ODI World Cup 2023: ಏಕದಿನ ವಿಶ್ವಕಪ್‌ನಲ್ಲಿ ಎಲ್ಲಾ 10 ತಂಡಗಳ ಮಾಹಿತಿ
ಏಕದಿನ ವಿಶ್ವಕಪ್ 2023ರ ಪಂದ್ಯಾವಳಿಗೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 5ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯಾವಳಿಗೆ ಚಾಲನೆ ಸಿಗಲಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಈಗಾಗಲೇ ಎಲ್ಲಾ 10 ದೇಶಗಳು ತಮ್ಮ 15 ಸದಸ್ಯರ ತಂಡವನ್ನು ಪ್ರಕಟಿಸಿವೆ. ಆಸ್ಟ್ರೇಲಿಯಾ ಸೆಪ್ಟೆಂಬರ್ 28ರಂದಯ ತಂಡದಲ್ಲಿ ಒಂದು ಬದಲಾವಣೆ ಮಾಡಿದೆ. ಅಷ್ಟನ್ ಅಗರ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿಯಲಿದ್ದು ಮಾರ್ನಸ್ ಲ್ಯಾಬುಸ್ಚಾಗ್ನೆ ಅವಕಾಶ ಪಡೆದುಕೊಂಡಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಅಂತಿಮ 15 ಸದಸ್ಯರ ತಂಡವನ್ನು ಘೋಷಿಸಲು 3 ಗಡುವನ್ನು ನಿಗದಿಪಡಿಸಿತ್ತು. ಸೆಪ್ಟೆಂಬರ್ 28ರೊಳಗೆ ತಂಡದಲ್ಲಿ ಬದಲಾವಣೆ ಮಾಡಲು ಅವಕಾಶ ನೀಡಲಾಗಿತ್ತು, ಸೆಪ್ಟೆಂಬರ್ 28ರ ಬಳಿಕ ತಂಡದಲ್ಲಿ ಬದಲಾವಣೆ ಮಾಡಲು ಐಸಿಸಿ ಅನುಮೋದನೆ ಪಡೆಯುವ ಅಗತ್ಯ ಇರುತ್ತದೆ.
ಏಕದಿನ ವಿಶ್ವಕಪ್ ತಂಡಗಳು
1) ಆಸ್ಟ್ರೇಲಿಯಾ : ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಜಂಪಾ, ಮಿಚೆಲ್ ಸ್ಟಾರ್ಕ್.
2) ಅಫ್ಘಾನಿಸ್ತಾನ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಷಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಅಬ್ದುಲ್ ರಹ್ಮಾನ್, ನವೀನ್ ಉಲ್ ಹಕ್.
3) ಬಾಂಗ್ಲಾದೇಶ : ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ಕುಮರ್ ದಾಸ್, ತಂಝೀದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ (ವಿಕೆಟ್ ಕೀಪರ್), ತೌಹಿದ್ ಹೃದೋಯ್, ಮುಶ್ಫಿಕರ್ ರಹೀಮ್, ಮಹ್ಮುದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೆದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹ್ಮುದ್, ಶೋರಿಫುಲ್ ಇಸ್ಲಾಂ, ತಂಝೀಮ್ ಹಸನ್ ಸಾಕಿಬ್.
4) ಇಂಗ್ಲೆಂಡ್ : ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್ .
5) ಭಾರತ : ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.
6) ನೆದರ್ಲೆಂಡ್ಸ್ : ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ'ಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್‌ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.
7) ನ್ಯೂಜಿಲೆಂಡ್ : ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.
8) ಪಾಕಿಸ್ತಾನ : ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ.
9) ದಕ್ಷಿಣ ಆಫ್ರಿಕಾ : ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆಂಡಿಲ್ ಫೆಹ್ಲುಕ್ವಾಯೊ, ಕಗಿಸೊ ರಬಾಡಾ, ತಬ್ರೈಜ್ ಶಮ್ಸಿ, ರಾಸಿ ವಾನ್ ಡಾರ್ ಡುಸ್ಸೆನ್.
10) ಶ್ರೀಲಂಕಾ: ದಸುನ್ ಶನಕ (ನಾಯಕ), ಕುಸಲ್ ಮೆಂಡಿಸ್ (ಉಪ ನಾಯಕ), ಕುಶಾಲ್ ಪೆರೇರಾ, ಪಾತುಂ ನಿಸ್ಸಾಂಕ, ದಿಮುತ್ ಕರುಣಾರತ್ನ, ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದುಶನ್ ಹೇಮಂತ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ಮತೀಶ ಪತಿರಾನ, ಲಾಹಿರು ಕುಮಾರ, ದಿಲ್ಶಾನ್ ಮಧುಶಂಕ.












Click it and Unblock the Notifications