Ind vs Aus: ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್‌ ಪಂದ್ಯಕ್ಕೆ ಮುನ್ನ ಭಾರತಕ್ಕೆ ಹೊಸ ಸಮಸ್ಯೆ!

ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 44 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಎ ಗುಂಪಿನಲ್ಲಿ ಮೊದಲ ಸ್ಥಾನದೊಂದಿದೆ ಸೆಮಿಫೈನಲ್ ಪ್ರವೇಶಿಸಿದೆ. ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆದಿರುವ ಭಾರತ ಬಿ ಗುಂಪಿನಲ್ಲಿ 2ನೇ ಸ್ಥಾನ ಪಡೆದಿರುವ ಆಸ್ಟ್ರೇಲಿಯಾ ತಂಡವನ್ನು ಸೆಮಿಫೈನಲ್‌ನಲ್ಲಿ ಎದುರಿಸಲಿದೆ.

ಮಾರ್ಚ್ 4, ಮಂಗಳವಾರ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಸೋಮವಾರ ಭಾರತ ತಂಡ ಅಭ್ಯಾಸ ನಡೆಸುತ್ತಿದ್ದು, ಆಸ್ಟ್ರೇಲಿಯಾ ವಿರುದ್ಧ ಗೆದ್ದು ಸೆಮಿಫೈನಲ್ ತಲುಪುವ ಲೆಕ್ಕಾಚಾರದಲ್ಲಿದೆ. 2023ರ ಏಕದಿನ ವಿಶ್ವಕಪ್‌ ಫೈನಲ್‌ನ ಸೋಲಿನ ಲೆಕ್ಕಾ ಚುಕ್ತಾ ಮಾಡಲು ಭಾರತಕ್ಕೆ ಇದು ಉತ್ತಮ ಅವಕಾಶವಾಗಿದೆ.

New problem for team india ahead of champions trophy semifinal australia

ಭಾರತ ತಂಡಕ್ಕೆ ಹೊಸ ತಲೆನೋವು!

ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕಾಗಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಮಾಡಲಾಗಿತ್ತು. ಮೊದಲ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಹರ್ಷಿತ್‌ ರಾಣಾಗೆ ವಿಶ್ರಾಂತಿ ನೀಡಿ ವರುಣ್ ಚಕ್ರವರ್ತಿಯನ್ನು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡಿಸಲಾಗಿತ್ತು.

ತಮಗೆ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡ ವರುಣ್ ಚಕ್ರವರ್ತಿ, ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್ ಪಡೆಯುವ ಮೂಲಕ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಅಲ್ಲದೆ ಉತ್ತಮ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡರು.

ದುಬೈ ಪಿಚ್‌ ಸ್ಪಿನ್ನರ್ ಗಳಿಗೆ ಹೆಚ್ಚಿನ ನೆರವು ನೀಡುತ್ತಿದೆ. ಮಂಗಳವಾರ ನಡೆಯುವ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಆಯ್ಕೆ ಈಗ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ಗೌತಮ್ ಗಂಭೀರ್ ಗೆ ದೊಡ್ಡ ತಲೆನೋವಾಗಿದೆ.

ನ್ಯೂಜಿಲೆಂಡ್ ವಿರುದ್ಧ ಗೆದ್ದಿರುವ ತಂಡವನ್ನೇ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಸಬೇಕೋ ಅಥವಾ ವೇಗಿ ಹರ್ಷಿತ್ ರಾಣಾಗೆ ತಂಡದಲ್ಲಿ ಅವಕಾಶ ಕೊಡಬೇಕೋ ಎನ್ನುವ ಗೊಂದಲವಿದೆ. ಹರ್ಷಿತ್ ರಾಣಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡಬೇಕು ಎಂದರೆ ಅವರಿಗೆ ಜಾಗ ಬಿಟ್ಟುಕೊಡೋದು ಯಾರು ಎನ್ನುವ ಪ್ರಶ್ನೆ ಎದುರಾಗುತ್ತದೆ.

ವರುಣ್ ಚಕ್ರವರ್ತಿಯನ್ನು ಈಗ ತಂಡದಿಂದ ಕೈಬಿಡಲು ಸಾಧ್ಯವಿಲ್ಲ. ಉಳಿದ ಆಟಗಾರರು ಕೂಡ ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನವನ್ನೇ ನೀಡಿದ್ದು, ಯಾರು ಬೆಂಚ್ ಕಾಯುತ್ತಾರೆ ಎನ್ನುವುದು ಪ್ರಶ್ನೆಯಾಗಿದೆ. ಅಥವಾ ನ್ಯೂಜಿಲೆಂಡ್ ವಿರುದ್ಧ ಗೆದ್ದಿರುವ ತಂಡವನ್ನೇ ಆಸ್ಟ್ರೇಲಿಯಾ ವಿರುದ್ಧ ಆಡಿಸಿದರೂ ಅಚ್ಚರಿ ಪಡುವಂತದ್ದೇನೂ ಇಲ್ಲ.

ಭಾರತ ತಂಡದ ಸಂಭಾವ್ಯ ಆಡುವ ಬಳಗ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+