Get Updates
Get notified of breaking news, exclusive insights, and must-see stories!

Nuwan Thushara: ಆರ್‌ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ

Nuwan Thushara: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಟವಾಡುವುದಕ್ಕೆ ತಂಡದ ಸ್ಟಾರ್ ಆಟಗಾರ ನುವಾನ್ ತುಷಾರ ಅವರು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದಿದ್ದಾರೆ. ಇದು ಹಲವು ಕಾರಣಗಳಿಗೆ ಕುತೂಹಲ ಮೂಡಿಸಿದೆ. ಈ ಬಾರಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹೊಸ ಹುರುಪಿನಿಂದ ಬಂದಿದೆ. ತಂಡದಲ್ಲಿ ಎಲ್ಲರಿ ಅವರವರ ಜವಾಬ್ದಾರಿಯ ಬಗ್ಗೆ ತಿಳಿದಿದೆ. ತಂಡವು ಹೊಸ ಚೈತನ್ಯ ಪಡೆದುಕೊಂಡಿದೆ ಎಂದು ಆರ್‌ಸಿಬಿಯ ಮತ್ತೊಬ್ಬ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯ ಅವರು ಹೇಳಿದ್ದರು. ಈ ನಡುವೆ ಸ್ಟಾರ್ ಆಟಗಾರ, ವೇಗಿ ನುವಾನ್ ತುಷಾರ ಅವರಿಗೆ ಶ್ರೀಲಂಕಾ ಕ್ರಿಕೆಟ್ ತಂಡದಿಂದ ಸಂಕಷ್ಟ ಎದುರಾಗಿದೆ. ಇದಕ್ಕೆ ಅವರು ತಮ್ಮ ದೇಶದ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದಿದ್ದಾರೆ. ಈ ಸಂಬಂಧ ಶ್ರೀಲಂಕಾ ಮೂಲದ ಮಾಧ್ಯಮ ಸಂಸ್ಥೆ ನ್ಯೂಸ್‌ವೈರ್ ವರದಿ ಮಾಡಿದೆ.

2026ರ ಐಪಿಎಲ್‌ನಲ್ಲಿ ಆಟವಾಡುವುದಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡದೆ ಇರುವುದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನುವಾನ್ ತುಷಾರ ಅವರು ಶ್ರೀಲಂಕಾ ಕ್ರಿಕೆಟ್‌ನ ಉನ್ನತ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಐಪಿಎಲ್ 2026 ರಲ್ಲಿ ಭಾಗವಹಿಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡದೆ ಇರುವುದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಶ್ರೀಲಂಕಾದ ವೇಗಿ ನುವಾನ್ ತುಷಾರ ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಉನ್ನತ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

Nuwan Thushara

ನಿಗದಿತ ಫಿಟ್‌ನೆಸ್ ಮಾನದಂಡಗಳನ್ನು ಪೂರೈಸಲು ವಿಫಲರಾಗಿರುವ ಕಾರಣಕ್ಕೆ ತುಷಾರ ಅವರಿಗೆ ಎನ್‌ಒಸಿ ನೀಡಲಾಗಿಲ್ಲ. ಆದರೆ ಈಗ, ವೇಗಿ ಐಪಿಎಲ್‌ನಲ್ಲಿ ಆಡಲು ಅವಕಾಶ ನೀಡುವಂತೆ ಎಸ್‌ಎಲ್‌ಸಿಗೆ ನಿರ್ದೇಶನ ನೀಡುವಂತೆ ಕೋರಿ ಪ್ರಕರಣ ದಾಖಲಿಸಿದ್ದಾರೆ. ವರದಿಯ ಪ್ರಕಾರ, ತುಷಾರ ತಮ್ಮ ಒಪ್ಪಂದವನ್ನು ನವೀಕರಿಸದಿರಲು ಸಹ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಈ ವರದಿಯ ಪ್ರಕಾರ, ತುಷಾರ ಅವರು ಶ್ರೀಲಂಕಾ ಕ್ರಿಕೆಟ್ ಅಧ್ಯಕ್ಷ ಶಮ್ಮಿ ಸಿಲ್ವಾ, ಕಾರ್ಯದರ್ಶಿ ಬಂಡುಲಾ ದಿಸನಾಯಕ, ಖಜಾಂಚಿ ಸುಜೀವ ಗೋಡಲಿಯಡ್ಡ ಹಾಗೂ ಕ್ರಿಕೆಟ್ ಮಂಡಳಿಯ ಸಿಇಒ ಆಶ್ಲೇಡಿ ಸಿಲ್ವಾ ಅವರರ ಹೆಸರನ್ನು ತಮ್ಮ ದೂರಿನಲ್ಲಿ ಪ್ರತಿವಾದಿಗಳಾಗಿ ಹೆಸರಿಸಿದ್ದಾರೆ. ಏಪ್ರಿಲ್ 9 ರಂದು ವಿಚಾರಣೆಯನ್ನು ನಿಗದಿಪಡಿಸಲಾಗಿದ್ದು, ಗುರುವಾರ ಕೊಲಂಬೊ ಜಿಲ್ಲಾ ನ್ಯಾಯಾಲಯವು ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ತುಷಾರ ಅವರು ಶ್ರೀಲಂಕಾ ಕ್ರಿಕೆಟ್ ಮಂಡಳಿಯೊಂದಿಗಿನ ತಮ್ಮ ಒಪ್ಪಂದವು ಮಾರ್ಚ್ 31 ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಿದ್ದಾರೆ. ಅಲ್ಲದೆ ತಮ್ಮ ಒಪ್ಪಂದವನ್ನು ನವೀಕರಿಸದಿರಲು ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿಯುವ ತಮ್ಮ ಇಚ್ಛೆಯನ್ನು ಮಂಡಳಿಗೆ ತಿಳಿಸಿದ್ದರು ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಒಂದೊಮ್ಮೆ ನವೀಕರಣ ಆಗದಿದ್ದರೆ ಆರ್‌ಸಿಬಿಗೆ ಆಡುವುದಕ್ಕಾಗಿ ಅವರ ದೇಶದ / ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನೇ ತೊರೆಯಬೇಕಾದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ.

