PBKS vs MI: ರೋಚಕ ಪಂದ್ಯದಲ್ಲಿ ಪಂಜಾಬ್ ಮಣಿಸಿದ ಮುಂಬೈ ಇಂಡಿಯನ್ಸ್

ಪಂಜಾಬ್ ಕಿಂಗ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 9 ರನ್‌ಗಳ ಗೆಲುವು ಸಾಧಿಸಿದ್ದು, ಈ ಐಪಿಎಲ್‌ನ ಮೂರನೇ ಗೆಲುವು ದಾಖಲಿಸಿದೆ.

ಮುಲ್ಲನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿತು.

PBKS vs MI Mumbai Indians Win by 9 Runs Against Punjab Kings in IPL 2024

ಇಶಾನ್ ಕಿಶನ್ 8 ರನ್ ಗಳಿಸಿ ಔಟಾದರೆ, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಉತ್ತಮ ಜೊತೆಯಾಟ ಆಡಿದರು. ಈ ಜೋಡಿ ಎರಡನೇ ವಿಕೆಟ್‌ಗೆ 71 ರನ್‌ ಕಲೆಹಾಕಿತು. ರೋಹಿತ್ ಶರ್ಮಾ 25 ಎಸೆತಗಳಲ್ಲಿ 36 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ 53 ಎಸೆತಗಳಲ್ಲಿ 78 ರನ್ ಗಳಿಸಿದರು.

ತಿಲಕ್ ವರ್ಮಾ 18 ಎಸೆತಗಳಲ್ಲಿ 34 ರನ್ ಗಳಿಸಿದರು. ಟಿಮ್ ಡೇವಿಡ್ 7 ಎಸೆತಗಳಲ್ಲಿ 14 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಹರ್ಷಲ್ ಪಟೇಲ್ 4 ಓವರ್ ಗಳಲ್ಲಿ 31 ರನ್ ನೀಡಿ 3 ವಿಕೆಟ್ ಪಡೆದರು. ಸ್ಯಾಮ್ ಕರನ್ 2 ವಿಕೆಟ್ ಪಡೆದುಕೊಂಡರು.

ಪಂಜಾಬ್‌ಗೆ ಆರಂಭದಲ್ಲೇ ಆಘಾತ

193 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಬುಮ್ರಾ ಮತ್ತು ಗೆರಾಲ್ಡ್ ಕೊಯೆಟ್ಜೆ ಆರಂಭದಲ್ಲೇ ಆಘಾತ ನೀಡಿದರು. ಸ್ಯಾಮ್ ಕರನ್ 6 ರನ್ ಗಳಿಸಿ ಔಟಾದರೆ, ಪ್ರಭ್‌ಸಿಮ್ರನ್ ಸಿಂಗ್ ಮೊದಲ ಎಸೆತದಲ್ಲೇ ಔಟಾದರು. ರಿಲೀ ರೊಸೊವ್ 1 ರನ್, ಲಿಯಾಮ್ ಲಿವಿಂಗ್‌ಸ್ಟೋನ್ 1 ರನ್ ಗಳಿಸಿ ಔಟಾದರು.

14 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡ ಪಂಜಾಬ್ ಕಿಂಗ್ಸ್ ಹೀನಾಯ ಸೋಲಿನ ಸುಳಿಗೆ ಸಿಲುಕಿತ್ತು. ಹಪ್ರೀತ್ ಸಿಂಗ್ ಭಾಟಿಯಾ 13 ರನ್ ಗಳಿಸಿ ಔಟಾದ ಬಳಿಕ ಪಂಜಾಬ್ ಸಿಂಗ್ಸ್ 49 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತು. ಜಿತೇಶ್ ಶರ್ಮಾ 9 ಎಸೆತಗಳಲ್ಲಿ 9 ರನ್ ಗಳಿಸಿ ಔಟಾದರು.

ಬಳಿಕ ಜೊತೆಯಾದ ಶಶಾಂಕ್ ಸಿಂಗ್ ಮತ್ತು ಅಶುತೋಷ್ ಶರ್ಮಾ ಮತ್ತೆ ಪಂಜಾಬ್ ತಂಡಕ್ಕೆ ಆಸರೆಯಾದರು. ಶಶಾಂಕ್ ಸಿಂಗ್ 25 ಎಸೆತಗಳಲ್ಲಿ 41 ರನ್ ಗಳಿಸಿದರು. ಆಶುತೋಷ್ ಶರ್ಮಾ 28 ಎಸೆತಗಳಲ್ಲಿ 61 ರನ್ ಗಳಿಸಿದರು.

ಕೊನೆಯ ಓವರ್ ನಲ್ಲಿ ಪಂಜಾಬ್ ಗೆಲುವಿಗೆ 11 ರನ್ ಬೇಕಿತ್ತು, ಮುಂಬೈ ಇಂಡಿಯನ್ಸ್ ಗೆಲುವಿಗೆ ಒಂದು ವಿಕೆಟ್ ಬೇಕಿತ್ತು, ಕಗಿಸೋ ರಬಾಡ ಎರಡು ರನ್ ಕದಿಯುವ ಉತ್ಸಾಹದಲ್ಲಿ ರನೌಟ್ ಆಗುವ ಮೂಲಕ ಪಂಜಾಬ್ 9 ರನ್‌ಗಳಿಂದ ಸೋಲು ಕಂಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+