Ind vs NZ: ಭಾರತದ ವಿರುದ್ಧದ ಫೈನಲ್ ಪಂದ್ಯಕ್ಕೆ ಮುನ್ನ ನ್ಯೂಜಿಲೆಂಡ್‌ಗೆ ಭಾರಿ ಹಿನ್ನಡೆ!
ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ಮುಖಾಮುಖಿಯಾಗಲಿದ್ದು ಪ್ರತಿಷ್ಠಿತ ಪ್ರಶಸ್ತಿ ಗೆಲುವಿಗಾಗಿ ಸೆಣೆಸಲಿವೆ. ದುಬೈನ ಅಂತಾರಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಎರಡೂ ತಂಡಗಳು ಈಗಾಗಲೇ ಕಠಿಣ ಅಭ್ಯಾಸ ನಡೆಸುತ್ತಿವೆ. ಎರಡೂ ತಂಡಗಳು ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಸೆಮಿಫೈನಲ್‌ನಲ್ಲಿ ಬಲಿಷ್ಠ ತಂಡಗಳನ್ನು ಮಣಿಸಿ ಫೈನಲ್‌ಗೆ ಪ್ರವೇಶ ಪಡೆದಿವೆ.
ಭಾರತ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ಗೆಲುವು ಸಾಧಿಸಿ ಫೈನಲ್ ತಲುಪಿದ್ದು, ನ್ಯೂಜಿಲೆಂಡ್ ಕೂಡ ಬಲಿಷ್ಠ ದಕ್ಷಿಣ ಆಫ್ರಿಕಾವನ್ನೇ ಸೋಲಿಸಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಲೀಗ್ ಹಂತದ ಪಂದ್ಯದಲ್ಲಿ ಭಾರತದ ವಿರುದ್ಧ ಸೋಲು ಕಂಡಿದ್ದ ನ್ಯೂಜಿಲೆಂಡ್ ಫೈನಲ್‌ನಲ್ಲಿ ತಪ್ಪು ತಿದ್ದಿಕೊಂಡು ಹೋರಾಟ ಕೊಡಲು ಯೋಜಿಸುತ್ತಿದೆ. ಆದರೆ ಫೈನಲ್‌ಗೆ ಮುನ್ನವೇ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಗಾಯಗೊಂಡ ಮಾರಕ ಬೌಲರ್
ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ನ್ಯೂಜಿಲೆಂಡ್‌ನ ವೇಗಿ ಆಡುವುದು ಅನುಮಾನ ಎನ್ನಲಾಗಿದೆ. ಬುಧವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್‌ನಲ್ಲಿ ಕ್ಯಾಚ್ ಹಿಡಿಯುವ ಸಂದರ್ಭದಲ್ಲಿ ಬಲ ಭುಜದ ಗಾಯಕ್ಕೆ ತುತ್ತಾಗಿದ್ದರು. ಫೈನಲ್ ಪಂದ್ಯಕ್ಕೆ ಮುನ್ನ ಫಿಟ್ ಆಗಲು ಅವರು ಕೆಲಸ ಮಾಡುತ್ತಿದ್ದು, ಆದರೆ ಅದು ಎಷ್ಟರ ಮಟ್ಟಿಗೆ ಚೇತರಿಸಿಕೊಳ್ಳುತ್ತಾರೆ ಎನ್ನುವುದನ್ನು ನೋಡಬೇಕಿದೆ.
ಮ್ಯಾಟ್ ಹೆನ್ರಿ ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದಾರೆ. ಭಾರತದ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ 5 ವಿಕೆಟ್ ಪಡೆಯುವ ಮೂಲಕ ಮಿಂಚಿದ್ಸರು. ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭುಜದ ಗಾಯಕ್ಕೆ ತುತ್ತಾಗಿದ್ದು ಗಾಯದ ಬಗ್ಗೆ ನ್ಯೂಜಿಲೆಂಡ್ ತಂಡ ಆತಂಕಗೊಂಡಿದೆ.
ಮ್ಯಾಟ್ ಹೆನ್ರಿ ಗಾಯದ ಬಗ್ಗೆ ಮಾತನಾಡಿದ ಮುಖ್ಯ ಕೋಚ್ ಗ್ಯಾರಿ ಸ್ಟೀಡ್, ಮ್ಯಾಟ್ ಹೆನ್ರಿ ಅವರಿಗೆ ಕೆಲವು ಸ್ಕ್ಯಾನ್ ಮಾಡಿದ್ದೇವೆ. ಫೈನಲ್ ಪಂದ್ಯಕ್ಕೆ ಮುನ್ನ ಅವರು ಫಿಟ್ ಆಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈ ಹಂತದಲ್ಲಿ ಅವರ ಗಾಯದ ಪ್ರಮಾಣದ ಬಗ್ಗೆ ಇನ್ನೂ ಪೂರ್ಣ ಮಾಹಿತಿ ಸಿಕ್ಕಿಲ್ಲ. ಭುಜದ ನೋವು ಕಾಣಿಸಿಕೊಂಡಿರುವುದು ನಿಜ, ಸುಧಾರಿಸಿಕೊಳ್ಳುವ ನಂಬಿಕೆಯಿದೆ ಎಂದರು.
ಲಾಹೋರ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ವೇಳೆ ಹೆನ್ರಿಚ್ ಕ್ಲಾಸೆನ್ ಅವರ ಕ್ಯಾಚ್ ಪಡೆಯುವ ಸಂದರ್ಭದಲ್ಲಿ ಭುಜಕ್ಕೆ ನೋವು ಮಾಡಿಕೊಂಡಿದ್ದರು. 7 ಓವರ್ ಬೌಲಿಂಗ್ ಮಾಡಿದ್ದ ಅವರು, ಬಳಿಕ ಎರಡು ಓವರ್ ಬೌಲಿಂಗ್ ಮಾಡಿದರು. ವಿಲಿಯಮ್ ಓ ರೂರ್ಕ್ ಮತ್ತು ಕೈಲ್ ಜೇಮಿಸನ್ ಮತ್ತಿಬ್ಬರು ವೇಗಿಗಳಾಗಿದ್ದಾರೆ.
ನ್ಯೂಜಿಲೆಂಡ್ 2000 ದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ಮೊದಲ ಐಸಿಸಿ ಕಪ್ ಗೆದ್ದುಕೊಂಡಿದ್ದರು. ಭಾರತ 2014ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿತ್ತು, 2017ರಲ್ಲಿ ನಡೆದ ಫೈನಲ್‌ನಲ್ಲಿ ಸೋಲು ಕಂಡಿತ್ತು. ಈಗ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿದ್ದು ಕಪ್ ಗೆಲ್ಲುವ ವಿಶ್ವಾಸದಲ್ಲಿದೆ.












Click it and Unblock the Notifications