Pakistan vs New Zealand: ಪಾಕಿಸ್ತಾನಕ್ಕೆ ಹೀನಾಯ ಸೋಲು; ಸರಣಿ ಗೆದ್ದ ನ್ಯೂಜಿಲೆಂಡ್

ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಸೋತಿದ್ದ ಪಾಕಿಸ್ತಾನ ಏಕದಿನ ಸರಣಿಯಲ್ಲೂ ಕಳಪೆ ಪ್ರದರ್ಶನ ನೀಡುವ ಮೂಲಕ ಅವಮಾನಕರ ಸೋಲು ಕಂಡಿದೆ. ನ್ಯೂಜಿಲೆಂಡ್ ಪ್ರಮುಖ ಆಟಗಾರರು ಐಪಿಎಲ್‌ನಲ್ಲಿ ಆಡುತ್ತಿದ್ದರೆ, ಇಲ್ಲಿ ಹರಾಜಾಗದೆ ಉಳಿದ ಇನ್ನಷ್ಟು ಆಟಗಾರರು ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದಾರೆ. ಎರಡೂ ಕಡೆ ಆಡದ ಆಟಗಾರರ ಪಾಕಿಸ್ತಾನದ ವಿರುದ್ಧ ಏಕದಿನ ಸರಣಿ ಆಡಿದ್ದು, ಪಾಕಿಸ್ತಾನ ತಂಡವನ್ನು ಸೋಲಿಸಿದ್ದಾರೆ.

ಮೂರು ಪಂದ್ಯಗಳಲ್ಲಿ ಪಾಕಿಸ್ತಾನ ಸೋಲು ಕಂಡಿದ್ದು ನ್ಯೂಜಿಲೆಂಡ್ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಮೌಂಟ್ ಮೌಂಗನುಯಿಯ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ದ ನ್ಯೂಜಿಲೆಂಡ್ 43 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

New zealand defeated pakistan clean sweep odi series

ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ 42 ಓವರ್ ಗಳಿಗೆ ಸೀಮಿತಗೊಳಿಸಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 42 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 264 ರನ್ ಕಲೆಹಾಕಿತು. ರಿಸ್ ಮರಿಯು 58 ರನ್ ಗಳಿಸಿದರೆ, ಡೇರಿಲ್ ಮಿಚೆಲ್ 43 ರನ್ ಗಳಿಸಿದರು. ನಾಯಕ ಮಿಚೆಲ್ ಬ್ರೇಸ್‌ವೆಲ್ 59 ರನ್ ಗಳಿಸುವ ಮೂಲಕ ದೊಡ್ಡ ಮೊತ್ತ ಕಲೆಹಾಕಲು ನೆರವಾದರು.

ಪಾಕಿಸ್ತಾನದ ಪರವಾಗಿ ಅಕಿಫ್ ಜಾವೆದ್ 4 ವಿಕೆಟ್ ಪಡೆಯುವ ಮೂಲಕ ಮಿಂಚಿದರು. ನಸೀಮ್ ಶಾ 2 ವಿಕೆಟ್ ಪಡೆದರೆ, ಫಹೀಮ್ ಅಶ್ರಫ್ ಮತ್ತು ಸಿಫಿಯಾನ್ ತಲಾ 1 ವಿಕೆಟ್ ಪಡೆದುಕೊಂಡರು.

ಪಾಕಿಸ್ತಾನಕ್ಕೆ ಹೀನಾಯ ಸೋಲು

265 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ 10 ಓವರ್ ಗಳಲ್ಲೇ 221 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಬಾಬರ್ ಆಜಂ 50 ರನ್ ಗಳಿಸಿದರೆ, ಮೊಹಮ್ಮದ್ ರಿಜ್ವಾನ್ 37 ರನ್ ಗಳಿಸಿದರು. ಅಬ್ದುಲ್ಲಾ ಶಫೀಕ್ 33 ರನ್ ಗಳಿಸಿದರು. ತಯ್ಯಬ್ ತಾಹಿರ್ 33 ರನ್ ಗಳಿಸಿ ಔಟಾದರು.

ಬೆನ್ ಸೀರಸ್ 9 ಓವರ್ ಗಳಲ್ಲಿ 34 ರನ್ ಬಿಟ್ಟುಕೊಟ್ಟು 5 ವಿಕೆಟ್ ಪಡೆಯುವ ಮೂಲಕ ಪಾಕಿಸ್ತಾನಕ್ಕೆ ಶಾಕ್ ಕೊಟ್ಟರು. ಜೇಕಬ್ ಡುಫಿ 2 ವಿಕೆಟ್ ಪಡೆದರೆ, ಮಿಚೆಲ್ ಬ್ರೇಸ್‌ವೆಲ್, ಮೊಹಮ್ಮದ್ ಅಬ್ಬಾಸ್, ಡೇರಿಲ್ ಮಿಚೆಲ್ ತಲಾ 1 ವಿಕೆಟ್ ಪಡೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+