ODI World Cup Points Table: ಮೊದಲ ಸ್ಥಾನದಲ್ಲಿ ಭಾರತ, ಕೊನೆ ಸ್ಥಾನದಲ್ಲಿ ಆಸ್ಟ್ರೇಲಿಯಾ!

ಐದು ಬಾರಿ ವಿಶ್ವಕಪ್ ಗೆದ್ದು ಕ್ರಿಕೆಟ್‌ ಜಗತ್ತನ್ನೇ ಆಳಿದ್ದ ಆಸ್ಟ್ರೇಲಿಯಾ ಇದೇ ಮೊದಲ ಬಾರಿ ಏಕದಿನ ವಿಶ್ವಕಪ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿತ ಕಂಡಿದ್ದು ಆಘಾತ ಅನುಭವಿಸಿದೆ. ಭಾನುವಾರ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ಪಂದ್ಯದ ನಂತರ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿತ ಕಂಡಿದೆ.

ಭಾನುವಾರ ಏಕದಿನ ವಿಶ್ವಕಪ್ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಮಣಿಸಿದ ಅಫ್ಘಾನಿಸ್ತಾನ ವಿಶ್ವ ಕ್ರಿಕೆಟ್‌ ಅನ್ನು ಅಚ್ಚರಿಗೊಳಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ಇಂಗ್ಲೆಂಡ್ ವಿರುದ್ಧ 69 ರನ್‌ಗಳ ಗೆಲುವು ಸಾಧಿಸಿತು.

 ODI World Cup Points Table: India on Top, Asutralia Slips To No 10

ಇಂಗ್ಲೆಂಡ್ ವಿರುದ್ಧ ಗೆದ್ದ ಬಳಿಕ ಅಫ್ಘಾನಿಸ್ತಾನ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ. ಮೂರು ಪಂದ್ಯಗಳನ್ನಾಡಿರುವ ಅಫ್ಘಾನಿಸ್ತಾನ ಒಂದು ಪಂದ್ಯವನ್ನು ಗೆದ್ದಿದೆ, ಎರಡೂ ಪಂದ್ಯಗಳನ್ನು ಭಾರಿ ಅಂತರದಲ್ಲಿ ಸೋತ ಕಾರಣ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿಯಲು ಕಾರಣವಾಗಿದೆ. ಭಾನುವಾರದ ಪಂದ್ಯಕ್ಕೂ ಮುನ್ನ ಅಫ್ಘಾನಿಸ್ತಾನ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡಿತ್ತು. ಇಂಗ್ಲೆಂಡ್ ವಿರುದ್ಧದ ಅವರ ಐತಿಹಾಸಿಕ ಗೆಲುವು ಅವರನ್ನು ಆರನೇ ಸ್ಥಾನಕ್ಕೆ ಏರಿಸಿತು.

ಅಗ್ರಸ್ಥಾನದಲ್ಲಿ ಭಾರತ

ಇನ್ನು ಭಾರತ ತಂಡ ಈ ಬಾರಿ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮೂರು ಪಂದ್ಯಗಳನ್ನು ಗೆದ್ದಿರುವ ಭಾರತ 6 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಪಾಕಿಸ್ತಾನದ ವಿರುದ್ಧ 7 ವಿಕೆಟ್‌ಗಳಿಂದ ಗೆದ್ದ ಬಳಿಕ, ಭಾರತ ಅಗ್ರಸ್ಥಾನಕ್ಕೇರಿತು.

ಅಕ್ಟೋಬರ್ 19ರಂದು ಭಾರತ ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದ್ದು, ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಭಾರತದ ಸೆಮಿಫೈನಲ್ ಹಾದಿ ಮತ್ತಷ್ಟು ಸುಲಭವಾಗಲಿದೆ.

ಇಂದು ಗೆದ್ದರೆ ಆಸ್ಟ್ರೇಲಿಯಾ 7ನೇ ಸ್ಥಾನಕ್ಕೆ

ಸೋಮವಾರ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ ಆಡಲಿದ್ದು ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಏರಲಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಎರಡೂ ತಂಡಗಳು ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ.

ಯಾವ ತಂಡಗಳಿಗೆ ಯಾವ ಸ್ಥಾನ

ಭಾರತ ಮೊದಲ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ತಂಡ ಮೂರನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ. ಇಂಗ್ಲೆಂಡ್ 5ನೇ ಸ್ಥಾನ, ಅಫ್ಘಾನಿಸ್ತಾನ 6ನೇ ಸ್ಥಾನ, ಬಾಂಗ್ಲಾದೇಶ 7ನೇ ಸ್ಥಾನ, ಶ್ರೀಲಂಕಾ 8ನೇ ಸ್ಥಾನ, ನೆದರ್ಲ್ಯಾಂಡ್ಸ್ 9 ಮತ್ತು ಆಸ್ಟ್ರೇಲಿಯಾ 10ನೇ ಸ್ಥಾನದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+