PBKS vs SRH: ಪಂಜಾಬ್ ಕಿಂಗ್ಸ್ ವಿರುದ್ಧ 2 ರನ್‌ಗಳ ರೋಚಕ ಗೆಲುವು ಸಾಧಿಸಿದ ಸನ್‌ರೈಸರ್ಸ್ ಹೈದರಾಬಾದ್
ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪಂಜಾಬ್ ಕಿಂಗ್ಸ್ ವಿರುದ್ಧ 2 ರನ್‌ಗಳ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದಾರಾಬಾದ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು. ಸ್ಫೋಟಕ ಬ್ಯಾಟಿಂಗ್ ಪಡೆಯನ್ನೇ ಪಂಜಾಬ್ ಬೌಲರ್ ಗಳು ಆರಂಭದಲ್ಲಿ ಕಟ್ಟಿಹಾಕಿದರು.

5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 39 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿತ್ತು, ಟ್ರಾವಿಸ್ ಹೆಡ್ 15 ಎಸೆತಗಳಲ್ಲಿ 21 ರನ್ ಗಳಿಸಿ ಔಟಾದರೆ, ಅಭಿಷೇಕ್ ಶರ್ಮಾ 11 ಎಸೆತಗಳಲ್ಲಿ 16 ರನ್ ಗಳಿಸಿ ಔಟಾದರು, ಏಡೆನ್ ಮಾರ್ಕ್ರಮ್ ಸೊನ್ನೆಗೆ ವಿಕೆಟ್ ಒಪ್ಪಿಸಿದರು.
ಆರಂಭಿಕ ಆಘಾತ ಅನುಭವಿಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ನಿತೀಶ್ ರೆಡ್ಡಿ ಚೇತರಿಕೆ ನೀಡಿದರು. 37 ಎಸೆತಗಳಲ್ಲಿ 4 ಬೌಂಡರಿ 5 ಸಿಕ್ಸರ್ ಸಹಿತ 64 ರನ್ ಗಳಿಸಿದರು. ಅಬ್ದುಲ್ ಸಮದ್ 12 ಎಸೆತಗಳಲ್ಲಿ 25 ರನ್ ಗಳಿಸಿ ಆಸರೆಯಾದರು.
ಪಂಜಾಬ್ ಪರವಾಗಿ ಅರ್ಷದೀಪ್ ಸಿಂಗ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. 4 ಓವರ್ ಗಳಲ್ಲಿ 29 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದರು. ಸ್ಯಾಮ್ ಕರನ್ ಮತ್ತು ಹರ್ಷಲ್ ಪಟೇಲ್ ತಲಾ ಎರಡು ವಿಕೆಟ್ ಪಡೆದರು. ಕಗಿಸೊ ರಬಡ 1 ವಿಕೆಟ್ ಪಡೆದರು.
2 ರನ್‌ಗಳ ರೋಚಕ ಗೆಲುವು
183 ರನ್‌ಗಳ ಸವಾಲಿನ ಮೊತ್ತವನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಕೂಡ ಆರಂಭದಲ್ಲಿ ಆಘಾತ ಅನುಭವಿಸಿತು. 4.4 ಓವರ್ ಗಳಲ್ಲಿ 20 ರನ್ ಗಳಿಸುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಜಾನಿ ಬೈರ್ ಸ್ಟೋ ಯಾವುದೇ ರನ್ ಗಳಿಸಿದೆ ಔಟಾದರೆ, ಪ್ರಭ್‌ಸಿಮ್ರನ್ ಸಿಂಗ್ 4 ರನ್ ಗಳಿಸಿ ಔಟಾದರು. ಶಿಖರ್ ಧವನ್ 16 ಎಸೆತಗಳಲ್ಲಿ 14 ರನ್ ಗಳಿಸಿ ಔಟಾದರು.
ಸ್ಯಾಮ್ ಕರನ್ 22 ಎಸೆತಗಳಲ್ಲಿ 29 ರನ್ ಗಳಿಸಿದರು, ಸಿಖಂದರ್ ರಜಾ ಕೂಡ 22 ಎಸೆತಗಳಲ್ಲಿ 28 ರನ್ ಗಳಿಸಿದರು. ಶಶಾಂಕ್ ಸಿಂಗ್ 25 ಎಸೆತಗಳಲ್ಲಿ ಅಜೇಯ 46 ರನ್ ಗಳಿಸಿ ಹೋರಾಟ ನೀಡಿದರು, ಅಶುತೋಷ್ ಶರ್ಮಾ 15 ಎಸೆತಗಳಲ್ಲಿ ಅಜೇಯ 33 ರನ್ ಗಳಿಸಿದರು ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ.
ಕೊನೆಯ ಓವರ್ ನಲ್ಲಿ ಪಂಜಾಗ್ ಕಿಂಗ್ಸ್ ಗೆಲುವಿಗೆ 29 ರನ್ ಬೇಕಿತ್ತು, ಆದರೆ ಪಂಜಾಬ್ ಕಿಂಗ್ಸ್ 27 ರನ್ ಗಳಿಸುವ ಮೂಲಕ 2 ರನ್‌ಗಳಿಂದ ಸೋಲೊಪ್ಪಿಕೊಂಡಿತು.












Click it and Unblock the Notifications