ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಕನ್ನಡಿಗ ದೇವದತ್ ಪಡಿಕ್ಕಲ್ ಆಯ್ಕೆ ಸಾಧ್ಯತೆ: ಬಿಸಿಸಿಐ ಮಾಸ್ಟರ್ ಪ್ಲ್ಯಾನ್
Devdutt Padikkal: ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಆರ್‌ಸಿಬಿ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ಎದುರಾಳಿ ತಂಡಗಳ ಬೌಲರ್‌ಗಳಿಗೆ ನಡುಕ ಹುಟ್ಟಿಸಿದ್ದರು. ಇದೀಗ ನಡೆಯುತ್ತಿರುವ ವಿಜಯ ಹಜಾರೆ ಟೂರ್ನಿಯಲ್ಲೂ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ನೀಡಿದ್ದು, ಇದುವರೆಗೂ ನಾಲ್ಕು ಶತಕಗಳನ್ನು ಬಾರಿಸಿ ಬಿಸಿಸಿಐ ಗಮನ ಸೆಳೆದಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಏಕದಿನ ಹಾಗೂ ಟಿ-20 ಸರಣಿಗೆ ಟೀಂ ಇಂಡಿಯಾ ಇಂದು (ಜನವರಿ 3) ತಂಡ ಪ್ರಕಟಿಸಲಿದೆ ಎನ್ನುವ ಮಾಹಿತಿ ಇದೆ. ಈ ವೇಳೆ ಇದರಲ್ಲಿ ಈಗ ವಿಜಯ ಹಜಾರೆ ಟೂರ್ನಿಯಲ್ಲಿ ಸಿಡಿಲಬ್ಬರ ಬ್ಯಾಟಿಂಗ್ ಮಾಡಿ ಶತಗಳ ಮೇಲೆ ಶತಕ ಸಿಡಿಸುತ್ತಿರುವ ಕರ್ನಾಟದ ಸ್ಟಾರ್ ದೇವದತ್ ಪಡಿಕ್ಕಲ್ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.

ನಾಲ್ಕನೇ ಶತಕ ಬಾರಿಸಿದ ದೇವ್: ಕರ್ನಾಟಕ ತಂಡದ ಎಡಗೈ ಬ್ಯಾಟ್ಸ್ಮನ್ ದೇವದತ್ ಪಡಿಕ್ಕಲ್, ವಿಜಯ್ ಹಜಾರೆಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡುತ್ತಿದ್ದಾರೆ. ಈ ಟೂರ್ನಿಯಲ್ಲಿ ಅವರು ಇದುವರೆಗೂ ಆಡಿದ ಐದು ಪಂದ್ಯಗಳಲ್ಲಿ ನಾಲ್ಕು ಶತಕ ಸಿಡಿಸಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ತ್ರಿಪುರ ವಿರುದ್ಧ ಅವರು ನಾಲ್ಕನೇ ಶತಕ ಬಾರಿಸಿದ್ದಾರೆ.
ತ್ರಿಪುರಾಗೆ 333 ಬೃಹತ್ ರನ್‌ಗಳ ಟಾರ್ಗೆಟ್: ಈ ಪಂದ್ಯದಲ್ಲಿ ಟಾಸ್ ಗೆದ್ದ ತ್ರಿಪುರ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಬರೋಬ್ಬರಿ 332 ರನ್‌ಗಳನ್ನು ಕಲೆಹಾಕಿ, ತ್ರಿಪುರಾಗೆ 333 ಬೃಹತ್ ರನ್‌ಗಳ ಟಾರ್ಗೆಟ್ ನೀಡಿತು.
ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಆರಂಭಿಕನಾಗಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದಾರೆ. ಇವರು 120 ಬಾಲ್‌ಗಳಲ್ಲಿ 3 ಸಿಕ್ಸ್, 8 ಬೌಂಡರಿಗಳ ಸಹಿತ 108 ರನ್‌ಗಳನ್ನು ಕಲೆಹಾಕಿದರು. ಈ ಟೂರ್ನಿಯಲ್ಲಿ ಅವರ ನಾಲ್ಕನೇ ಶತಕ ಇದಾಗಿದೆ. ಇದಕ್ಕೂ ಮುನ್ನ ಜಾರ್ಖಂಡ್ ವಿರುದ್ಧ 147 ರನ್ ಬಾರಿಸಿದ್ದರು. ಬಳಿಕ ಕೇರಳ ವಿರುದ್ಧ 124 ರನ್ ಗಳಿಸಿದ್ದರು. ಪುದುಚೇರಿ ವಿರುದ್ಧ 113 ರನ್ಗಳ ಇನಿಂಗ್ಸ್ ಆಡಿದ್ದರು. ಇದೀಗ ತ್ರಿಪುರ ವಿರುದ್ಧ 120 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ ಬೌಂಡರಿಗಳೊಂದಿಗೆ 108 ರನ್ ಕಲೆಹಾಕಿದರು.
ಯಾವೆಲ್ಲಾ ತಂಡಗಳ ಮೇಲೆ ಶತಕ ಸಿಡಿಸಿದ್ದಾರೆ?
* ಜಾರ್ಖಂಡ್ ವಿರುದ್ಧ 147 ರನ್
* ಕೇರಳದ ವಿರುದ್ಧ 124 ರನ್
* ಪುದುಚೇರಿ ವಿರುದ್ಧ 113 ರನ್
* ತ್ರಿಪುರ ವಿರುದ್ಧ 120 ರನ್
ಪಡಿಕ್ಕಲ್ ಮೇಲೆ ಬಿಸಿಸಿಐ ಕಣ್ಣಿಟ್ಟಿದ್ದೇಕೆ?: ಹೀಗೆ ವಿಜಯ್ ಹಜಾರೆ ಟೂರ್ನಿಯಲ್ಲಿ ಶತಕಗಳ ಮೇಲೆ ಶತಗಳನ್ನು ಸಿಡಿಸಿದ ಅವರ ಮೇಲೆ ಬಿಸಿಸಿಐ ಕಣ್ಣು ಬಿದ್ದಿದೆ. ನ್ಯೂಜಿಲೆಂಡ್ ಎದುರಿನ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡದ ಆಯ್ಕೆ ಕುರಿತು ಇದೀಗ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಈ ಪಟ್ಟಿಯಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಅವರನ್ನು ಸೇರಿಸುವ ಪ್ಲ್ಯಾನ್ ನಡೆದಿದೆ ಎನ್ನಲಾಗುತ್ತಿದೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಇಂಜುರಿಗೆ ಒಳಗಾಗಿರುವ ಶ್ರೇಯಸ್ ಅಯ್ಯರ್, ನ್ಯೂಜಿಲೆಂಡ್ ಸರಣಿಯೊಂದಿಗೆ ಕಮ್ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದರು. ಆದರೆ, ಆ ಕನಸು ಇದೀಗ ನನಸಾಗದಂತೆ ಆಗಿದೆ. ಬೆಂಗಳೂರಿನ ಎನ್ಸಿಎನಲ್ಲಿ ನಡೆದ ಫಿಟ್ನೆಸ್ ಟೆಸ್ಟ್ನಲ್ಲಿ ಶ್ರೇಯಸ್ ಫೇಲ್ ಆಗಿದ್ದಾರೆ. ಶ್ರೇಯಸ್ ಅಯ್ಯರ್ ಕಂಪ್ಲೀಟ್ ಫಿಟ್ ಆಗಿಲ್ಲ ಎಂಬ ರಿಪೋರ್ಟ್ ಕೂಡ ಹೊರಬಿದ್ದಿದೆ. ಈ ಮೂಲಕ ಅವರ ನ್ಯೂಜಿಲೆಂಡ್ ಸರಣಿಯ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಆಸೆ ನಿರಾಸೆಯಾದಂತಾಗಿದೆ. ಇದೀಗ ಸೆಲೆಕ್ಷನ್ ಕಮಿಟಿಯ ಕಣ್ಣು ಕನ್ನಡಿಗ ದೇವತ್ ಪಡಿಕ್ಕಲ್ ಮೇಲೆ ಬಿದ್ದಿದೆ. ಆದರೆ, ಇಂದು ತಂಡ ಪ್ರಕಟವಾದ್ರೆ ಅದರಲ್ಲಿ ದೇವ್ ಹೆಸರು ಇರಲಿದೆಯಾ ಎಂದು ಕಾದುನೋಡಬೇಕಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್‌ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications