ಏಷ್ಯಾಕಪ್, ವಿಶ್ವಕಪ್‌ಗೆ ಮುನ್ನವೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಪಾಕಿಸ್ತಾನದ ಮಾರಕ ವೇಗಿ!
ಪಾಕಿಸ್ತಾನದ ವೇಗದ ಬೌಲರ್ ವಹಾಬ್ ರಿಯಾಜ್ ಬುಧವಾರ, ಆಗಸ್ಟ್ 16 ರಂದು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಜಗತ್ತಿನ ವಿವಿಧ ಲೀಗ್‌ಗಳಲ್ಲಿ ಆಡಲು ಅವಕಾಶ ಪಡೆಯುವ ಉದ್ದೇಶ ಹೊಂದಿರುವ ಅವರು, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
38 ವರ್ಷದ ಎಡಗೈ ವೇಗದ ಬೌಲರ್, ಪಾಕಿಸ್ತಾನದ ಪರ ಯಶಸ್ವಿ ಬೌಲರ್ ಎನಿಸಿಕೊಂಡಿದ್ದರು. 27 ಟೆಸ್ಟ್, 91 ಏಕದಿನ ಮತ್ತು 36 ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿರುವ ವಹಾಬ್ ರಿಯಾಜ್ 237 ಅಂತರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಕೊನೆಯ ಬಾರಿಗೆ ಡಿಸೆಂಬರ್ 2020 ರಲ್ಲಿ ಪಾಕಿಸ್ತಾನಕ್ಕಾಗಿ ಆಡಿದ್ದರು. ಈ ವರ್ಷದ ಮಾರ್ಚ್‌ನಲ್ಲಿ ಇತ್ತೀಚೆಗೆ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಆಡಿದ್ದರು.

ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್‌ನಲ್ಲಿ ತಂಡಕ್ಕಾಗಿ ಮರಳುವ ಯಾವುದೇ ಯೋಜನೆ ಇರಲಿಲ್ಲ, ವಿಶ್ವದ ವಿವಿಧ ಲೀಗ್‌ಗಳಲ್ಲಿ ಫ್ರಾಂಚೈಸಿಗಳಿಗೆ ಆಡಲು ನೋಡುತ್ತಿದ್ದು, ಅದಕ್ಕಾಗಿ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಪಾಕಿಸ್ತಾನಕ್ಕೆ ಆಡಿದ್ದು ಹೆಮ್ಮೆ
ಕಳೆದ ಎರಡು ವರ್ಷಗಳಿಂದ ನನ್ನ ನಿವೃತ್ತಿ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದೇನೆ, 2023 ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನನ್ನ ಗುರಿಯಾಗಿದೆ ಮತ್ತು ನನ್ನ ದೇಶ ಮತ್ತು ರಾಷ್ಟ್ರೀಯ ತಂಡಕ್ಕೆ ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ಸೇವೆ ಸಲ್ಲಿಸಿದ್ದೇನೆ, ಈಗ ಆರಾಮದಾಯಕವಾಗಿದ್ದೇನೆ, ಎಂದು ನಿವೃತ್ತಿ ಘೋಷಣೆ ಸಂದರ್ಭದಲ್ಲಿ ಭಾವುಕರಾಗಿ ಹೇಲಿದ್ದಾರೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ, ನನ್ನ ಕುಟುಂಬ, ತರಬೇತುದಾರರು, ಮಾರ್ಗದರ್ಶಕರು, ತಂಡದ ಸಹ ಆಟಗಾರರು, ಅಭಿಮಾನಿಗಳು ಮತ್ತು ನನ್ನನ್ನು ಬೆಂಬಲಿಸಿದ ಎಲ್ಲರಿಗೂ ದೊಡ್ಡ ಧನ್ಯವಾದಗಳು ಎಂದು ಹೇಳಿದ್ದಾರೆ.
"ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸುವುದು ಒಂದು ಗೌರವ. ಈ ಅಧ್ಯಾಯಕ್ಕೆ ನಾನು ವಿದಾಯ ಹೇಳುತ್ತಿದ್ದೇನೆ, ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಸಾಹಸವನ್ನು ಪ್ರಾರಂಭಿಸಲು ನಾನು ರೋಮಾಂಚನಗೊಂಡಿದ್ದೇನೆ, ಲೀಗ್ ಕ್ರಿಕೆಟ್‌ನಲ್ಲಿ ಆಡುವಾಗ ವಿಶ್ವದ ಅತ್ಯುತ್ತಮ ಪ್ರತಿಭೆಗಳಿಗೆ ಬೌಲ್ ಮಾಡಲಿದ್ದು, ಪ್ರೇಕ್ಷಕರಿಗೆ ಮನರಂಜನೆ ಮತ್ತು ಸ್ಫೂರ್ತಿ ನೀಡುವ ಭರವಸೆ ಇದೆ." ಎಂದು ಅವರು ಹೇಳಿದರು.
ವಹಾಬ್ ರಿಯಾಜ್ 2008 ರಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಅದೇ ವರ್ಷದ ನಂತರ, ಏಪ್ರಿಲ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಟಿ20 ಚೊಚ್ಚಲ ಪಂದ್ಯವನ್ನು ಆಡಿದರು. ಎರಡು ವರ್ಷಗಳ ನಂತರ, ಎಡಗೈ ವೇಗಿ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದರು.












Click it and Unblock the Notifications