Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ 7 ತಿಂಗಳ ಗರ್ಭಿಣಿ!
ಪ್ರಸ್ತುತ ಪ್ಯಾರಿಸ್‌ನಲ್ಲಿ ಒಲಿಂಪಿಕ್ ಕ್ರೀಡಾಕೂಟ ನಡೆಯುತ್ತಿದೆ. ಈ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಹಲವು ದೇಶಗಳ ಕ್ರೀಡಾಪಟುಗಳು ವರ್ಷಗಳವರೆಗೆ ಕಠಿಣ ತರಬೇತಿಯನ್ನು ತೆಗೆದುಕೊಂಡಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವುದು ಸುಲಭದ ಕೆಲಸವಲ್ಲ ಮತ್ತು ಎಲ್ಲರಿಗೂ ಈ ಅವಕಾಶ ಸಿಗುವುದಿಲ್ಲ. ಹೀಗಾಗಿ ಒಮ್ಮೆಯಾದರೂ ಈ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಪ್ರತಿಯೊಬ್ಬ ಕ್ರೀಡಾಪಟುವಿನ ಕನಸು.
ಹೀಗಿರುವಾಗ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 7 ತಿಂಗಳ ಗರ್ಭಿಣಿ ಮಹಿಳೆ ಭಾಗವಹಿಸಿದ್ದರು. ಈಜಿಪ್ಟ್ ನ ಈ ಮಹಿಳೆ ಫೆನ್ಸಿಂಗ್ ಸ್ಪರ್ಧೆ (Fencing competition)ಯಲ್ಲಿ ಭಾಗವಹಿಸಿದ್ದರು. ಅತ್ಯಂತ ಅಪಾಯಕಾರಿ ಕತ್ತಿವರಸೆಯಲ್ಲಿ ಗರ್ಭಿಣಿ ಪಾಲ್ಗೊಂಡಿರುವುದು ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ.

26 ವರ್ಷದ ನಡಾ ಹಫೀಜ್ (Nada Hafez) ಈಜಿಪ್ಟ್ ಪರವಾಗಿ ಫೆನ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ನಡಾ ಹಫೀಜ್ ಮೊದಲ ಸುತ್ತಿನ ಪಂದ್ಯದಲ್ಲಿ ಅಮೆರಿಕದ ಆಟಗಾರನನ್ನು 15-13 ಅಂಕಗಳಿಂದ ಸೋಲಿಸಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದರು. ನಂತರ ಅವರು ದಕ್ಷಿಣ ಕೊರಿಯಾ ವಿರುದ್ಧ ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಪಂದ್ಯಾವಳಿಯಿಂದ ಅವರು ಹೊರ ಉಳಿಯುವಂತಾಯಿತು.
ಸ್ಪರ್ಧೆಯಿಂದ ಹೊರಬಂದ ನಂತರ ನಡಾ ಹಫೀಜ್ ತನ್ನ Instagram ಪುಟದಲ್ಲಿ ತಾವು ಗರ್ಭಿಣಿ ಎನ್ನುವುದನ್ನು ಹಂಚಿಕೊಂಡಿದ್ದಾರೆ. "ನೀವು ಈ ಪಂದ್ಯವನ್ನು ವೀಕ್ಷಿಸುವಾಗ ವೇದಿಕೆಯಲ್ಲಿ ಕೇವಲ ಇಬ್ಬರು ಸ್ಪರ್ಧಿಗಳು ಇರುವುದನ್ನು ನೋಡುತ್ತೀರಿ. ಆದರೆ ವಾಸ್ತವವಾಗಿ ಆ ವೇದಿಕೆಯಲ್ಲಿ ಮೂರು ಜನರಿದ್ದರು. ಒಂದು ನಾನು, ಎರಡನೆಯದು ನನ್ನ ಪ್ರತಿಸ್ಪರ್ಧಿ ಮತ್ತು ಮೂರನೆಯದು ಇನ್ನೂ ಹುಟ್ಟದ ನನ್ನ ಹೊಟ್ಟೆಯಲ್ಲಿ ಇದ್ದ ನನ್ನ ಮುದ್ದು ಮಗು. ನಾನು ಮತ್ತು ನನ್ನ ಮಗು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅನೇಕ ಸವಾಲುಗಳನ್ನು ಎದುರಿಸಿದ್ದೇವೆ. ಜೀವನ ಮತ್ತು ಕ್ರೀಡೆಯ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವುದು ಕಷ್ಟ'' ಎಂದು ಅವರು ಬರೆದಿದ್ದಾರೆ.

"2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 16 ರ ಸುತ್ತಿನಲ್ಲಿ ನನ್ನ ಸ್ಥಾನವನ್ನು ಪಡೆದುಕೊಂಡಿರುವುದಕ್ಕೆ ನನಗೆ ಗೌರವವಿದೆ ಎಂದು ಹೇಳಲು ನಾನು ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದೇನೆ" ಎಂದು ಅವರು ಹೇಳಿದರು.
ನಾಡಾ ಹಫೀಜ್ 2014 ರಲ್ಲಿ ಈಜಿಪ್ಟ್ ರಾಷ್ಟ್ರೀಯ ಹಿರಿಯ ಮಹಿಳಾ ಫೆನ್ಸಿಂಗ್ ತಂಡವನ್ನು ಸೇರಿಕೊಂಡರು. ನಂತರದ ವರ್ಷ ಅವರು ಈಜಿಪ್ಟಿನ ಹಿರಿಯ ಮಹಿಳಾ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ತಮ್ಮ ಮೊದಲ ಗೆಲುವನ್ನು ಅನುಭವಿಸಿದರು. ಅಲ್ಜೀರಿಯಾದಲ್ಲಿ ನಡೆದ ಆಫ್ರಿಕನ್ ವಲಯದ ಅರ್ಹತಾ ಪಂದ್ಯಗಳ ಮೂಲಕ ಅವರು 2016 ರ ರಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದರು.
ಅದರ ನಂತರ ಅವರು 2020 ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದರು. ಇದು ಅವರ ಮೂರನೇ ಒಲಿಂಪಿಕ್ಸ್ ಆಗಿತ್ತು. ಮಹಿಳೆಯರಿಂದ ಸಾಧ್ಯವಾಗದೇ ಇರುವುದು ಯಾವುದೂ ಇಲ್ಲ ಎಂಬುದನ್ನು ಸಾಬೀತುಪಡಿಸುವ ಮೂಲಕ ಮಹಿಳೆಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications