PBKS vs GT IPL 2023: ಗುಜರಾತ್ vs ಪಂಜಾಬ್, ಸೋತ ತಂಡಗಳ ಹಣಾಹಣಿ; ಪಂದ್ಯ ವಿವರ, ಆಡುವ 11ರ ಬಳಗ
ಗುರುವಾರ, ಏಪ್ರಿಲ್ 13ರಂದು ಮೊಹಾಲಿಯಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 18ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದೊಂದು ಸೋಲು ಕಂಡಿವೆ. ಎರಡೂ ತಂಡಗಳು ಕೊನೆಯ ಪಂದ್ಯದಲ್ಲಿನ ಸೋಲಿನೊಂದಿಗೆ ಈ ಪಂದ್ಯದಲ್ಲಿ ಸೆಣಸಾಡುತ್ತಿವೆ. ಗುಜರಾತ್ ಟೈಟನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಎದುರು ಸೋತಿದ್ದರೆ, ಪಂಜಾಬ್ ಕಿಂಗ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ಎದುರು ಮುಖಭಂಗ ಅನುಭವಿಸಿದೆ.

ಪಂಜಾಬ್ ಕಿಂಗ್ಸ್ ತಂಡದಲ್ಲಿ ನಾಯಕ ಶಿಖರ್ ಧವನ್ ಅತ್ಯುತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ. ಐಪಿಎಲ್ 2023ರ ಪಂದ್ಯಾವಳಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.
ಪಂಜಾಬ್ ಕಿಂಗ್ಸ್ ತಂಡ ಆಡಿದ 3 ಪಂದ್ಯಗಳಲ್ಲಿ 2 ಗೆಲುವು, 1 ಸೋಲಿನೊಂದಿಗೆ 4 ಅಂಕಗಳನ್ನು ಗಳಿಸಿ ಐಪಿಎಲ್ 2023ರ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇದೇ ವೇಳೆ ಗುಜರಾತ್ ಟೈಟನ್ಸ್ ತಂಡ ಆಡಿದ 3 ಪಂದ್ಯಗಳಲ್ಲಿ 2 ಗೆಲುವು ಮತ್ತು 1 ಸೋಲಿನೊಂದಿಗೆ 4 ಅಂಕಗಳನ್ನು ಕಲೆಹಾಕಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
ಇನ್ನು ಪಂಜಾಬ್ ಕಿಂಗ್ಸ್ ತಂಡಕ್ಕೆ ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಲಿಯಾಮ್ ಲಿವಿಂಗ್‌ಸ್ಟೋನ್ ಆಗಮಿಸಿರುವುದು ತಂಡದ ಬ್ಯಾಟಿಂಗ್ ಮತ್ತು ಸ್ಪಿನ್ ಬೌಲಿಂಗ್ ಬಲ ಹೆಚ್ಚಿಸಿದೆ. ಅಲ್ಲದೇ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಕಗಿಸೋ ರಬಾಡ ಕೂಡ ಆಡುತ್ತಿರುವುದು ಗೆಲುವಿನ ಹುಮ್ಮಸ್ಸಿನಲ್ಲಿದೆ.

ಮತ್ತೊಂದಡೆ, ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡದ ಗುರುವಾರದ ಪಂದ್ಯಕ್ಕೆ ಖಾಯಂ ನಾಯಕ ಹಾರ್ದಿಕ್ ಪಾಂಡ್ಯ ಮರಳಿರುವುದು ತಂಡವನ್ನು ಬಲಿಷ್ಠಗೊಳಿಸಲಿದೆ. ಜ್ವರದಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಕಾರಣ, ರಶೀದ್ ಖಾನ್ ಗುಜರಾತ್ ತಂಡವನ್ನು ಮುನ್ನಡೆಸಿದ್ದರು.
ಗುಜರಾತ್ ಟೈಟನ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯದ ವಿವರ
ಸ್ಥಳ ಮತ್ತು ಸಮಯ: ಗುಜರಾತ್ ಟೈಟನ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯವು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಗುರುವಾರ, ಏಪ್ರಿಲ್ 13ರಂದು ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಗುಜರಾತ್ ಟೈಟನ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗತಿ ವೀಕ್ಷಣೆ ಮಾಡಬಹುದು.

ಗುಜರಾತ್ ಟೈಟನ್ಸ್ ಸಂಭಾವ್ಯ ಆಡುವ 11ರ ಬಳಗ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಸಾಯಿ ಕಿಶೋರ್.
ಪಂಜಾಬ್ ಕಿಂಗ್ಸ್ ಆಡುವ 11ರ ಬಳಗ: ಪ್ರಭ್‌ಸಿಮ್ರಾನ್ ಸಿಂಗ್, ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್.












Click it and Unblock the Notifications