PBKS vs KKR: 17 ವರ್ಷಗಳ ದಾಖಲೆ ಉಡೀಸ್; ರೋಚಕ ಪಂದ್ಯದಲ್ಲಿ ಗೆದ್ದ ಪಂಜಾಬ್ ಕಿಂಗ್ಸ್
ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಕೆಕೆಆರ್ ವಿರುದ್ಧ 16 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಚಹಾಲ್ ಅವರ ಮಾರಕ ದಾಳಿಗೆ ತತ್ತರಿಸಿದ ಕೆಕೆಆರ್ 95 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಕೆಟ್ಟ ದಾಖಲೆ ಮಾಡಿದೆ.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಕೆಕೆಆರ್ ಬಿಗಿಯಾದ ಬೌಲಿಂಗ್ ದಾಳಿಗೆ ಸಿಲುಕಿ ತತ್ತರಿಸಿದ ಪಂಜಾಬ್ ಕಿಂಗ್ಸ್ 15.3 ಓವರ್ ಗಳಲ್ಲೇ 111 ರನ್ ಗಳಿಗೆ ಆಲೌಟ್ ಆಯಿತು. ಹರ್ಷಿತ್ ರಾಣಾ ಆರಂಭದಲ್ಲೇ 3 ವಿಕೆಟ್ ಪಡೆಯುವ ಮೂಲಕ ಪಂಜಾಗ್‌ಗೆ ದೊಡ್ಡ ಆಘಾತ ನೀಡಿದರು.

ಕೆಕೆಆರ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಗೆ ಕೆಕೆಆರ್ ಬೌಲರ್ ಗಳು ಅವಕಾಶ ಕೊಡಲೇ ಇಲ್ಲ. ರನ್ ಗಳಿಸುವ ಮುನ್ನವೇ ಪಂಜಾಬ್ ಕಿಂಗ್ಸ್ ನಾಯಕನ ವಿಕೆಟ್ ಪಡೆದರು. ಪ್ರಿಯಾಂಶ್ ಆರ್ಯ 12 ಎಸೆತಗಳಲ್ಲಿ 22 ರನ್ ಗಳಿಸಿದರೆ, ಪ್ರಬ್‌ಸಿಮ್ರನ್ ಸಿಂಗ್ 15 ಎಸೆತಗಳಲ್ಲಿ 30 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್ ಗಳು ರನ್ ಗಳಿಸಲು ತಡಕಾಡಿದರು. ಶಶಾಂಕ್ ಸಿಂಗ್ 18 ರನ್ ಗಳಿಸಿದರೆ, ನೇಹಲ್ ವಧೇರಾ 10 ರನ್ ಗಳಿಸಿದರು.
ವೈಭವ್ ಅರೋರ ಮತ್ತು ಆನ್ರಿಚ್ ನೋಕಿಯಾ ತಲಾ 1 ವಿಕೆಟ್ ಪಡೆದರು. ಹರ್ಷಿತ್ ರಾಣಾ 3 ವಿಕೆಟ್ ಪಡೆದು ಮಿಂಚಿದರು. ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದುಕೊಂಡರು.
ಚಹಾಲ್ ಅಬ್ಬರಕ್ಕೆ ತತ್ತರಿಸಿದ ಕೆಕೆಆರ್
112 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ಪಂಜಾಬ್ ಕಿಂಗ್ಸ್ ಬೌಲರ್ ಗಳ ಬಿಗಿಯಾಗ ಬೌಲಿಂಗ್‌ಗೆ ದಿಕ್ಕೆಟ್ಟಿತು. ಕ್ವಿಂಟನ್ ಡಿ ಕಾಕ್ 2 ರನ್ ಗಳಿಸಿ ಔಟಾದರೆ ಸುನಿಲ್ ನರೈನ್ 5 ರನ್ ಗಳಿಸಿ ಔಟಾದರು. ಬಳಿಕ ಜೊತೆಯಾದ ಆಂಗ್‌ಕ್ರಿಶ್ ರಘುವಂಶಿ ಮತ್ತು ಅಜಿಂಕ್ಯ ರಹಾನೆ 3ನೇ ವಿಕೆಟ್‌ಗೆ 55 ರನ್‌ಗಳನ್ನು ಕಲೆಹಾಕಿದರು. ಆದರೆ ರಹಾನೆ ಔಟಾಗುತ್ತಿದ್ದಂತೆ ಕೆಕೆಆರ್ ದಾರಿ ತಪ್ಪಿತು.
62 ರನ್‌ಗಳಿಗೆ 3ನೇ ವಿಕೆಟ್ ಬಿದ್ದರೆ 79 ರನ್‌ಗಳಿಸುವಷ್ಟರಲ್ಲಿ 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆಂಡ್ರೆ ರಸೆಲ್ 11 ಎಸೆತಗಳಲ್ಲಿ 17 ರನ್ ಗಳಿಸಿದರೂ ಮಾರ್ಕೊ ಯಾನ್ಸೆನ್ ಅವರ ಬೌಲಿಂಗ್‌ನಲ್ಲಿ ಬ್ಯಾಟ್‌ಗೆ ಬಡಿದ ಚೆಂಡು ವಿಕೆಟ್‌ಗೆ ಬಿದ್ದಿದ್ದರಿಂದ ಕೆಕೆಆರ್ 95 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಯುಜ್ವೇಂದ್ರ ಚಹಾಲ್ 4 ಓವರ್ ಗಳಲ್ಲಿ 28 ರನ್ ನೀಡಿ 4 ವಿಕೆಟ್ ಪಡೆದುಕೊಂಡರು.
17 ವರ್ಷಗಳ ದಾಖಲೆ ಉಡೀಸ್
2009ರಲ್ಲಿ ಸಿಎಸ್‌ಕೆ ತಂಡವು ಆರ್ ಸಿಬಿ ವಿರುದ್ಧ 116 ರನ್‌ಗಳನ್ನು ಡಿಫೆಂಡ್ ಮಾಡಿಕೊಂಡಿದ್ದು ಈವರೆಗಿನ ದಾಖಲೆಯಾಗಿತ್ತು. ಈಗ ಪಂಜಾಬ್ ಕಿಂಗ್ಸ್ 111 ರನ್‌ಗಳನ್ನು ಡಿಫೆಂಡ್ ಮಾಡಿಕೊಂಡು ಐಪಿಎಲ್‌ನಲ್ಲಿ ಅತಿ ಕಡಿಮೆ ಮೊತ್ತವನ್ನು ಡಿಫೆಂಡ್ ಮಾಡಿಕೊಂಡ ಸಾಧನೆ ಮಾಡಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications