Olympics 2028 Cricket Venue: ಲಾಸ್ ಏಂಜಲೀಸ್ ಒಲಿಂಪಿಕ್ಸ್; ಕ್ರಿಕೆಟ್ ಪ್ರಿಯರಿಗೆ ಬಹುದೊಡ್ಡ ಸಿಹಿಸುದ್ದಿ ಕೊಟ್ಟ ಐಸಿಸಿ
Olympics 2028: ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಯಾದ ಬಳಿಕ ಅದರ ಆಯೋಜನೆಗೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. 2028ರ ಓಲಿಂಪಿಕ್ಸ್ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿದೆ. ಇದಕ್ಕೂ ಮುಂಚೆಯೇ ಐಸಿಸಿ ಕ್ರಿಕೆಟ್ ಪ್ರಿಯರಿಗೆ ದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸ್ಥಳವನ್ನು ಘೋಷಣೆ ಮಾಡಿದೆ. ಹಾಗಾದ್ರೆ ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಕಾಣಿಸಿಕೊಳ್ಳುತ್ತಿದೆ. ಪಂದ್ಯಗಳು ಕ್ಯಾಲಿಫೋರ್ನಿಯಾದ ಪೊಮೊನಾದ ಫೇರ್‌ಪ್ಲೆಕ್ಸ್‌ನಲ್ಲಿ ನಡೆಯಲಿವೆ. ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ತಲಾ 6 ತಂಡಗಳು ಟಿ-20 ರೂಪದಲ್ಲಿ ಪದಕಕ್ಕಾಗಿ ಸೆಣಸಲಿವೆ. ಇನ್ನು ಈ ಪಂದ್ಯಾವಳಿಗೆ ಅರ್ಹತಾ ಮಾನದಂಡಗಳನ್ನು ನಿರ್ಧರಿಸಬೇಕಾಗಿದೆ.

ಸುಮಾರು 128 ವರ್ಷಗಳ ನಂತರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಮತ್ತೆ ಕಾಣಿಸಿಕೊಳ್ಳುತ್ತಿದೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಈ ಕ್ರೀಡೆಯನ್ನು ಅಧಿಕೃತವಾಗಿ ಸೇರ್ಪಡೆ ಮಾಡಲಾಗಿದೆ. ಕ್ಯಾಲಿಫೋರ್ನಿಯಾದ ಪೊಮೊನಾ ನಗರದಲ್ಲಿ 500 ಹೆಕ್ಟೇರ್ ವಿಸ್ತೀರ್ಣದ ಮೈದಾನದಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯಲಿವೆ ಎಂಬ ಮಾಹಿತಿಯನ್ನು ಐಸಿಸಿ ಮಾಹಿತಿ ಹಂಚಿಕೊಂಡಿದೆ.
ಪೊಮೋನಾದಲ್ಲಿ ಕ್ರಿಕೆಟ್ ಆಡಲಾಗುವ ಮೈದಾನವನ್ನು ಫೇರ್‌ಪ್ಲೆಕ್ಸ್ ಎಂದೂ ಕರೆಯುತ್ತಾರೆ. ಅಲ್ಲಿ ಕ್ರಿಕೆಟ್ ಅಥವಾ ಯಾವುದೇ ಇತರ ಕ್ರೀಡೆಗೆ ಈಗಾಗಲೇ ಇರುವ ಯಾವುದೇ ಸಂಕೀರ್ಣ ಇಲ್ಲ. ಸಾಮಾನ್ಯವಾಗಿ ಇದನ್ನು ಮೇಳಗಳನ್ನು ಆಯೋಜಿಸಲು ಬಳಕೆ ಮಾಡಲಾಗುತ್ತಿತ್ತು. ಈ ಮೈದಾನದಲ್ಲಿ 103 ವರ್ಷಗಳಿಂದ ಲಾಸ್ ಏಂಜಲೀಸ್ ಕೌಂಟಿ ಮೇಳವನ್ನು ಆಯೋಜನೆ ಮಾಡಿಕೊಂಡು ಬರುತ್ತಿದೆ.
