PBKS vs GT: ಪಂಜಾಬ್ ಕಿಂಗ್ಸ್ ವಿರುದ್ಧ ಸುಲಭ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್
ಐಪಿಎಲ್ 2024ರ 37ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್‌ಗಳ ಗೆಲುವು ಸಾಧಿಸಿದೆ. ತೆವಾಟಿಯಾ ಅತ್ತುತ್ಯಮ ಬ್ಯಾಟಿಂಗ್ ಮೂಲಕ ತಂಡಕ್ಕೆ ಸುಲಭ ಗೆಲುವು ಸಾಧಿಸಿದರು.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಸ್ಯಾಮ್ ಕರನ್ ಮತ್ತು ಪ್ರಭ್‌ಸಿಮ್ರನ್ ಸಿಂಗ್ ಉತ್ತಮ ಆರಂಭ ನೀಡಿದರು. 5.3 ಓವರ್ ಗಳಲ್ಲಿ 52 ರನ್ ಗಳಿಸಿದರು.

ಸ್ಯಾಮ್ ಕರನ್ 19 ಎಸೆತಗಳಲ್ಲಿ 20 ರನ್ ಗಳಿಸಿದರೆ, ಪ್ರಭ್‌ಸಿಮ್ರನ್ ಸಿಂಗ್ 21 ಎಸೆತಗಳಲ್ಲಿ 35 ರನ್ ಗಳಿಸಿದರು. ಇವರಿಬ್ಬರು ಔಟಾದ ಬಳಿಕ ಪಂಜಾಬ್ ಕಿಂಗ್ಸ್ ಲಯ ಕಳೆದುಕೊಂಡಿತು.
ರಿಲೀ ರೊಸೊವ್ 7 ಎಸೆತಗಳಲ್ಲಿ 9 ರನ್ ಗಳಿಸಿದರು. ಜಿತೇಶ್ ಶರ್ಮಾ 13 ರನ್, ಲಿಯಾಮ್ ಲಿವಿಂಗ್‌ಸ್ಟೋನ್ 6 ರನ್, ಶಶಾಂಕ್ ಸಿಂಗ್ 8 ರನ್, ಅಶುತೋಶ್ ಶರ್ಮಾ 3 ರನ್ ಗಳಿಸಿದರು. ಹಪ್ರೀತ್ ಸಿಂಗ್ 14 ರನ್ ಗಳಿಸಿ ಔಟಾದರು.
ಹಪ್ರೀತ್ ಬ್ರಾರ್ ಕೊನೆಯಲ್ಲಿ 12 ಎಸೆತಗಳಲ್ಲಿ 29 ರನ್ ಗಳಿಸುವ ಮೂಲಕ ಪಂಜಾಬ್ ತಂಡ 20 ಓವರ್ ಗಳಲ್ಲಿ 142 ರನ್‌ಗಳಿಗೆ ಆಲೌಟ್ ಆಯಿತು. ಗುಜರಾತ್ ಟೈಟಾನ್ಸ್ ಪರ ರವಿಶ್ರೀನಿವಾಸ್ ಸಾಯಿಕಿಶೋರ್ 4 ಓವರ್ ಗಳಲ್ಲಿ 33 ರನ್ ನೀಡಿ 4 ವಿಕೆಟ್ ಪಡೆದರು. ನೂರ್ ಅಹ್ಮದ್ 4 ಓವರ್ ಗಳಲ್ಲಿ 20 ರನ್ ನೀಡಿ 2 ವಿಕೆಟ್ ಪಡೆದರು.
ಸುಲಭ ಗೆಲುವು ಸಾಧಿಸಿದ ಗುಜರಾತ್
ಈ ಸುಲಭ ಸವಾಲನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ಸಾಧಾರಣ ಆರಂಭ ಪಡೆಯಿತು. ವೃದ್ಧಿಮಾನ್ ಸಾಹ 11 ಎಸೆತಗಳಲ್ಲಿ 13 ರನ್ ಗಳಿಸಿದರು. ಶುಭಮನ್ ಗಿಲ್ 29 ಎಸೆತಗಳಲ್ಲಿ 35 ರನ್ ಗಳಿಸಿದರು.
ಸಾಯಿ ಸುದರ್ಶನ್ 34 ಎಸೆತಗಳಲ್ಲಿ 31 ರನ್ ಗಳಿಸಿದರು. ಡೇವಿಡ್ ಮಿಲ್ಲರ್ 4 ರನ್ ಗಳಿಸಿದರು. ಅಜ್ಮತುಲ್ಲಾ ಒಮರ್ಝಾಯ್ 10 ಎಸೆತಗಳಲ್ಲಿ 13 ರನ್ ಗಳಿಸಿದರು. ರಾಹುಲ್ ತೆವಾಟಿಯಾ 18 ಎಸೆತಗಳಲ್ಲಿ ಅಜೇಯ 36 ರನ್ ಗಳಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.
19.1 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 146 ರನ್ ಗಳಿಸಿದ ಗುಜರಾತ್ ಟೈಟಾನ್ಸ್ 3 ವಿಕೆಟ್‌ಗಳ ಗೆಲುವು ಸಾಧಿಸಿತು. ಹರ್ಷಲ್ ಪಟೇಲ್ 3 ಓವರ್ ಗಳಲ್ಲಿ 15 ರನ್ ನೀಡಿ 3 ವಿಕೆಟ್ ಪಡೆದು ಪಂಜಾಬ್ ಕಿಂಗ್ಸ್‌ನ ಯಶಸ್ವೀ ಬೌಲರ್ ಎನಿಸಿದರು.












Click it and Unblock the Notifications