ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿರಾಟ್ ಕೊಹ್ಲಿ ಮಗಳಿಗೆ ಆನ್‌ಲೈನ್ ಬೆದರಿಕೆಗಳ ಕುರಿತು ದೆಹಲಿ ಮಹಿಳಾ ಆಯೋಗ ಕಿಡಿ

|
Google Oneindia Kannada News

ನವದೆಹಲಿ ನವೆಂಬರ್ 2: ಇತ್ತೀಚೆಗೆ ದುಬೈನಲ್ಲಿ ನಡೆದ ಭಾರತ ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡದ ಸೋಲಿನ ನಂತರ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮಗಳಿಗೆ ಆನ್‌ಲೈನ್ ಬೆದರಿಕೆಗಳು ಕಂಡುಬಂದಿವೆ. ಈ ಕುರಿತು ದೆಹಲಿ ಮಹಿಳಾ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. 9 ತಿಂಗಳ ಮಗುವಿಗೆ ಟ್ವಿಟ್ಟರ್‌ನಲ್ಲಿ ಬೆದರಿಕೆ ಹಾಕಿರುವ ರೀತಿ "ತುಂಬಾ ನಾಚಿಕೆಗೇಡಿನ ಸಂಗತಿ" ಎಂದು ಮಹಿಳಾ ಮಂಡಳಿಯ ಅಧ್ಯಕ್ಷೆ ಸ್ವಾತಿ ಮಲಿವಾಲ್ ಇಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ, ಪ್ರಕರಣದ ಪೊಲೀಸ್ ತನಿಖೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲು ಮಹಿಳಾ ಆಯೋಗ ದೆಹಲಿ ಪೊಲೀಸರನ್ನು ಒತ್ತಾಯಿಸಿದೆ.

ಅಕ್ಟೋಬರ್ 24 ರಂದು ನಡೆದ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ಕ್ರಿಕೆಟ್ ಪ್ರೇಮಿಗಳಲ್ಲಿ ನಿರಾಸೆ ಮೂಡಿಸಿದೆ. ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಸೋತಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದಾಗಿ ವಾರಗಳು ಕಳೆದಿವೆ. ಆದರೂ ಕ್ರಿಕೆಟ್ ಕೆಲ ಅಭಿಮಾನಿಗಳಲ್ಲಿ ಬೇಸರ ಕಡಿಮೆ ಆಗಿಲ್ಲ. ಇದನ್ನು ನೆನೆದು ಸೋಷಿಯಲ್ ಮೀಡಿಯಾದಲ್ಲಿ ಸಂದೇಶಗಳನ್ನು ಹರಿಬಿಡುತ್ತಲೇ ಇದ್ದಾರೆ. ಆದರೆ ಇದೇ ನೆನಪಿನಲ್ಲಿ ಟ್ವೀಟರ್ ಮೂಲಕ ವಿರಾಟ್‌ನ ಪುಟ್ಟ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಲಾಗಿದೆ. ಈ ವಿಕೃತರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇವರು ಸೋಷಿಯಲ್ ಮೀಡಿಯಾ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ.

ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಭಾರತ 10 ವಿಕೆಟ್​ಗಳ ಅಂತರದಿಂದ ಹೀನಾಯವಾಗಿ ಸೋಲನುಭವಿಸಿತ್ತು. ಈ ವೇಳೆ ಕಿಡಿಗೇಡಿಗಳು ಪಂದ್ಯದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ದ ಸೋಷಿಯಲ್ ಮೀಡಿಯಾದಲ್ಲಿ ಕೋಮು ದಾಳಿ ನಡೆಸಿದ್ದರು. ಈ ಬಗ್ಗೆ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಸೆಹ್ವಾಗ್ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿ, ಶಮಿ ಪರವಾಗಿ ನಿಂತಿದ್ದರು.

On Online Threats To Virat Kohlis Daughter, Delhi Womens Panel Steps In

ಇದಾದ ಬಳಿಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ದದ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಇದೇ ವಿಷಯವನ್ನು ಪ್ರಸ್ತಾಪಿಸಿದ್ದರು. ಒಂದು ಧರ್ಮವನ್ನು ಗುರಿಯಾಗಿಸಿ ಆಕ್ರಮಣ ಮಾಡುವುದು ಒಬ್ಬ ಮನುಷ್ಯ ಮಾಡಬಹುದಾದ ಅತ್ಯಂತ ಹೀನಾಯ ಕೃತ್ಯ. ಏಕೆಂದರೆ ಧರ್ಮ ಎಂಬುದು ಅತ್ಯಂತ ಪವಿತ್ರ ಮತ್ತು ವೈಯಕ್ತಿಕ ವಿಷಯವಾಗಿದೆ. ಯಾವುದೇ ವ್ಯಕ್ತಿಯನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಬಾರದು ಎಂದು ಶಮಿ ವಿರುದ್ದದ ಕೋಮು ನಿಂದನೆಯನ್ನು ಕೊಹ್ಲಿ ಖಂಡಿಸಿದ್ದರು.

ಟೀಮ್ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಜೊತೆ ಶೇಕಡಾ 200 ರಷ್ಟು ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೊಹ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಕೊಹ್ಲಿಯ ಈ ಹೇಳಿಕೆಯ ಬೆನ್ನಲ್ಲೇ ಇದೀಗ ವಿಕೃತರು ಟೀಮ್ ಇಂಡಿಯಾ ನಾಯಕನ ವಿರುದ್ದ ತಿರುಗಿದ್ದಾರೆ. ಅನ್ಯಧರ್ಮೀಯನ ಪರ ನಿಂತಿದ್ದಕ್ಕಾಗಿ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಕೊಹ್ಲಿಯ 10 ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸೆಗುವುದಾಗಿ ಬೆದರಿಕೆಗಳ ಕಮೆಂಟ್ ಮಾಡುತ್ತಿದ್ದಾರೆ. ಈ ಕಮೆಂಟ್​ಗಳು ಈಗ ವೈರಲ್ ಆಗುತ್ತಿದ್ದು, ಪಾಕ್​ ಆಟಗಾರ ಮೊಹಮ್ಮದ್ ಅಮೀರ್ ಸೇರಿದಂತೆ ಅನೇಕರು ಇಂತಹ ನೀಚ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಕೋಮುಕಾರುವ ಕೆಲ ಕಿಡಿಗೇಡಿಗಳು ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತೆ ನಡೆದುಕೊಳ್ಳುತ್ತಿರುವುದು ದುರಂತ ಎನ್ನದೇ ವಿಧಿಯಿಲ್ಲ.

English summary
The Delhi Commission for Women has issued a notice to the Delhi Police over the online threats to the daughter of Indian cricket team captain Virat Kohli following the team's defeat in the recent India Pakistan cricket match in Dubai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X