ಇನ್ನು ತುಷಾರ ಅವರು ತಮ್ಮ ವೃತ್ತಿಜೀವನದ ಬಹುಪಾಲು ಫಿಟ್‌ನೆಸ್ ಮಟ್ಟವು ಒಂದೇ ಆಗಿದೆ ಎಂದು ಹೇಳಿದ್ದಾರೆ. ಇದು ಹಿಂದೆ ಎನ್‌ಒಸಿ ಪಡೆಯುವ ಸಾಧ್ಯತೆಗಳಿಗೆ ಅಡ್ಡಿಯಾಗಲಿಲ್ಲ. ಈ ಷರತ್ತುಗಳ ಪರಿಣಾಮವಾಗಿ, ತುಷಾರ ಅವರು ಎನ್‌ಒಸಿ ನೀಡದಿರುವ ನಿರ್ಧಾರವನ್ನು ನ್ಯಾಯಸಮ್ಮತವಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಇದೇ ಕಾರಣಕ್ಕೆ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ.

Krunal Pandya: ವಿರಾಟ್ ಕೊಹ್ಲಿ - 2026ರ ಆರ್‌ಸಿಬಿ ತಂಡದ ಬಗ್ಗೆ ಸ್ಟಾರ್‌ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್
Krunal Pandya: ವಿರಾಟ್ ಕೊಹ್ಲಿ - 2026ರ ಆರ್‌ಸಿಬಿ ತಂಡದ ಬಗ್ಗೆ ಸ್ಟಾರ್‌ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್

ಆರ್‌ಸಿಬಿಯೊಂದಿಗೆ ನುವಾನ್ ತುಷಾರ

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶ್ರೀಲಂಕಾದ ಆಟಗಾರ ನುವಾನ್ ತುಷಾರ ಅವರನ್ನು 2025ರಲ್ಲಿ 1.6 ಕೋಟಿ ರೂ. ಬಿಡ್ ಮಾಡಿದೆ. ತಂಡವು IPL 2025 ಪ್ರಶಸ್ತಿಯನ್ನು ಎತ್ತಿಹಿಡಿಯುವಲ್ಲಿ / ತಂಡದಲ್ಲಿ ಒಂದು ಪಂದ್ಯವನ್ನು ಆಡಿರುವುದಾಗಿಯೂ, ಎನ್‌ಒಸಿ ಪಡೆಯಲು ವಿಫಲವಾದರೆ ಅವರಿಗೆ ಗಮನಾರ್ಹ ಆರ್ಥಿಕ ಮತ್ತು ಅವಕಾಶ ನಷ್ಟವಾಗುತ್ತದೆ ಎಂದೂ ಅವರು ನ್ಯಾಯಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ವರದಿಯಾಗಿದೆ. ಏತನ್ಮಧ್ಯೆ, ಆರ್‌ಸಿಬಿ ಐಪಿಎಲ್ 2026 ರಲ್ಲಿ ತನ್ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಸೋಲಿಸುವ ಮೂಲಕ ವಿಜಯಶಾಲಿಯಾಗಿ ಆರಂಭ ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+