India Vs Pakistan: 'ಭಾರತದ ವಿರುದ್ಧ ಚಾಂಪಿಯನ್‌ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಗೆಲ್ಲುವು ಖಚಿತ'

India Vs Pakistan: ದುಬೈನಲ್ಲಿ ಇಂದು (ಫೆಬ್ರವರಿ 23) ನಡೆಯುವ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಇದೀಗ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಶಾಕಿಂಗ್‌ ಹೇಳಿಕೆಯೊಂದನ್ನು ನೀಡಿದ್ದಾರೆ. ಹಾಗಾದ್ರೆ ಏನು ಹೇಳಿದ್ದಾತೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಇಂದು ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯವನ್ನು ವೀಕ್ಷಣೆ ಮಾಡಲು ಇಡೀ ವಿಶ್ವವೇ ಕಾತರದಲ್ಲಿದೆ. ಪಂದ್ಯ ಆರಂಭಕ್ಕೂ ಮುನ್ನ ಪಿಸಿಬಿ ಅಧ್ಯಕ್ಷ ನಖ್ವಿ ಹೇಳಿಕೆಯನ್ನು ನೀಡಿದ್ದಾರೆ. ಕಣದಲ್ಲಿ ಭಾರತ ತಂಡವನ್ನು ಎದುರಿಸಲು ನಮ್ಮ ಪಾಕಿಸ್ತಾನ ತಂಡ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನ ತಂಡದ ತರಬೇತಿ ಸ್ಥಳಕ್ಕೆ ಆಗಮಿಸಿದ ಮೇಳೆ ಈ ಹೇಳಿಕೆ ನೀಡಿದ್ದಾರೆ.

Pakistan will Defeats India in Champions Trophy Cricket Match today says PCB Chairman

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ತಂಡ ಉತ್ತಮವಾಗಿ ಪ್ರದರ್ಶನ ತೋರಲಿದೆ. ಪಾಕ್‌ ಕ್ರಿಕೆಟ್‌ ತಂಡದ ಎಲ್ಲಾ ಆಟಗಾರರು ಉತ್ತಮ ಲಯದಲ್ಲಿದ್ದಾರೆ. ಗೆದ್ದರೂ ಸೋತರೂ ನಾವು ಅವರೊಂದಿಗೆ ಇರುತ್ತೇವೆ ಎಂದು ಹೇಳಿದ್ದಾರೆ. ಇನ್ನು ಭಾರತ-ಪಾಕಿಸ್ತಾನ ಪಂದ್ಯ ಲಾಹೋರ್‌ನಲ್ಲಿ ನಡೆದಿದ್ದರೆ ನಿಮಗೆ ಏನು ಅನಿಸುತ್ತಿತ್ತು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನೀವು ಭಾರತದವರನ್ನೇ ಕೇಳಬೇಕು ಎಂದು ತೀಕ್ಷ್ಣವಾಗಿ ಉತ್ತರಿಸಿದರು.

ಶನಿವಾರ ಲಾಹೋರ್‌ನಲ್ಲಿ ನಡೆದ ಆಸ್ಟ್ರೇಲಿಯಾ-ಇಂಗ್ಲೆಂಡ್‌ ಪಂದ್ಯದ ಆರಂಭದಲ್ಲಿ ಭಾರತದ ರಾಷ್ಟ್ರಗೀತೆಯನ್ನು ನುಡಿಸಲಾಯಿತು. ಇದು ಭಾರೀ ವೈರಲ್‌ ಆಗಿತ್ತು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಂದ್ಯಾವಳಿಯನ್ನು ಆಯೋಜಿಸಿರುವುದು ಐಸಿಸಿ. ಅವರನ್ನೇ ಕೇಳಬೇಕು ಎಂದು ಹೇಳಿದರು. ಈಗಾಗಲೇ ಕರಾಚಿಯಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋತು ಸುಣ್ಣವಾಗಿರುವ ಪಾಕಿಸ್ತಾನಕ್ಕೆ ಇಂದಿನ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇಲ್ಲದಿದ್ದರೆ ಸೆಮಿಫೈನಲ್‌ನಿಂದ ಹೊರಬೀಳುವುದು ಖಚಿತ.

ಮತ್ತೊಂದೆಡೆ ಭಾರತ ತಂಡವು ಕೂಡ ಬಲಿಷ್ಠವಾಗಿದ್ದು, ಪಾಕಿಸ್ತಾನ ಗೆಲ್ಲುವುದು ಅಷ್ಟಕಷ್ಟೇ ಎನ್ನುವಂತಾಗಿದೆ. ಇನ್ನೂ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ನೆಟ್ಟಿಗರು, ಓ ಭ್ರಮೆ.. ನಿಮ್‌ ಪಾಕ್‌ ಟೀಂ ವಿನ್‌ ಆಗೋದು ಅದು ಭಾರತದ ಮೇಲೆ. ಕಾಮಿಡಿ ಮಾಡ್ತಿದ್ದೀರಾ ಎಂದು ಗೇಲಿ ಮಾಡುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+