Cricket 🤝 West Coast.
— LA28 (@LA28) April 15, 2025
Cricket will make its triumphant Olympic return in 2028 from the Fairgrounds in Pomona, CA. 128 years in the making, we can't wait to see the cricketers out on the oval in SoCal.@ICC | #LA28 pic.twitter.com/gyKoMQeCD7
ಆದರೆ ಇದೀಗ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಯಾದ ಹಿನ್ನೆಲೆ, ಇಲ್ಲಿ ಕ್ರಿಕೆಟ್‌ಗಂತಲೇ ತಾತ್ಕಾಲಿಕ ಸ್ಥಳವನ್ನು ಸಿದ್ಧಪಡಿಸಲಾಗುತ್ತಿದೆ. 2024ರಲ್ಲಿ ನಡೆದಿದ್ದ ಟಿ-20 ವಿಶ್ವಕಪ್‌ಗೆ ಅಮೆರಿಕಾ ಆತಿಥ್ಯ ವಹಿಸಿತ್ತು. ಆ ವೇಳೆ ಉದ್ಯಾನವನ ಪ್ರದೇಶದಲ್ಲಿ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗಿತ್ತು.
ಇನ್ನು ಒಲಿಂಪಿಕ್ಸ್ ಆಯೋಜನೆ ಮಾಡುವ ಸಮಿತಿಯು ಕ್ರಿಕೆಟ್ ಪಂದ್ಯಾವಳಿ ನಡೆಯುವ ಸ್ಥಳದ ಬಗ್ಗೆ ಮಾಹಿತಿ ನೀಡುವ ಪೋಸ್ಟರ್ ಅನ್ನು ಕೂಡ ಹಂಚಿಕೊಂಡಿದ್ದು, ಇದರಲ್ಲು ವಿರಾಟ್ ಕೊಹ್ಲಿ ಒಬ್ಬರದ್ದೇ ಭಾವಚಿತ್ರವನ್ನು ಹಂಚಿಕೊಳ್ಳಲಾಗಿದೆ. ಇದರಿಂದ ಕೊಹ್ಲಿ ಅಭಿಮಾನಿಗಳು ಸಂತಗೊಂಡಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಪ್ರಮುಖ ಕಾರಣವೇ ಕೊಹ್ಲಿ ಅವರಿಗೆ ಹೆಚ್ಚು ಅಭಿಮಾನಿಗಳಿದ್ದಾರೆ. ಆದ್ದರಿಂದ ಅವರ ಪೋಸ್ಟರ್‌ನಲ್ಲಿ ಅವರ ಫೋಟೋ ಮಾತ್ರ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಲಾಸ್ ಏಂಜಲೀಸ್ ಒಲಿಂಪಿಕ್ಸ್ 2028 ರಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ತಲಾ 6 ತಂಡಗಳನ್ನು ಸೇರಿಸಲು ಒಪ್ಪಿಗೆ ಸೂಚಿಸಿತ್ತು. ಈ ತಂಡಗಳು ಪದಕಗಳಿಗಾಗಿ ಟಿ-20 ಸ್ವರೂಪದಲ್ಲಿ ಸ್ಪರ್ಧಿಸಬೇಕಾಗಿದೆ. ಎರಡೂ ವಿಭಾಗಗಳಲ್ಲಿ ತಲಾ 90 ಕ್ರೀಡಾಪಟುಗಳ ಕೋಟಾವನ್ನು ಸಹ ಅನುಮೋನೆ ಮಾಡಲಾಗಿದೆ. ಪ್ರತಿ ತಂಡವು ಒಲಿಂಪಿಕ್ಸ್‌ಗಾಗಿ 15 ಸದಸ್ಯರ ತಂಡವನ್ನು ಪ್ರಕಟ ಮಾಡಬಹುದಾಗಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications