Olympics 2024: ಭಾರತಕ್ಕೆ ಮತ್ತೊಂದು ಕಂಚಿನ ಪದಕ-ಯಾವ ವಿಭಾಗದಲ್ಲಿ?
Olympics 2024: ಪ್ಯಾರಿಸ್ ಒಲಿಂಪಿಕ್ಸ್ 2024 ಭಾರತೀಯ ಪುರುಷರ ಹಾಕಿ ತಂಡವು ಸ್ಪೇನ್ ವಿರುದ್ಧ 2-1 ಗೋಲುಗಳಿಂದ ಭರ್ಜರಿ ಗೆಲುವು ಸಾಧಿಸಿದ್ದು, ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದೆ. ಈ ಮೂಲಕ ಭಾರತಕ್ಕೆ ನಾಲ್ಕನೇ ಕಂಚಿನ ಪದಕ ಬಂದಂತಾಗಿದೆ.
ಪ್ಯಾರಿಸ್ ಒಲಿಂಪಿಕ್ಸ್ನ ಭಾರತದ ಪದಕಗಳ ಪಟ್ಟಿಗೆ ಮತ್ತೊಂದು ಸೇರ್ಪಡೆ ಆಗಿದ್ದು, ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ತಂಡ ಹಾಕಿ ಒಂದ್ಯದಲ್ಲಿ ಕಂಚಿನ ಪದಕ ಗೆದ್ದುಕೊಂಡಿದೆ.

ಪಂದ್ಯದ ಮೊದಲ ಕ್ವಾರ್ಟರ್‌ನಲ್ಲಿ ಎರಡೂ ತಂಡಗಳು ಗೋಲ್ ರಹಿತ ಆಟವನ್ನು ಆಡಿದ್ದು, ಆದರೆ 2ನೇ ಕ್ವಾರ್ಟ್ ಸ್ಪೇನ್ ತಂಡದ ನಾಯಕ ಮಾರ್ಕ್ ಮಿರಾಲೆಸ್ 11ನೇ ನಿಮಿಷದಲ್ಲಿ ಗೋಲು ಬಾರಿಸಿದರು. ಇದರೊಂದಿಗೆ ಸ್ಪೇನ್ ಮುನ್ನಡೆಯನ್ನು ಪಡೆದುಕೊಂಡಿತು.
ಆದರೆ ಸ್ವಲ್ಪ ಹೊತ್ತಿನಲ್ಲಿಯೇ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಗೋಲು ಬಾರಿಸುವ ಮೂಲಕ ಸಮಬಲಗೊಳ್ಳುವಂತೆ ಮಾಡಿದರು. ಮೂರನೇ ಕ್ವಾರ್ಟರ್‌ನಲ್ಲಿ ಮತ್ತೊಂದು ಗೋಲ್ ಬಾರಿಸಿ ಅವರು ಮುನ್ನಡೆ ತಂದುಕೊಟ್ಟರು. ಅದೇ ಮುನ್ನಡೆಯನ್ನು ಕೊನೇ ತನಕ ಉಳಿಸಿಕೊಂಡು ತಂಡ ಗೆಲುವು ಸಾಧಿಸಿತು.
ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ತೋರಿದ ನಾಯಕ ಹರ್ಮನ್‌ಪ್ರೀತ್ ಸಿಂಗ್, ಕಂಚಿನ ಪದಕದ ಪಂದ್ಯದಲ್ಲೂ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಈ ಪಂದ್ಯದಲ್ಲೂ ನಾಯಕ ಹರ್ಮನ್‌ಪ್ರೀತ್ ಸಿಂಗ್ ಎರಡೂ ಗೋಲುಗಳನ್ನು ಬಾರಿಸಿ ತಂಡವನ್ನು ಕಂಚಿನ ಪದಕ ಗೆಲುವಿನತ್ತ ತೆಗೆದುಕೊಂಡು ಹೋದರು.
ಇನ್ನು ಪಂದ್ಯದ ಕೊನೆಯವರೆಗೂ ಶ್ರೀಜೇಶ್ ಅತ್ಯುತ್ತಮ ಪ್ರದರ್ಶನ ನೀಡಿ ಎದುರಾಳಿಗಳ ಅಬ್ಬರದ ಹೊಡೆತಗಳನ್ನು ತಡೆದು ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅಷ್ಟೇ ಅಲ್ಲದೆ, ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಕೂಡ 10 ಗೋಲು ಬಾರಿಸುವ ಮೂಲಕ ತಂಡಕ್ಕೆ ಆಸರೆ ಆದರು. ಈ ಮೂಲಕ ಸ್ಪೇನ್ ತಂಡವನ್ನು ಸೋಲಿಸಿ ಕಂಚಿನ ಪದಕ ಮುಡಿಗೇರಿಸಿಕೊಂಡರು.
ಭಾರತದ ಅನುಭವಿ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ ಕೊನೆಯ ಕ್ವಾರ್ಟರ್‌ನಲ್ಲಿ ಅದ್ಭುತ ಪ್ರದರ್ಶನ್ ತೋರಿದರು. ಕೊನೇ ನಿಮಿಷದಲ್ಲಿ ಎರಡು ಗೋಲುಗಳನ್ನು ಉಳಿಸುವ ಮೂಲಕ ಭಾರತ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು. ಇನ್ನು ಈ ಒಲಿಂಪಿಕ್ಸ್ ಪಿ.ಆರ್.ಶ್ರೀಜೇಶ್ʼಗೆ ಅಂತಿಮ ಪಂದ್ಯ ಆಗಿದ್ದು, ಈಗಾಗಲೇ ಅವರು ವಿದಾಯ ಘೋಷಣೆ ಮಾಡಿದ್ದಾರೆ.












Click it and Unblock the Notifications