India vs New Zealand: ವಾಷಿಂಗ್ಟನ್ ಸುಂದರ್ ದಾಳಿಗೆ ನ್ಯೂಜಿಲೆಂಡ್ ಆಲೌಟ್‌; ಭಾರತಕ್ಕೆ ಆರಂಭಿಕ ಆಘಾತ

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ನ್ಯೂಜಿಲೆಂಡ್ ನಡುವೆ ಎರಡನೇ ಟೆಸ್ಟ್‌ನಲ್ಲಿ ಭಾರತದ ಬೌಲರ್ ಗಳು ಮೊದಲ ದಿನವೇ ಮೇಲುಗೈ ಸಾಧಿಸಿದರು, ದಿನದ ಅಂತ್ಯದಲ್ಲಿ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ. ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ವಾಷಿಂಗ್ಟನ್ ಸುಂದರ್ ಅವರ ದಾಳಿಗೆ ಸಿಲುಕಿ ಮೊದಲ ಇನ್ನಿಂಗ್ಸ್‌ನಲ್ಲಿ 259 ರನ್‌ಗಳಿಗೆ ಆಲೌಟ್ ಆಗಿದೆ.

ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಎಚ್ಚರಿಕೆಯಿಂದ ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್‌ಗೆ ರವಿಚಂದ್ರನ್ ಅಶ್ವಿನ್ ಆರಂಭಿಕ ಆಘಾತ ನೀಡಿದರು. ನಾಯಕ ಟಾಮ್ ಲಾಥಮ್ 15 ರನ್ ಗಳಿಸಿದ್ದಾಗ ಅಶ್ವಿನ್‌ ಅವರ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ಬಳಿಕ ಡಿವೋನ್ ಕಾನ್ವೆ 78 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ವಿಲ್ ಯಂಗ್ 18 ರನ್ ಗಳಿಸಿ ಔಟಾದರೆ, ರಚಿನ್ ರವೀಂದ್ರ 65 ರನ್ ಗಳಿಸುವ ಮೂಲಕ ಮಿಂಚಿದರು.

new zealand allout for 259 vs india washingot sundar takes 7 wickets

ಡೇರಿಲ್ ಮಿಚೆಲ್ 18 ರನ್, ಮಿಚೆಲ್ ಸ್ಯಾಂಟ್ನರ್ 33 ರನ್ ಗಳಿಸಿದರು. ಸ್ಪಿನ್‌ಗೆ ನೆರವು ನೀಡುತ್ತಿದ್ದ ಪಿಚ್‌ನಲ್ಲಿ ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್ ಮಿಂಚು ಹರಿಸಿದರು. ವಾಷಿಂಗ್ಟನ್ ಸುಂದರ್ 7 ವಿಕೆಟ್ ಪಡೆಯುವ ಮೂಲಕ ಮಿಂಚಿದರೆ, ರವಿಚಂದ್ರನ್ ಅಶ್ವಿನ್ 3 ವಿಕೆಟ್ ಪಡೆದರು.

ಭಾರತಕ್ಕೆ ಆರಂಭಿಕ ಆಘಾತ

ನ್ಯೂಜಿಲೆಂಡ್ ಆಲೌಟ್ ಆದ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ. ನಾಯಕ ರೋಹಿತ್ ಶರ್ಮಾ ಯಾವುದೇ ರನ್ ಗಳಿಸದೆ ಟಿಮ್ ಸೌಥಿ ಅವರ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಿದರು. ಮೊದಲ ದಿನದ ಆಟದ ಅಂತ್ಯಕ್ಕೆ ಭಾರತ 1 ವಿಕೆಟ್ ಕಳೆದುಕೊಂಡು 16 ರನ್ ಗಳಿಸಿದೆ.

ವಾಷಿಂಗ್ಟನ್ ಸುಂದರ್ ಭರ್ಜರಿ ವಾಪಸಾತಿ

ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಟೆಸ್ಟ್‌ ಕ್ರಿಕೆಟ್‌ ಭರ್ಜರಿ ವಾಪಸಾತಿ ಮಾಡಿದ್ದಾರೆ. 3.5 ವರ್ಷಗಳ ಹಿಂದೆ ವಾಷಿಂಗ್ಟನ್ ಸುಂದರ್ ಕೊನೆಯ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಗಾಯದ ಸಮಸ್ಯೆ ಮತ್ತು ಅಸ್ಥಿರ ಪ್ರದರ್ಶನದಿಂದ ಅವರು ತಂಡದಲ್ಲಿ ಅವಕಾಶ ಕಳೆದುಕೊಂಡಿದ್ದರು. ಆದರೆ 3.5 ವರ್ಷಗಳ ಬಳಿಕ ವಾಪಸಾತಿ ಮಾಡಿದ ಅವರು ಭರ್ಜರಿ ಪ್ರದರ್ಶನ ನೀಡಿದರು.

ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಅಷ್ಟೇನೂ ಉತ್ತಮ ಪ್ರದರ್ಶನ ನೀಡದ ಕುಲದೀಪ್ ಯಾದವ್ ಬದಲಾಗಿ ವಾಷಿಂಗ್ಟನ್ ಸುಂದರ್ ಅವಕಾಶ ಪಡೆದರು. ಬ್ಯಾಟಿಂಗ್‌ನಲ್ಲಿ ಕೂಡ ಉತ್ತಮ ಪ್ರದರ್ಶನ ನೀಡುವ ಕಾರಣ ಎರಡನೇ ಟೆಸ್ಟ್‌ನಲ್ಲಿ ವಾಷಿಂಗ್ಟನ್ ಸುಂದರ್ ಅವರಿಗೆ ಅವಕಾಶ ನೀಡಲಾಗಿತ್ತು, ಬೌಲಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಅವರು ಬ್ಯಾಟಿಂಗ್‌ನಲ್ಲಿ ಕೂಡ ಉತ್ತಮ ಪ್ರದರ್ಶನ ನೀಡಿದರೆ ಮುಂದಿನ ದಿನಗಳಲ್ಲಿ ತಂಡದಲ್ಲಿ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+