IPL 2025: ಈ ಕಾರಣಕ್ಕೆ ಪಂಜಾಬ್ ಕಿಂಗ್ಸ್ ಕಪ್ ಗೆಲ್ಲಲ್ಲ ಎಂದ ಮಾಜಿ ಕ್ರಿಕೆಟಿಗ
2025ರ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಬಲಿಷ್ಠ ತಂಡದಂತೆ ಕಾಣುತ್ತಿದೆ. ಶನಿವಾರ ನಡೆದ ಕೆಕೆಆರ್ ವಿರುದ್ಧದ ಪಂದ್ಯ ಮಳೆಯಿಂದ ರದ್ದಾದ ಬಳಿಕ 9 ಪಂದ್ಯಗಳಲ್ಲಿ 5 ಗೆಲುವು 3 ಸೋಲು ಮತ್ತು 1 ಪಂದ್ಯ ಫಲಿತಾಂಶವಿಲ್ಲದ ಕಾರಣ 11 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದು ಪ್ಲೇಆಫ್ ತಲುಪುವ ವಿಶ್ವಾಸದಲ್ಲಿದೆ. ಆದರೆ ಭಾರತದ ಮಾಜಿ ಕ್ರಿಕೆಟಿಗ ಪಂಜಾಬ್ ಕಿಂಗ್ಸ್ ಈ ಬಾರಿ ಪ್ರಶಸ್ತಿ ಗೆಲ್ಲಲ್ಲ ಅದಕ್ಕೆ ಅವರ ಕೋಚ್ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಐಪಿಎಲ್ 2025 ರಲ್ಲಿ ಭಾರತೀಯರಿಗಿಂತ ವಿದೇಶಿ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚಿನ ಒಲವು ತೋರಿದ್ದಾರೆ ಎಂದು ಮಾಜಿ ಭಾರತೀಯ ಕ್ರಿಕೆಟಿಗ ಮನೋಜ್ ತಿವಾರಿ ಆರೋಪಿಸಿದ್ದಾರೆ. ಕೋಲ್ಕತ್ತಾದಲ್ಲಿ ಮಳೆಯಿಂದ ರದ್ದಾದ ಕೆಕೆಆರ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯದ ನಂತರ ಈ ಹೇಳಿಕೆ ನೀಡಿದ್ದಾರೆ. ಕೆಕೆಆರ್‌ನ ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ ಕೇವಲ ಒಂದು ಓವರ್ ನಂತರ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡ ನಂತರ ಎರಡೂ ತಂಡಗಳು ತಲಾ ಒಂದು ಪಾಯಿಂಟ್ ಪಡೆದವು.

ಆಸ್ಟ್ರೇಲಿಯಾ ಆಟಗಾರರಿಗೆ ಮಣೆ?
ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ರಿಕಿ ಪಾಂಟಿಂಗ್ ನೆಹಲ್ ವಾಧೇರಾ ಮತ್ತು ಶಶಾಂಕ್ ಸಿಂಗ್‌ರಂತಹ ಭಾರತೀಯ ಬ್ಯಾಟ್ಸ್‌ಮನ್‌ಗಳಿಗಿಂತ ಮೊದಲು ಜೋಶ್ ಇಂಗ್ಲಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್‌ರಂತಹವರನ್ನು ಬ್ಯಾಟಿಂಗ್ ಮಾಡಲು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ. ಈ ರೀತಿಯ ವರ್ತನೆ ಮುಂದುವರಿದರೆ, ಪಿಬಿಕೆಎಸ್ ಐಪಿಎಲ್ 2025 ಟ್ರೋಫಿಯನ್ನು ಗೆಲ್ಲುವುದು ಕಷ್ಟ ಎಂದು ಹೇಳಿದ್ದಾರೆ.
ಈ ಆವೃತ್ತಿಯಲ್ಲಿ ಪಂಜಾಬ್ ತಂಡ ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ನನ್ನ ನನಗೆ ಅನಿಸುತ್ತದೆ, ಅವರು ಬ್ಯಾಟಿಂಗ್ ಮಾಡುವಾಗ ನಾನು ನೋಡಿದ್ದು ಏನೆಂದರೆ, ಕೋಚ್ ಭಾರತೀಯ ಮಾಹಿತಿ ಬ್ಯಾಟ್ಸ್‌ಮನ್‌ಗಳಾದ ನೆಹಾಲ್ ವಧೇರಾ ಮತ್ತು ಶಶಾಂಕ್ ಸಿಂಗ್ ಅವರನ್ನು ಕಳುಹಿಸಲಿಲ್ಲ, ಬದಲಿಗೆ ಅವರು ತಮ್ಮ ವಿದೇಶಿ ಆಟಗಾರರನ್ನು ನಂಬಿದ್ದರು, ಆದರೆ ಅವರು ಭಾರತೀಯ ಆಟಗಾರರ ಮೇಲೆ ವಿಶ್ವಾಸವಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ತೋರಿಸಿದರು. ಅವರು ಈ ರೀತಿ ಮುಂದುವರಿದರೆ, ಅವರು ಪ್ರಶಸ್ತಿ ಗೆಲ್ಲುವುದು ಕಷ್ಟವಾಗಲಿದೆ ಎಂದರು.
ಮ್ಯಾಕ್ಸ್‌ವೆಲ್‌ಗೆ ಪದೇ ಪದೇ ಅವಕಾಶ!
ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಈ ಆವೃತ್ತಿಯಲ್ಲಿ ಕಳಪೆ ಫಾರ್ಮ್‌ನಲ್ಲಿದ್ದಾರೆ. ಆದರೂ ಪಂಜಾಬ್ ಕಿಂಗ್ಸ್ ಅವರಿಗೆ ಪದೇ ಪದೇ ಅವಕಾಶ ನೀಡುತ್ತಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕೂಡ ಮ್ಯಾಕ್ಸ್‌ವೆಲ್ ವಿಫಲವಾದರು. 8 ಎಸೆತಗಳಲ್ಲಿ ಕೇವಲ 7 ರನ್ ಗಳಿಸಿ ಮತ್ತೊಮ್ಮೆ ವಿಕೆಟ್ ಕೈಚೆಲ್ಲಿದರು.












Click it and Unblock the Notifications