯನ್ ಟ್ರೋಫಿ ಗೆದ್ದ ಬಳಿಕ ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಟೆಸ್ಟ್ ನಾಯಕತ್ವ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ಇಳಿಸಿ ಅವರ ಸ್ಥಾನಕ್ಕೆ ಯುವ ಆಟಗಾರನನ್ನು ತರುವ ಚರ್ಚೆ ನಡೆದಿತ್ತು. ಆದರೆ, ಇದಕ್ಕೂ ಮುನ್ನವೇ ರೋಹಿತ್ ಶರ್ಮಾ ಟೆಸ್ಟ್ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿ ಶಾಕ್ ಕೊಟ್ಟಿದ್ದಾರೆ. ಇನ್ನು ಅವರು 50 ಓವರ್‌ಗಳ ಪಂದ್ಯಗಳಲ್ಲಿ ಮಾತ್ರ ಮುಂದುವರೆಯಲಿದ್ದಾರೆ.

ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ನಿವೃತ್ತಿ ಬಳಿಕ ಮುಂದಿನ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ನಾಯಕ ಯಾರು ಆಗಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ಮಾಹಿತಿಯ ಪ್ರಕಾರ, ಈ ಸರದಿಯಲ್ಲಿ ಜಸ್ಪ್ರಿತ್ ಬೂಮ್ರಾ, ಕನ್ನಡಿಗ ಕೆ.ಎಲ್. ರಾಹುಲ್, ಯುವ ಸ್ಫೋಟಕ ಬ್ಯಾಟರ್ ಶುಭ್‌ಮನ್ ಗಿಲ್ ಮತ್ತು ಬ್ಯಾಟರ್ ಮತ್ತು ಕೀಪರ್ ರಿಷಬ್ ಪಂತ್ ಹೆಸರುಗಳು ಮುಂಚೂಣಿಯಲ್ಲಿದ್ದು, ಈ ಹಿನ್ನೆಲೆ ಇವರಲ್ಲಿ ಒಬ್ಬರನ್ನು ಹೊಸ ನಾಯಕನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಅದರಲ್ಲೂ ರೋಹಿತ್ ಶರ್ಮಾ ಅವರು ಇದೀಗ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಪಂದ್ಯ ಆಡುವ ಸಮಯದಲ್ಲೇ ಈ ದೃಢ ನಿರ್ಧಾರ ತೆಗೆದುಕೊಂಡಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಹುಟ್ಟುಹಾಕಿದೆ. ಅಲ್ಲದೆ ಈ ತೀರ್ಮಾನ ಹಲವು ಅನುಮಾನಗಳಿಗೂ ಕಾರಣವಾಗಿದೆ.












Click it and Unblock the Notifications