Champions Trophy| India vs Pakistan; ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ; ರೋಹಿತ್ ಶರ್ಮಾ ಹೇಳಿದ್ದೇನು?
ದುಬೈನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದಿರುವ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸಾಂಪ್ರದಾಯಿಕ ಎದುರಾಳಿಗಳು ಟಿ20 ವಿಶ್ವಕಪ್ ಬಳಿಕ ಇದೀಗ ಮತ್ತೆ ಮುಖಾಮುಖಿಯಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಪಂದ್ಯವನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ.
ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿರುವ ಪಾಕಿಸ್ತಾನಕ್ಕೆ ಭಾರತದ ವಿರುದ್ಧ ಗೆಲುವು ಸಾಧಿಸಬೇಕಾದ ಒತ್ತಡದಲ್ಲಿದೆ. ಭಾರತ ಪಾಕಿಸ್ತಾನವನ್ನು ಮಣಿಸಿದರೆ ಅವರನ್ನು ಪಂದ್ಯಾವಳಿಯಿಂದ ಹೊರಹಾಕುವ ಜೊತೆಗೆ, ಸೆಮಿಫೈನಲ್‌ಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತದೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ಪಾಕಿಸ್ತಾನದ ಆರಂಭಿಕ ಬ್ಯಾಟರ್ ಫಖಾರ್ ಜಮಾನ್ ಅವರ ಬದಲಾಗಿ ಇಮಾಮ್-ಉಲ್-ಹಕ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಟಾಸ್ ಬಳಿಕ ಮಾತನಾಡಿದ ಪಾಕಿಸ್ತಾನದ ನಾಯಕ ಮೊಹಮ್ಮದ್ ರಿಜ್ವಾನ್, ನಾವು ಮೊದಲು ಬ್ಯಾಟಿಂಗ್ ಮಾಡುತ್ತೇವೆ, ಪಿಚ್ ಉತ್ತಮವಾಗಿರುವಂತೆ ಕಾಣತ್ತಿದೆ. ದೊಡ್ಡ ಮೊತ್ತವನ್ನು ಕಲೆಹಾಕುವ ವಿಶ್ವಾಸವಿದೆ. ಪಂದ್ಯಾವಳಿಯಲ್ಲಿ ಪ್ರತಿಯೊಂದು ಪಂದ್ಯವೂ ಮುಖ್ಯವಾಗುತ್ತದೆ. ತಂಡದ ಆಟಗಾರರಿಗೆ ಇಲ್ಲಿನ ಪರಿಸ್ಥಿತಿ ಚನ್ನಾಗಿದೆ ಗೊತ್ತಿದೆ. ನಾವು ಇಲ್ಲಿ ಈ ಮೊದಲು ಉತ್ತಮ ಪ್ರದರ್ಶನ ನೀಡಿದ್ದೇವೆ. ಕೊನೆಯ ಪಂದ್ಯದಲ್ಲಿ ನಾವು ಸೋತಿದ್ದೇವೆ ಇಂದು ಉತ್ತಮ ಪ್ರದರ್ಶನ ನೀಡಲು ಬಯಸುತ್ತೇವೆ. ಫಖರ್ ಜಮಾನ್ ಹೊರಗುಳಿದಿದ್ದು, ಇಮಾಮ್ ತಂಡಕ್ಕೆ ಬಂದಿದ್ದಾರೆ ಎಂದು ಹೇಳಿದರು.
ಬಳಿಕ ಮಾತನಾಡಿದ ರೋಹಿತ್ ಶರ್ಮಾ, ಟಾಸ್ ಸೋತಿದ್ದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಅವರು ಟಾಸ್ ಗೆದ್ದಿದ್ದಾರೆ. ನಾವು ಮೊದಲು ಬೌಲಿಂಗ್ ಮಾಡುತ್ತೇವೆ. ಕಳೆದ ಪಂದ್ಯದಂತೆಯೇ ಕಾಣುತ್ತದೆ. ಪಿಚ್ ನಿಧಾನವಾಗಿದೆ. ನಮ್ಮಲ್ಲಿ ಅನುಭವಿ ಬ್ಯಾಟರ್ ಇದ್ದಾರೆ, ಪಿಚ್ ನಿಧಾನವಾದರೆ ಹೇಗೆ ಆಡಬೇಕು ಎಂದು ನಮಗೆ ತಿಳಿದಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ತಂಡದಿಂದ ಉತ್ತಮ ಪ್ರದರ್ಶನ ಬೇಕು, ಕೊನೆಯ ಪಂದ್ಯ ನಮಗೆ ಸುಲಭವಾಗಿರಲಿಲ್ಲ, ಒತ್ತಡದ ಪರೀಕ್ಷೆಯಾಗಿದೆ. ಬಾಂಗ್ಲಾದೇಶ ವಿರುದ್ಧ ಆಡಿದ್ದ ತಂಡವೇ ಇರಲಿದೆ ಎಂದರು.
ಉಭಯ ತಂಡಗಳ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.
ಪಾಕಿಸ್ತಾನ: ಇಮಾಮ್-ಉಲ್-ಹಕ್, ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್ (ನಾಯಕ), ಸಲ್ಮಾನ್ ಅಘಾ, ತಯ್ಯದ್ ತಾಹಿರ್, ಖುಶ್ದಿಲ್ ಶಾ, ಶಹೀನ್ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.












Click it and Unblock the Notifications