Weather Report: ಆರ್‌ಸಿಬಿ - ಪಂಜಾಬ್ ಕಿಂಗ್ಸ್ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?
RCB Vs PBKS IPL 2026: ಧರ್ಮಶಾಲಾದಲ್ಲಿ ಭಾನುವಾರ (ಮೇ 17) ನಡೆಯಲಿರುವ ಐಪಿಎಲ್ 2026ರ 61ನೇ ಹೈವೋಲ್ಟೇಜ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪಂಜಾಬ್ ಪ್ಲೇ-ಆಫ್ ಹಂತಕ್ಕೇರುವ ಗುರಿ ಹೊಂದಿದ್ದು, ಇದಕ್ಕೆ ಬ್ರೇಕ್ ಹಾಕಿ ಮುನ್ನುಗ್ಗಲು ಆರ್‌ಸಿಬಿ ಸಖತ್ ಪ್ಲಾನ್ ಮಾಡಿಕೊಂಡಿದೆ. ಹಾಗಾದ್ರೆ ಇಲ್ಲಿನ ಹವಾಮಾನ ಹಾಗೂ ಪಿಚ್ ರಿಪೋರ್ಟ್ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಳೆದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಆರ್‌ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದ ಬ್ಯಾಟಿಂಗ್ ಸ್ನೇಹಿ ಪಿಚ್‌ನ ಲಾಭವನ್ನು ಮತ್ತೊಮ್ಮೆ ಪಡೆಯಲು ಎದುರು ನೋಡುತ್ತಿದ್ದಾರೆ. ಆರ್‌ಸಿಬಿ ಈವರೆಗೂ ಆಡಿರುವ 12 ಪಂದ್ಯಗಳಲ್ಲಿ 8ರಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲೂ ಗೆಲುವಿನ ಓಟ ಮುಂದುವರೆಸುವ ಭರವಸೆಯಲ್ಲಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್‌ಗೆ ಇಂದಿನ ಪಂದ್ಯದಲ್ಲಿ ಗೆದ್ದರೆ ಮಾತ್ರ ಮುಂದಿನ ಹಂತಕ್ಕೆ ಸಾಗಲು ಸುಲಭವಾಗಲಿದೆ. ಇಲ್ಲದಿದ್ದರೆ ಪ್ಲೇ-ಆಫ್ ಹಾದಿ ಮತ್ತಷ್ಟು ಕಠಿಣವಾಗಲಿದೆ.

ಉತ್ತಮ ಲಯದಲ್ಲಿರುವ ಆರ್‌ಸಿಬಿ
ಸತತ ಐದು ಪಂದ್ಯಗಳಲ್ಲಿ ಸೋಲನುಭವಿಸಿ ಕಂಗೆಟ್ಟಿರುವ ಪಂಜಾಬ್ ಕಿಂಗ್ಸ್ ವಿರುದ್ಧ ಇಂದು ತಮ್ಮ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದನ್ನು ನೋಡಲು ಕ್ರೀಡಾಂಗಣಕ್ಕೆ ಅಭಿಮಾನಿಗಳ ದಂಡೇ ಹರಿದುಬರುವ ನಿರೀಕ್ಷೆಯಿದೆ. ಈ ಸೀಸನ್ ಆರಂಭದಿಂದಲೂ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡುತ್ತಿರುವ ತಂಡವಾಗಿದ್ದು, ಇಂದಿನ ಪಂದ್ಯದಲ್ಲಿ ಜಯಗಳಿಸಿದರೆ ಈ ಬಾರಿಯ ಪ್ಲೇ-ಆಫ್‌ಗೆ ಅಧಿಕೃತವಾಗಿ ಅರ್ಹತೆ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಟೂರ್ನಿಯ ಆರಂಭದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಪಂಜಾಬ್ ಕಿಂಗ್ಸ್ ತಂಡವು ಈಗ ಪ್ರದರ್ಶನದಲ್ಲಿ ದಿಢೀರ್ ಕುಸಿತ ಕಂಡಿದೆ. ಇಂದು ಮತ್ತೆ ಸೋಲನುಭವಿಸಿದರೆ ಶ್ರೇಯಸ್ ಅಯ್ಯರ್ ನಾಯಕತ್ವದ ಈ ತಂಡವು ಟೂರ್ನಿಯಿಂದ ಹೊರಬೀಳುವ ಹಂತಕ್ಕೆ ತಲುಪಿದರೂ ಆಶ್ಚರ್ಯವಿಲ್ಲ. ಅಲ್ಲದೆ ಪಂಜಾಬ್ ಕಿಂಗ್ಸ್ ತಂಡವು ಈ ಫಾರ್ಮ್ಯಾಟ್‌ನಲ್ಲಿ ಒಂದು ಬೇಡದ ದಾಖಲೆಯನ್ನೂ ಹೊಂದಿದೆ. ಟಿ20 ಕ್ರಿಕೆಟ್‌ನಲ್ಲಿ 200ಕ್ಕೂ ಹೆಚ್ಚು ರನ್‌ಗಳನ್ನು ದಾಖಲಿಸಿದ ನಂತರವೂ ಅತಿ ಹೆಚ್ಚು ಬಾರಿ ಸೋಲನುಭವಿಸಿದ ತಂಡ ಎಂಬ ಹಣೆಪಟ್ಟಿ ಕಟ್ಟಿಕೊಂಡಿದೆ.
