India vs Pakistan: ಭಾರತದ ವಿರುದ್ಧ ಸೋತರೆ ಪಾಕಿಸ್ತಾನಕ್ಕೆ ಮನೆ ದಾರಿ ಫಿಕ್ಸ್!

ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಯಲ್ಲಿ ಭಾರತ ಶುಭಾರಂಭ ಮಾಡಿದೆ. ಗುರುವಾರ ನಡೆದ ಮೊದಲ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶದ ವಿರುದ್ಧ 6 ವಿಕೆಟ್‌ಗಳ ಗೆಲವು ಸಾಧಿಸಿದ್ದು, ಮುಂದಿನ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲು ಸಜ್ಜಾಗಿದೆ. ಫೆಬ್ರವರಿ 23ರಂದು ಭಾನುವಾರ ಈ ಪಂದ್ಯ ನಡೆಯಲಿದ್ದು ಇಡೀ ಜಗತ್ತಿನ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ.

2017ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿದ್ದ ಪಾಕಿಸ್ತಾನ ಪ್ರಶಸ್ತಿ ಗೆದ್ದುಕೊಂಡಿತ್ತು. ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶ ಈಗ ಭಾರತಕ್ಕೆ ಸಿಕ್ಕಿದೆ. ಭಾರತ ಪಾಕಿಸ್ತಾನವನ್ನು ಸೋಲಿಸಿದರೆ ಚಾಂಪಿಯನ್ಸ್ ಟ್ರೋಫಿಯಿಂದಲೇ ಹೊರಬೀಳುವುದು ಬಹುತೇಕ ಖಚಿತವಾಗಿದೆ.

pakistan will out of champions trophy if they lost against india on sunday feb 23

ಈಗಾಗಲೇ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿರುವ ಪಾಕಿಸ್ತಾನಕ್ಕೆ ಸೆಮಿಫೈನಲ್ ಆಸೆ ಜೀವಂತವಾಗಿಟ್ಟುಕೊಳ್ಳಬೇಕಾದರೆ ಭಾರತದ ವಿರುದ್ಧ ಗೆಲ್ಲುವುದು ಅನಿವಾರ್ಯವಾಗಿದೆ. ದುಬೈನಲ್ಲಿ ಈಗಾಗಲೇ ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯ ಆಡಿರುವ ಭಾರತ, ಎರಡನೇ ಪಂದ್ಯವನ್ನು ಕೂಡ ಇದೇ ಅಂಗಳದಲ್ಲಿ ಆಡುವುದರಿಂದ ಪರಿಸ್ಥಿತಿಗೆ ಚನ್ನಾಗಿ ಹೊಂದಿಕೊಂಡಿರುವುದು ತಂಡಕ್ಕೆ ಅನುಕೂಲವಾಗಲಿದೆ.

ಪಾಕಿಸ್ತಾನವನ್ನು ಹೊರದಬ್ಬುತ್ತಾ ಭಾರತ!

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ 8 ತಂಡಗಳು ಆಡುತ್ತಿದ್ದು, ತಲಾ ನಾಲ್ಕು ತಂಡಗಳಂತೆ ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಎ ಗುಂಪಿನಲ್ಲಿ ಆಡುತ್ತಿವೆ. ಭಾರತ ಮತ್ತು ನ್ಯೂಜಿಲೆಂಡ್‌ ಆಡಿರುವ ಮೊದಲ ಪಂದ್ಯ ಗೆದ್ದಿದ್ದು ತಲಾ ಎರಡು ಅಂಕ ಪಡೆದಿವೆ. ನ್ಯೂಜಿಲೆಂಡ್ ಉತ್ತಮ ರನ್‌ರೇಟ್ ಹೊಂದಿದ್ದು ಮೊದಲ ಸ್ಥಾನದಲ್ಲಿದ್ದು, ಭಾರತ ಎರಡನೇ ಸ್ಥಾನದಲ್ಲಿದೆ.

ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದು. ಎರಡೂ ತಂಡಗಳು ಇನ್ನೊಂದು ಪಂದ್ಯ ಸೋತರು ಪಂದ್ಯಾವಳಿಯಿಂದಲೇ ಹೊರಬೀಳಲಿವೆ. ಭಾನುವಾರ ಭಾರತ ಪಾಕಿಸ್ತಾನವನ್ನು ಸೋಲಿಸಿದರೆ, ಪಾಕಿಸ್ತಾನವನ್ನು ಪಂದ್ಯಾವಳಿಯಿಂದಲೇ ಹೊರಕಳಿಸುವುದಲ್ಲದೆ ಸೆಮಿಫೈನಲ್‌ಗೆ ತನ್ನ ಸ್ಥಾನವನ್ನು ಕೂಡ ಬಹುತೇಕ ಖಚಿತಪಡಿಸಿಕೊಳ್ಳಲಿದೆ.

2017ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಶತಕ ಬಾರಿಸಿದ್ದ ಫಖರ್ ಜಮಾನ್, ಈ ಬಾರಿ ಮೊದಲ ಪಂದ್ಯದ ವೇಳೆ ಗಾಯಗೊಂಡಿದ್ದು ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದಾರೆ. ಪಾಕಿಸ್ತಾನಕ್ಕೆ ಇದು ದೊಡ್ಡ ಹಿನ್ನಡೆಯಾಗಿದೆ. ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಬಲಿಷ್ಠವಾಗಿದ್ದು ಪಾಕಿಸ್ತಾನವನ್ನು ಸೋಲಿಸುವ ವಿಶ್ವಾಸದಲ್ಲಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಈವರೆಗೂ 5 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಭಾರತ 2 ಪಂದ್ಯಗಳಲ್ಲಿ ಗೆದ್ದಿದ್ದು ಪಾಕಿಸ್ತಾನ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+