Ind vs NZ: ಭಾರತದಲ್ಲಿ 36 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ನ್ಯೂಜಿಲೆಂಡ್‌; WTC ಅಂಕಪಟ್ಟಿ ಹೇಗಿದೆ?

1988ರ ಬಳಿಕ ಇದೇ ಮೊದಲ ಬಾರಿಗೆ ಭಾರತದಲ್ಲಿ ನ್ಯೂಜಿಲೆಂಡ್ ತಂಡ ಟೆಸ್ಟ್ ಪಂದ್ಯವನ್ನು ಗೆದ್ದ ಸಾಧನೆ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಭಾರತದ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 46 ರನ್‌ಗಳಿಗೆ ಆಲೌಟ್ ಆದರೂ, ಎರಡನೇ ಇನ್ನಿಂಗ್ಸ್‌ನಲ್ಲಿ ದಿಟ್ಟ ಹೋರಾಟ ಕೊಟ್ಟ ಭಾರತ 462 ರನ್ ಗಳಿಸುವ ಮೂಲಕ 106 ರನ್‌ಗಳ ಮುನ್ನಡೆ ಪಡೆದುಕೊಂಡಿತ್ತು, 107 ರನ್‌ಗಳ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ 2 ವಿಕೆಟ್ ಕಳೆದುಕೊಂಡು 110 ರನ್ ಗಳಿಸಿ ಭರ್ಜರಿ ಗೆಲುವು ಸಾಧಿಸಿತು.

ಭಾರತವನ್ನು 46 ರನ್‌ಗಳಿಗೆ ಆಲೌಟ್ ಮಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 402 ರನ್‌ಗಳಿಗೆ ಆಲೌಟ್ ಆಗುವ ಮೂಲಕ 356 ರನ್‌ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಸರ್ಫರಾಜ್ ಖಾನ್ 150 ರನ್, ರಿಷಬ್ ಪಂತ್ 99 ರನ್, ವಿರಾಟ್ ಕೊಹ್ಲಿ 70 ರನ್, ರೋಹಿತ್ ಶರ್ಮಾ 52 ರನ್ ಗಳಿಸಿದ್ದರಿಂದ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 462 ರನ್‌ಗಳಿಗೆ ಆಲೌಟ್ ಆಗುವ ಮೂಲಕ 106 ರನ್‌ಗಳ ಮುನ್ನಡೆ ಸಾಧಿಸಿತು.

New Zealand Defeats India in Test Match After 36 Years on Indian Soil wtc points update

ಭಾನುವಾರ ಬೆಳಿಗ್ಗೆಯೇ ಮಳೆ ಬಂದ ಕಾರಣ ಇಂದು ಪಂದ್ಯ ನಡೆಯದೇ ಇದ್ದರೆ ಸಾಕಪ್ಪಾ, ಪಂದ್ಯ ಡ್ರಾ ಆದರೂ ಆಗಲಿ ಎಂದು ಭಾರತ ತಂಡದ ಅಭಿಮಾನಿಗಳು ಪ್ರಾರ್ಥಿಸಿದ್ದರು. ಆದರೆ ಮಳೆ ನಿಂತ ಒಂದು ಗಂಟೆಯಲ್ಲೇ ಮೈದಾನ ಆಟಕ್ಕೆ ಸಜ್ಜಾಗಿತ್ತು, ಒಂದು ಗಂಟೆ ತಡವಾಗಿ ಪಂದ್ಯ ಆರಂಭವಾದರೂ, ನ್ಯೂಜಿಲೆಂಡ್ ಗೆಲುವನ್ನು ತಪ್ಪಿಸಲು ಆಗಲಿಲ್ಲ.

ನಾಯಕ ಟಾಮ್ ಲಾಥಮ್ ರನ್ ಗಳಿಸದೆ ಬುಮ್ರಾಗೆ ವಿಕೆಟ್ ಒಪ್ಪಿಸಿದಾಗ ಭಾರತಕ್ಕೆ ಗೆಲುವಿನ ಆಸೆ ಚಿಗುರಿತ್ತು. ಆದರೆ ಡೆವೋನ್ ಕಾನ್ವೆ ಮತ್ತು ವಿಲ್ ಯಂಗ್ ಎರಡನೇ ವಿಕೆಟ್‌ಗೆ 35 ರನ್ ಕಲೆಹಾಕಿದರು. ಡಿವೋನ್ ಕಾನ್ವೆ 17 ರನ್ ಗಳಿಸಿ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಬಳಿಕ ವಿಲ್ ಯಂಗ್ ಮತ್ತು ರಚಿನ್ ರವೀಂದ್ರ ಜೋಡಿ ಲೀಲಾಜಾಲವಾಗಿ ರನ್ ಗಳಿಸುವ ಮೂಲಕ ಭಾರತ ಬೌಲಿಂಗ್ ಅನ್ನು ಸಮರ್ಥವಾಗಿ ಎದುರಿಸಿದರು. ವಿಲ್ ಯಂಗ್ ಅಜೇಯ 48 ರನ್ ಗಳಿಸಿದರೆ, ರಚಿನ್ ರವೀಂದ್ರ ಅಜೇಯ 39 ರನ್ ಗಳಿಸಿದರು.

ಈ ಗೆಲುವಿನ ಮೂಲಕ ನ್ಯೂಜಿಲೆಂಡ್ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸರಣಿಯ ಎರಡನೇ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಕ್ಟೋಬರ್ 24ರಿಂದ ಆರಂಭವಾಗಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿ

ಈ ಟೆಸ್ಟ್ ಸೋಲು ಭಾರತಕ್ಕೆ ಅಲ್ಪ ಹಿನ್ನಡೆಯಾದರೂ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. 2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಸೈಕಲ್‌ನಲ್ಲಿ 12 ಪಂದ್ಯಗಳನ್ನಾಡಿರುವ ಭಾರತ 8 ಪಂದ್ಯಗಳನ್ನು ಗೆದ್ದು 3 ಪಂದ್ಯಗಳಲ್ಲಿ ಸೋತಿದ್ದು, ಒಂದು ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. 68.060 ಗೆಲುವಿನ ಸರಾಸರಿ (ಪಿಸಿಟಿ) ಯೊಂದಿಗೆ ಅಗ್ರ ಸ್ಥಾನದಲ್ಲಿದೆ. 62.500 ಪಿಸಿಟಿ ಹೊಂದಿರುವ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಈ ಗೆಲುವಿನ ಮೂಲಕ ನ್ಯೂಜಿಲೆಂಡ್ 44.440 ಪಿಸಿಟಿಯೊಂದಿಗೆ 4ನೇ ಸ್ಥಾನಕ್ಕೇರಿದೆ.

ಭಾರತ ಈ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೈಕಲ್‌ನಲ್ಲಿ ಇನ್ನೂ 7 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಕನಿಷ್ಠ 4 ಪಂದ್ಯಗಳಲ್ಲಿ ಗೆದ್ದು ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡರೆ ಯಾವುದೇ ಲೆಕ್ಕಾಚಾರ ಇಲ್ಲದೆ ನೇರವಾಗಿ ಫೈನಲ್‌ಗೆ ಪ್ರವೇಶ ಪಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+