LSG Vs PBKS: ಕನ್ನಡಿಗ ಕೆಎಲ್ ರಾಹುಲ್ ಬದಲು ನಿಕೋಲಸ್ ಪೂರನ್ ನಾಯಕತ್ವ ವಹಿಸಿಕೊಂಡಿದ್ದೇಕೆ?
ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯ 11ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ. ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಅಚ್ಚರಿ ಎನ್ನುವಂತೆ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ನಿಕೋಲಸ್ ಪೂರನ್ ನಾಯಕತ್ವ ವಹಿಸಿಕೊಂಡಿದ್ದಾರೆ.
ಟಾಸ್ ವೇಳೆ ಕೆಎಲ್ ರಾಹುಲ್ ಬದಲಾಗಿ ನಿಕೋಲಸ್ ಪೂರನ್ ನಾಯಕರಾಗಿ ಬಂದರು. ಟಾಸ್ ಗೆದ್ದ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಬಳಿಕ ಮಾತನಾಡಿದ ಪೂರನ್, ಕೆಎಲ್ ರಾಹುಲ್ ಅವರಿಗೆ ವಿಶ್ರಾಂತಿ ನೀಡಲು ನಿರ್ಧರಿಸುವುದಾಗಿ ಹೇಳಿದರು.

"ನಾವು ಮೊದಲು ಬ್ಯಾಟ್ ಮಾಡುತ್ತೇವೆ. ಉತ್ತಮ ಪಿಚ್ ಎನ್ನುವಂತೆ ಕಾಣುತ್ತಿದೆ. ಉತ್ತಮ ರನ್ ಕಲೆಹಾಕಿದರೆ ಗೆಲ್ಲುವ ಸಾಧ್ಯತೆ ಇದೆ. ಕೆಎಲ್ ರಾಹುಲ್ ಗಾಯದಿಂದ ಹಿಂತಿರುಗುತ್ತಿದ್ದಾರೆ. ಐಪಿಎಲ್ ಸುದೀರ್ಘ ಪಂದ್ಯಾವಳಿಯಾಗಿದ್ದು ನಾವು ಅವರಿಗೆ ವಿಶ್ರಾಂತಿ ನೀಡಲು ಬಯಸುತ್ತೇವೆ, ಆದರೆ ಅವರು ಇಂದು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡುತ್ತಾರೆ. ಪ್ರತಿಯೊಬ್ಬರೂ ಅವಕಾಶಗಳನ್ನು ಪಡೆದುಕೊಂಡು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಬೇಕು." ಎಂದು ಹೇಳಿದರು.
ಫೀಲ್ಡಿಂಗ್‌ನಿಂದ ವಿಶ್ರಾಂತಿ
ನಿಕೋಲಸ್ ಪೂರನ್ ಹೇಳಿಕೆ ಪ್ರಕಾರ ಕೆಎಲ್ ರಾಹುಲ್ ಬ್ಯಾಟಿಂಗ್ ಮಾಡಲಿದ್ದು ಬಳಿಕ ಅವರು ವಿಶ್ರಾಂತಿ ಪಡೆಯಲಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡಲಿದ್ದು, ಬೌಲಿಂಗ್ ವೇಳೆಯಲ್ಲಿ ಪೂರನ್ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.
ಗಾಯದ ಸಮಸ್ಯೆ
ಕೆಎಲ್ ರಾಹುಲ್ ಅವರಿಗೆ ಗಾಯದ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯದ ಬಳಿಕ ಅವರು ಗಾಯದ ಸಮಸ್ಯೆಯಿಂದ ನಾಲ್ಕು ಪಂದ್ಯಗಳನ್ನು ಕಳೆದುಕೊಂಡರು.
ಐಪಿಎಲ್ ವೇಳೆಗೆ ಫಿಟ್ ಆಗಿದ್ದು, ರಾಜಸ್ಥಾನ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಅರ್ಧಶತಕ ಕೂಡ ಗಳಿಸಿದ್ದರು. 44 ಎಸೆತಗಳಲ್ಲಿ 4 ಬೌಂಡರಿ 2 ಸಿಕ್ಸರ್ ಸಹಿತ 58 ರನ್ ಗಳಿಸಿದ್ದು ಉತ್ತಮ ಫಾರ್ಮ್‌ನಲ್ಲಿದ್ದಾರೆ. ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿ ಆಡಲು ಕಣ್ಣಿಟ್ಟಿದ್ದು ಅದಕ್ಕಾಗಿ ಫಿಟ್‌ನೆಸ್ ಬಗ್ಗೆ ಕೂಡ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ.
ಮೊದಲ ಪಂದ್ಯದಲ್ಲಿ ಸೋತಿರುವ ಲಕ್ನೋ ಸೂಪರ್ ಜೈಂಟ್ಸ್ ಎರಡನೇ ಪಂದ್ಯವನ್ನು ತವರಿನ ಅಂಗಳದಲ್ಲಿ ಆಡುತ್ತಿದ್ದು, ಗೆಲುವಿನ ಖಾತೆ ತೆರೆಯುವ ವಿಶ್ವಾಸದಲ್ಲಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications