Ind vs NZ: ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ; ತಂಡದಲ್ಲಿ ಪ್ರಮುಖ ಬದಲಾವಣೆ
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸತತ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿರುವ ಭಾರತ ಪ್ರಶಸ್ತಿ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದರೂ ನ್ಯೂಜಿಲೆಂಡ್ ಬಲಿಷ್ಠ ತಂಡವಾಗಿದ್ದು ಭಾರತಕ್ಕೆ ಸವಾಲು ಹಾಕಲು ಸಜ್ಜಾಗಿದೆ.
ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ಈಗಾಗಲೇ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದ್ದು ಆತ್ಮವಿಶ್ವಾಸದಿಂದಲೇ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಲೀಗ್ ಪಂದ್ಯದ ಸೋಲಿನಿಂದ ಪಾಠ ಕಲಿತಿರುವ ನ್ಯೂಜಿಲೆಂಡ್ ತಪ್ಪುಗಳನ್ನು ತಿದ್ದಿಕೊಂಡು ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಸೋಲಿನ ಶಾಕ್ ಕೊಡುವ ಉತ್ಸಾಹದಲ್ಲಿದೆ.

ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ ಫೈನಲ್ ಪ್ರವೇಶಿಸಿದೆ. ಸ್ಪಿನ್ನರ್ ವರುಣ್ ಚಕ್ರವರ್ತಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಅವಕಾಶ ಪಡೆದ ಬಳಿಕ ಭಾರತದ ಬೌಲಿಂಗ್ ಮತ್ತಷ್ಡು ಬಲಿಷ್ಠವಾಗಿದೆ.ಲೀಗ್ ಹಂತದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವರುಣ್ ಚಕ್ರವರ್ತಿ 5 ವಿಕೆಟ್ ಪಡೆಯುವ ಮೂಲಕ ಮಿಂಚಿದ್ದರು, ಫೈನಲ್ ಪಂದ್ಯದಲ್ಲೂ ಅವರೇ ಪ್ರಮುಖ ಬೌಲಿಂಗ್ ಅಸ್ತ್ರವಾಗುವ ಸಾಧ್ಯತೆ ಇದೆ.
ನ್ಯೂಜಿಲೆಂಡ್ ಕೋಚ್ ಕೂಡ ವರುಣ್ ಚಕ್ರವರ್ತಿ ನಮಗೆ ಸವಾಲು ಎಂದು ಹೇಳಿದ್ದರು. ಈ ಸವಾಲಿಗೆ ನಾವು ಸಜ್ಜಾಗಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಭಾರತದ ಬ್ಯಾಟಿಂಗ್ ಬಲಿಷ್ಠವಾಗಿದ್ದು ಎಲ್ಲರೂ ಫಾರ್ಮ್ ನಲ್ಲಿರುವುದು ತಂಡದ ವಿಶ್ವಾಸವನ್ನು ಹೆಚ್ಚಿಸಿದೆ.
ಉಭಯ ತಂಡಗಳ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.
ನ್ಯೂಜಿಲೆಂಡ್: ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಟಾಮ್ ಲಾಥಮ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ ವೆಲ್, ಮಿಚೆಲ್ ಸ್ಯಾಂಟ್ನರ್, ವಿಲಿಯಮ್ ಓ ರೂರ್ಕ್, ನಾಥನ್ ಸ್ಮಿತ್, ಕೈಲ್ ಜೇಮಿಸನ್.












Click it and Unblock the Notifications