ಪಂಜಾಬ್ ಕಿಂಗ್ಸ್, ಆರ್‌ಸಿಬಿ ಮುಖಾಮುಖಿ ದಾಖಲೆಗಳು
* ಒಟ್ಟು ಆಡಿದ ಪಂದ್ಯಗಳು: 37
* ಪಂಜಾಬ್ ಕಿಂಗ್ಸ್ ಗೆಲುವು: 18
* ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು: 19
ಈ ಅಂಕಿಅಂಶಗಳನ್ನು ಗಮನಿಸಿದರೆ ಎರಡೂ ತಂಡಗಳ ನಡುವೆ ಸಮಬಲದ ಹೋರಾಟ ನಡೆದಿದೆ ಎಂದು ತಿಳಿಯುತ್ತದೆ. ಕೇವಲ ಒಂದು ಪಂದ್ಯದ ಗೆಲುವಿನ ಅಂತರದಿಂದ ಆರ್‌ಸಿಬಿ ಸದ್ಯ ಮುನ್ನಡೆಯಲ್ಲಿದೆ. ಇಂದಿನ ಪಂದ್ಯವು ಈ ಅಂತರವನ್ನು ಹೆಚ್ಚಿಸುತ್ತದೆಯೇ ಅಥವಾ ಪಂಜಾಬ್ ಸಮಬಲ ಸಾಧಿಸುತ್ತದೆಯೇ ಎಂದು ಕಾದು ನೋಡಬೇಕಿದೆ.
ಧರ್ಮಶಾಲಾದ ಹವಾಮಾನ ವರದಿ
ಧರ್ಮಶಾಲಾದಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇದ್ದರೂ ಸಹ ಬಿಸಿಲು ಮುಂದುವರೆಯಲಿದೆ. ತಾಪಮಾನವು 24 ಡಿಗ್ರಿ ಸೆಲ್ಸಿಯಸ್‌ನಿಂದ 28 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಬಹುದು ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಟ್ಟಾರೆಯಾಗಿ ಹೇಳುವುದಾದರೆ ಇಂದಿನ ಪಂದ್ಯಕ್ಕೆ ಮಳೆಯಿಂದ ಯಾವುದೇ ರೀತಿಯ ಅಡ್ಡಿಯಾಗುವುದಿಲ್ಲ ಉಂಟಾಗುವುದಿಲ್ಲ ಎನ್ನುವ ಮುನ್ಸೂಚನೆ ಇದೆ.
ಪಂದ್ಯದ ಸ್ಥಳ, ಸಮಯ, ನೇರಪ್ರಸಾರದ ವಿವರ
* ಪಂದ್ಯದ ಸ್ಥಳ: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಎಚ್‌ಪಿಸಿಎ) ಸ್ಟೇಡಿಯಂ
* ಸಮಯ: ಮಧ್ಯಾಹ್ನ 3.30
* ನೇರಪ್ರಸಾರ: ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ (JioHotstar) ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.












Click it and Unblock the Notifications