PBKS VS SRH: ಪಂಜಾಬ್ ಕಿಂಗ್ಸ್-ಎಸ್‌ಆರ್‌ಎಚ್ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು?
PBKS VS SRH IPL 2026: ಮುಲ್ಲನ್‌ಪುರ್‌ನಲ್ಲಿ ಇಂದು (ಏಪ್ರಿಲ್ 11) ಮಧ್ಯಾಹ್ನ ನಡೆಯಲಿರುವ ಐಪಿಎಲ್ 2026ರ 17ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಈ ನಡುವೆಯೇ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹಾಗಾದ್ರೆ, ಹವಾಮಾನ ಇಲಾಖೆ ಹೇಳೋದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಚಂಡೀಗಢದ ಮುಲ್ಲನ್‌ಪುರ್‌ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದ್ದು, ಎರಡೂ ತಂಡಗಳು ಈ ಸೆಣಸಾಟದಲ್ಲಿ ಭಾರಿ ಪೈಪೋಟಿಗೆ ನೀಡುವ ಗುರಿ ಹೊಂದಿವೆ.

ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಪಿಬಿಕೆಎಸ್ ಪ್ಲಾನ್
ಮುಲ್ಲನ್‌ಪುರ ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುತ್ತಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕತ್ವವನ್ನು ಇಶಾನ್ ಕಿಶನ್ ವಹಿಸಿದ್ದಾರೆ. ಪಂಜಾಬ್ ಈ ಋತುವಿನಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದು, ಅಂಕಪಟ್ಟಿಯಲ್ಲಿ ಮೇಲೇರಲು ಪ್ರಯತ್ನಿಸುತ್ತಿದೆ. ಮತ್ತೊಂದೆಡೆ, ಹೈದರಾಬಾದ್ ತಂಡವು ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ.
ಪಂಜಾಬ್ ಕಿಂಗ್ಸ್ ತಂಡವು ಈ ಟೂರ್ನಿಯಲ್ಲಿ ಪ್ರಸ್ತುತ ಅಜೇಯವಾಗಿ ಓಟ ಮುಂದುವರೆಸಿದೆ. ಆಡಿರುವ ಮೂರು ಪಂದ್ಯಗಳಲ್ಲಿ, ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು ಎರಡು ಪಂದ್ಯಗಳನ್ನು ಗೆದ್ದಿದ್ದು, ಮತ್ತೊಂದು ಪಂದ್ಯವು ಮಳೆಯಿಂದ ರದ್ದಾದ ಹಿನ್ನೆಲೆ ಒಂದು ಅಂಕವನ್ನು ಗಿಟ್ಟಿಕೊಂಡಿದೆ. ಈ ಮೂಲಕ ಪ್ರಸ್ತುತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿ ಅಗ್ರಸ್ಥಾನಕ್ಕೇರುವ ಭರವಸೆಯಲ್ಲಿದೆ.
ಮತ್ತೊಂದೆಡೆ, ಒಂದು ಗೆಲುವು ಮತ್ತು ಎರಡು ಸೋಲುಗಳೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಈಗ ಭರ್ಜರಿ ಫಾರ್ಮ್‌ನಲ್ಲಿರುವ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿರುವ ಹೈದರಾಬಾದ್, ಈ ಪಂದ್ಯದ ಮೂಲಕ ತನ್ನ ಪ್ರದರ್ಶನವನ್ನು ಸುಧಾರಿಸಿಕೊಳ್ಳುವ ಭರವಸೆಯಲ್ಲಿದೆ.
ಹವಾಮಾನ ಇಲಾಖೆ ಹೇಳೋದೇನು?
ಅಕ್ಯುವೆದರ್ ಪ್ರಕಾರ, ಚಂಡೀಗಢದಲ್ಲಿ ಪಂದ್ಯದ ಸಮಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ. ಕೇವಲ ಶೇಕಡಾ 1 ರಷ್ಟು ಮಾತ್ರ ಇದೆ. ಒಟ್ಟಿನಲ್ಲಿ ಯಾವುದೇ ಮಳೆಯ ಅಡಚಣೆ ಇಲ್ಲದ ಕಾರಣ, ಕ್ರಿಕೆಟ್ ಪ್ರೇಮಿಗಳಿಗೆ ಇಂದು ಭರ್ಜರಿ ಮನರಂಜನೆ ಸಿಗುವುದು ಖಚಿತವಾಗಿದೆ.
ಪಂಜಾಬ್ ಕಿಂಗ್ಸ್, ಎಸ್‌ಆರ್‌ಎಚ್ ತಂಡಗಳು
ಪಂಜಾಬ್ ಕಿಂಗ್ಸ್ ತಂಡ: ಪ್ರಭ್‌ಸಿಮ್ರನ್ ಸಿಂಗ್, ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೋಯಿನಿಸ್, ಅಜ್ಮತುಲ್ಲಾ ಒಮರ್ಜಾಯ್, ಮಾರ್ಕೊ ಜಾನ್ಸೆನ್, ಹರ್‌ಪ್ರೀತ್ ಬ್ರಾರ್, ಯುಜ್ವೇಂದ್ರ ಚಹಾಲ್, ಅರ್ಶ್‌ದೀಪ್ ಸಿಂಗ್, ಮುಶೀರ್ ಖಾನ್, ಪೈಲಾ ಅವಿನಾಶ್, ಹರ್ನೂರ್ ಪನ್ನು, ಸೂರ್ಯಾಂಶ್ ಶೆಡ್ಗೆ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಲಾಕಿ ಫರ್ಗುಸನ್, ವೈಶಾಖ್ ವಿಜಯ್ ಕುಮಾರ್, ಯಶ್ ಠಾಕೂರ್, ವಿಷ್ಣು ವಿನೋದ್, ಕೂಪರ್ ಕಾನೋಲಿ, ಬೆನ್ ದ್ವಾರ್ಶುಯಿಸ್, ಪ್ರವೀಣ್ ದುಬೆ, ವಿಶಾಲ್ ನಿಶಾದ್.
ಸನ್‌ರೈಸರ್ಸ್ ಹೈದರಾಬಾದ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಆರ್.ಸ್ಮರಣ್, ಇಶಾನ್ ಕಿಶನ್ (ಹಂಗಾವಿ ನಾಯಕ), ಹೆನ್ರಿಚ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್, ಬ್ರೈಡನ್ ಕಾರ್ಸೆ, ಜಯದೇವ್ ಉನದ್ಕತ್, ಇಶಾನ್ ಮಾಲಿಂಗ, ಜೀಶನ್ ಅನ್ಸಾರಿ, ಶಿವಾಂಗ್ ಕುಮಾರ್, ಸಲಿಲ್ ಅರೋರಾ, ಸಾಕಿಬ್ ಹುಸೇನ್, ಓಂಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆತ್ರಾ, ಲಿಯಾಮ್ ಲಿವಿಂಗ್‌ಸ್ಟೋನ್, ಶಿವಂ ಮಾವಿ, ಜಾಕ್ ಎಡ್ವರ್ಡ್ಸ್.
ಪಂದ್ಯದ ಸ್ಥಳ, ಸಮಯ
* ಸ್ಥಳ: ಮುಲ್ಲನ್‌ಪುರ್‌ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
* ಸಮಯ: ಮಧ್ಯಾಹ್ನ 3:30ಕ್ಕೆ (ಭಾರತೀಯ ಕಾಲಮಾನ)












Click it and Unblock the Notifications