Champions Trophy: ಹಠ ಬಿಡದ ಭಾರತ, ಪಾಕಿಸ್ತಾನ; ಪಂದ್ಯಾವಳಿಯೇ ಸ್ಥಳಾಂತರ?

ಫೆಬ್ರವರಿ 19 ರಿಂದ ಮಾರ್ಚ್ 9ರವರೆಗೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯನ್ನು ಆಯೋಜಿಸಲು ಉತ್ಸಾಹದಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ಭಾರತ ದೊಡ್ಡ ತಲೆನೋವಾಗಿದೆ. ಯಾವುದೇ ಕಾರಣಕ್ಕೂ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳಿಸಲ್ಲ ಎಂದು ಬಿಸಿಸಿಐ ಹೇಳಿದೆ. ಮತ್ತೊಂದೆಡೆ ಪಾಕಿಸ್ತಾನ ಕೂಡ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ಆಯೋಜನೆಗೆ ಒಪ್ಪದೆ ತಕರಾರು ತೆಗೆದಿದೆ. ಇದರಿಂದ ಇಡೀ ಪಂದ್ಯಾವಳಿಯೇ ಬೇರೆ ದೇಶಕ್ಕೆ ಸ್ಥಳಾಂತರವಾಗುವ ಸಾಧ್ಯತೆ ಇದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈಗಾಗಲೇ ಲಾಹೋರ್, ಕರಾಚಿ ಮತ್ತು ರಾವಲ್ಪಿಂಡಿಗಳಲ್ಲಿ ಪಂದ್ಯಾವಳಿ ಆಯೋಜಿಸಲು ಸಿದ್ದತೆ ಮಾಡಿಕೊಳ್ಳುತ್ತಿದೆ. ಎಲ್ಲಾ ಕ್ರೀಡಾಂಗಣಗಳನ್ನು ನವೀಕರಣ ಕೆಲಸ ನಡೆಯುತ್ತಿದೆ. ಆದರೆ ಭದ್ರತೆಯ ಕಾರಣದಿಂದ ಭಾರತ ತಂಡ ಪಾಕಿಸ್ತಾನದಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ಐಸಿಸಿಗೆ ಪತ್ರ ಬರೆದು ಸ್ಪಷ್ಟನೆ ನೀಡಿದೆ.

pakistan may withdraw icc champions trophy 2025

ಬಿಸಿಸಿಐ ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ (ಐಸಿಸಿ) ಅಧಿಕೃತವಾಗಿ ಪತ್ರ ಬರೆದಿದ್ದು ಭದ್ರತೆಯ ಕಾರಣದಿಂದ ನಾವು ತಂಡವನ್ನು ಕಳಿಸುವುದಿಲ್ಲ ಎಂದು ತಿಳಿಸಿದೆ. ಬಿಸಿಸಿಐ ಪತ್ರವನ್ನು ಉಲ್ಲೇಖಿಸಿ ಐಸಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (ಪಿಸಿಬಿ) ಪತ್ರ ಬರೆದಿದ್ದು ಪ್ರತಿಕ್ರಿಯೆಗಾಗಿ ಕಾಯುತ್ತಿದೆ.

ಪಿಸಿಬಿಗೆ ಐಸಿಸಿ ಹೇಳಿದ್ದೇನು?

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಆತಿಥ್ಯದಿಂದ ಹಿಂದೆ ಸರಿಯದೇ ಇದ್ದರೆ, ಭಾರತದ ಪಂದ್ಯಗಳನ್ನು ಯುಎಇಯಲ್ಲಿ ಮತ್ತು ಫೈನಲ್ ಅನ್ನು ದುಬೈನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ಆಯೋಜಿಸುವುದು ನಿಮಗೆ ಒಪ್ಪಿಗೆಯಾ ಎಂದು ಐಸಿಸಿ ಪಿಸಿಬಿಗೆ ಕೇಳಿದೆ. ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುವ ಪಂದ್ಯಗಳ ಹೋಸ್ಟಿಂಗ್ ಶುಲ್ಕವನ್ನು ಕೊಡಲಾಗುವುದು ಎಂದು ಐಸಿಸಿ ಹೇಳಿದೆ.

ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ಬಾರಿ ಹಠ ಬಿಡಲು ತಯಾರಾಗಿಲ್ಲ, ಏಷ್ಯಾ ಕಪ್ ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜನೆ ಮಾಡಿದ್ದ ಪಾಕಿಸ್ತಾನ ಈ ಬಾರಿ ಚಾಂಪಿಯನ್ಸ್‌ ಟ್ರೋಫಿ ಇಲ್ಲೇ ನಡೆಯಬೇಕು ಎಂದು ಹಠ ಹಿಡಿದು ಕೂತಿದೆ. ಒಂದು ವೇಳೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ಆಯೋಜನೆ ಮಾಡಲು ನಿರಾಕರಿಸಿದರೆ ಇಡೀ ಪಂದ್ಯಾವಳಿಯನ್ನೇ ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರಿಸಲು ಐಸಿಸಿ ಯೋಜಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಟೂರ್ನಿಯಿಂದಲೇ ಹಿಂದೆ ಸರಿಯುತ್ತಾ ಪಾಕಿಸ್ತಾನ?

ಒಂದು ವೇಳೆ ಇಡೀ ಪಂದ್ಯಾವಳಿಯನ್ನು ಬೇರೆ ದೇಶಕ್ಕೆ ಸ್ಥಳಾಂತರಿಸಿದರೆ, ಪಂದ್ಯಾವಳಿಯಲ್ಲಿ ಆಡದೇ ಇರಲು ಪಾಕಿಸ್ತಾನ ನಿರ್ಧರಿಸಿದೆ ಎಂದು ವರದಿಯಾಗಿದೆ. ಈ ವಿಚಾರದಲ್ಲಿ ಪಾಕಿಸ್ತಾನ ಸರ್ಕಾರದ ಸಲಹೆ ಪಡೆಯಲು ಪಿಸಿಬಿ ನಿರ್ಧರಿಸಿದೆ ಎಂದು ಪಾಕಿಸ್ತಾನದ ಪ್ರಮುಖ ಡೈಲಿ ಡಾನ್‌ ವರದಿ ಮಾಡಿದೆ.

ಒಂದು ವೇಳೆ ಪಾಕಿಸ್ತಾನ ಸರ್ಕಾರ ಎರಡು ರಾಷ್ಟ್ರಗಳ ನಡುವಿನ ಸಮಸ್ಯೆಗಳನ್ನು ಬಗೆಹರಿಸುವವರೆಗೆ ಐಸಿಸಿ ಅಥವಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪಂದ್ಯಾವಳಿಗಳಲ್ಲಿ ಭಾರತದ ವಿರುದ್ಧ ಪಂದ್ಯಗಳನ್ನು ಆಡದಂತೆ ಪಾಕಿಸ್ತಾನ ಸರ್ಕಾರ ನಿರ್ದೇಶನ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+