ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಕೊಲೆ, ಗಲಭೆ, ಕ್ರಿಮಿನಲ್ ಕೇಸ್‌ ದಾಖಲು

|
Google Oneindia Kannada News

ಹೊಸದಿಲ್ಲಿ, ಅಕ್ಟೋಬರ್ 12: ಛತ್ರಸಾಲ್ ಸ್ಟೇಡಿಯಂ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಇತರ 17 ಮಂದಿ ವಿರುದ್ಧ ದೆಹಲಿ ನ್ಯಾಯಾಲಯವು ಬುಧವಾರ ಕೊಲೆ ಆರೋಪಗಳನ್ನು ಹೊರಿಸಿದ್ದು, ಪ್ರಕರಣದ ವಿಚಾರಣೆ ಆರಂಭವಾಗಿದೆ.

ಇಂದು ನ್ಯಾಯಾಲಯದಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶಿವಾಜಿ ಆನಂದ್ ಅವರು, ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಇತರ ಆರೋಪಿಗಳ ವಿರುದ್ಧ ಕೊಲೆ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ರಚಿಸಿದ್ದು ಕೇಸ್‌ ದಾಖಲಿಸಲಾಗಿದೆ ಹಾಗೂ ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.

ಛತ್ರಸಾಲ್ ಸ್ಟೇಡಿಯಂ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಇತರ 17 ಮಂದಿ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ ಆರೋಪಗಳನ್ನು ಹೊರಿಸಿದೆ. 2021ರ ಮೇ 4ರಂದು ನಗರದ ಛತ್ರಸಾಲ್ ಸ್ಟೇಡಿಯಂನ ಪಾರ್ಕಿಂಗ್ ಪ್ರದೇಶದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧಂಖರ್ ಮತ್ತು ಅವರ ಸ್ನೇಹಿತರ ಮೇಲೆ ಆಸ್ತಿ ವಿವಾದದಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಕುಮಾರ್ ಮತ್ತು ಇತರರು ಆರೋಪಿಸಿದ್ದಾರೆ.

Olympian Sushil Kumar to face murder trial for wrestler Sagar Dhankars death

ಜೂನಿಯರ್ ಕುಸ್ತಿಪಟು ಸಾಗರ್ ಧಂಖರ್ ಕೊಲೆ ಪ್ರಕರಣ
ಜೂನಿಯರ್ ಕುಸ್ತಿಪಟು ಸಾಗರ್ (23) ಅವರನ್ನು ಸುಶೀಲ್ ಕುಮಾರ್ ಮತ್ತು ಇತರ ಕುಸ್ತಿಪಟುಗಳೊಂದಿಗೆ 4 ಮೇ 2021ರ ರಾತ್ರಿ ಛತ್ರಸಾಲ್ ಕ್ರೀಡಾಂಗಣದಲ್ಲಿ ಅಪಹರಿಸಿ ಥಳಿಸಿ ಸಾಗರ್ ಅವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪದಡಿ ಸುಶೀಲ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದರು.

Olympian Sushil Kumar to face murder trial for wrestler Sagar Dhankars death

ಸಾಗರ್ ಧಂಖರ್ ಕೊಲೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಕುಸ್ತಿಪಟು ಮತ್ತು ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಸೇರಿದಂತೆ 20 ಜನರ ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ಇತರ ಪ್ರಕರಣಗಳಲ್ಲಿ ಆರೋಪಗಳನ್ನು ರೂಪಿಸಿದೆ. ಈ ಪೈಕಿ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಎಲ್ಲರ ಮೇಲೂ ಕೊಲೆ, ಕೊಲೆ ಯತ್ನ, ಗಲಭೆ, ಕಾನೂನುಬಾಹಿರ ಸಭೆ ಮತ್ತಿತರ ಆರೋಪಗಳನ್ನು ಹೊರಿಸಲಾಗಿದೆ.

English summary
Chhatrasal Stadium murder case: Olympian Sushil Kumar to face murder trial for wrestler Sagar Dhankar's death Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X