IPL 2026: ಪಂಜಾಬ್‌ ಕಿಂಗ್ಸ್ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್ 11..

RCB Vs PBKS IPL 2026: ಧರ್ಮಶಾಲಾದಲ್ಲಿ ಭಾನುವಾರ (ಮೇ 17) ಮಧ್ಯಾಹ್ನ ನಡೆಯಲಿರುವ ಐಪಿಎಲ್ 2026ರ 61ನೇ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಹೆಚ್‌ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಹಣಾಹಣಿಯು ಎರಡೂ ತಂಡಗಳಿಗೂ ಅತ್ಯಂತ ನಿರ್ಣಾಯಕವಾಗಿದೆ. ಹಾಗಾದ್ರೆ ಆರ್‌ಸಿಬಿಯ ಆಡುವ 11ರ ಬಳಗದಲ್ಲಿ ಯಾರೆಲ್ಲಾ ಇರಲಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅದ್ಭುತ ಆರಂಭ ಕಂಡಿದ್ದ ಪಂಜಾಬ್ ಕಿಂಗ್ಸ್ ಇದೀಗ ಸತತ ಐದು ಸೋಲುಗಳ ನಂತರ ಪ್ಲೇ-ಆಫ್ ರೇಸ್‌ನಲ್ಲಿ ತೀವ್ರ ಒತ್ತಡಕ್ಕೆ ಸಿಲುಕಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಕಳೆದ ಪಂದ್ಯದಲ್ಲಿ 201 ರನ್‌ಗಳ ಬೃಹತ್ ಮೊತ್ತವನ್ನು ರಕ್ಷಿಸಿಕೊಳ್ಳುವಲ್ಲಿ ವಿಫಲವಾಗಿದ್ದು, ಪಂಜಾಬ್‌ಗೆ ದೊಡ್ಡ ಹಿನ್ನಡೆಯಾಗಿದೆ. ಇನ್ನು ಕೇವಲ ಎರಡು ಲೀಗ್ ಪಂದ್ಯಗಳು ಬಾಕಿ ಉಳಿದಿದ್ದು, ಪ್ಲೇ-ಆಫ್‌ ಅರ್ಹತೆಯ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಪಂಜಾಬ್ ಎರಡೂ ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಅದರಂತೆಯೇ ಮೊದಲ ಪಂದ್ಯದಲ್ಲಿ ಭಾನುವಾರ ಆರ್‌ಸಿಬಿಯನ್ನ ಎದುರಿಸಲು ಸಜ್ಜಾಗಿದೆ.

PBKS vs RCB IPL 2026 Predicted Playing 11 Match Preview amp amp Playoff Race Know Complete details

ಜಯಭೇರಿ ಬಾರಿಸಿರುವ ವಿಶ್ವಾಸದಲ್ಲಿ ಆರ್‌ಸಿಬಿ

ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಸೀಸನ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಟೂರ್ನಿಯ ಬಲಿಷ್ಠ ತಂಡಗಳಲ್ಲಿ ಒಂದಾಗಿ ಕಾಣಿಸಿಕೊಂಡಿದೆ. ಆರ್‌ಸಿಬಿ ಆಡಿರುವ 12 ಪಂದ್ಯಗಳಲ್ಲಿ 8 ಗೆಲುವುಗಳನ್ನು ಕಂಡಿದ್ದು, ಪ್ಲೇ-ಆಫ್ ಹಂತಕ್ಕೇರುವ ಹೊಸ್ತಿಲಲ್ಲಿದೆ. ಪಂಜಾಬ್ ವಿರುದ್ಧ ಪಂದ್ಯದಲ್ಲಿ ಗೆದ್ದರೆ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಅವಕಾಶ ಪಡೆಯುವ ಸಾಧ್ಯತೆ ಹೆಚ್ಚಿದೆ. ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸಿಡಿಸಿದ ಭರ್ಜರಿ ಶತಕದ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಜಯಭೇರಿ ಬಾರಿಸಿರುವ ಆರ್‌ಸಿಬಿ ಪೂರ್ಣ ಆತ್ಮವಿಶ್ವಾಸದೊಂದಿಗೆ ಈ ಪಂದ್ಯಕ್ಕೆ ಸಜ್ಜಾಗಿದೆ.

ಈ ಸೀಸನ್‌ನಲ್ಲಿ ಮೊದಲ ಬಾರಿ ಮುಖಾಮುಖಿ

2025ರ ಐಪಿಎಲ್ ಫೈನಲಿಸ್ಟ್‌ಗಳು ಈ ಸೀಸನ್‌ನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದಾರೆ. ಉತ್ತಮ ಫಾರ್ಮ್‌ನಲ್ಲಿರುವ ಆರ್‌ಸಿಬಿ ಗೆಲುವಿನ ಓಟ ಮುಂದುವರಿಸುವ ಉತ್ಸಾಹದಲ್ಲಿದ್ದರೆ, ಪ್ಲೇ-ಆಫ್‌ ಅರ್ಹತೆಗಾಗಿ ಹೋರಾಡುತ್ತಿರುವ ಪಂಜಾಬ್ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಆದ್ದರಿಂದ ಈ ರೋಚಕ ಹಣಾಹಣಿ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಹುಟ್ಟುಹಾಕಿದೆ.

ಪಂಜಾಬ್ ಕಿಂಗ್ಸ್, ಆರ್‌ಸಿಬಿ ಪ್ಲೇಯಿಂಗ್ 11

ಪಂಜಾಬ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ 11: ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಕೂಪರ್ ಕಾನೋಲಿ, ವಿಷ್ಣು ವಿನೋದ್ (ವಿಕೆಟ್ ಕೀಪರ್), ಸೂರ್ಯಾಂಶ್ ಶೆಡ್ಗೆ, ಅಜ್ಮತುಲ್ಲಾ ಒಮರ್ಜಾಯ್, ಮಾರ್ಕೊ ಜಾನ್ಸೆನ್, ಜೇವಿಯರ್ ಬಾರ್ಟ್ಲೆಟ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ವಿಜಯಕುಮಾರ್ ವೈಶಾಕ್. ಇಂಪ್ಯಾಕ್ಟ್‌ ಪ್ಲೇಯರ್‌: ಪ್ರಭ್‌ಸಿಮ್ರನ್ ಸಿಂಗ್.

ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11: ಜೇಕಬ್‌ ಬೆಥೆಲ್ / ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ವೆಂಕಟೇಶ್ ಅಯ್ಯರ್, ರಸಿಖ್ ಸಲಾಮ್ ದಾರ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಜೇಕಬ್ ಡಫಿ. ಇಂಪ್ಯಾಕ್ಟ್‌ ಪ್ಲೇಯರ್‌: ದೇವದತ್ ಪಡಿಕ್ಕಲ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+