RCB vs PBKS: ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ; ಪ್ಲೇಯಿಂಗ್ ಇಲೆವೆನ್ ಹೀಗಿದೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025ರ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) / ಪಂಜಾಬ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ತವರಿನ ಹೊರಗೆ ಆಡಿರುವ ನಾಲ್ಕೂ ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿ ತವರಿನಲ್ಲಿ ಆಡಿದ ಎರಡೂ ಪಂದ್ಯಗಳನ್ನು ಸೋತಿದ್ದು ಮೊದಲ ಗೆಲುವಿನ ಹುಡುಕಾಟದಲ್ಲಿದೆ.
ಬೆಂಗಳೂರಿನಲ್ಲಿ ಮಳೆಯ ಕಾರಣದಿಂದ ಪಂದ್ಯ ಆರಂಭವಾಗುವುದು ತಡವಾಗಿದೆ. ಸಂಜೆಯಿಂದಲೇ ಮಳೆ ಆರಂಭವಾಗಿದ್ದು 9 ಗಂಟೆಯ ಸುಮಾರಿಗೆ ಮಳೆ ಸಂಪೂರ್ಣವಾಗಿ ನಿಂತ ಬಳಿಕ 9.30ಕ್ಕೆ ಟಾಸ್ ನಡೆಯಿತು. ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಮತ್ತು ಬೌಲಿಂಗ್ ಬಲವನ್ನು ಹೊಂದಿದ್ದು ರೋಚಕ ಪಂದ್ಯ ನಡೆಯಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. 20 ಓವರ್ ಗಳ ಪಂದ್ಯದಲ್ಲಿ ಕಡಿತವಾಗಿದ್ದು ಇದೀಗ 14 ಓವರ್ ಗಳ ಪಂದ್ಯ ನಡೆಯಲಿದೆ. 4 ಓವರ್ ಪವರ್ ಪ್ಲೇ ಇರಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಿದ ಕೊನೆಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಅವರ ಅಮೋಘ ಬ್ಯಾಟಿಂಗ್ ಆರ್ ಸಿಬಿ ಗೆಲುವಿಗೆ ಸಹಕಾರಿಯಾಗಿತ್ತು. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಆರ್ ಸಿಬಿ ಸ್ಪೋಟಕ ಆಟ ಆಡಲು ಸಜ್ಜಾಗಿದೆ.
ಪಂಜಾಬ್ ಕಿಂಗ್ಸ್ ಕೂಡ ತಮ್ಮ ಕೊನೆಯ ಪಂದ್ಯದಲ್ಲಿ ಕೆಕೆಆರ್ ವಿರುದ್ಧ 16 ರನ್‌ಗಳ ರೋಚಕ ಗೆಲುವು ಸಾಧಿಸಿತ್ತು. 111 ರನ್ ಗಳಿಸಿದರೂ ಅದನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ಪಂಜಾಬ್ ಬೌಲರ್ ಗಳು ಯಶಸ್ವಿಯಾಗಿದ್ದರು. ಕೆಕೆಆರ್ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಕಟ್ಟಿಹಾಕಿರುವ ಪಂಜಾಬ್ ಕಿಂಗ್ಸ್ ಬೌಲರ್ ಗಳು ಆರ್ ಸಿಬಿ ಬ್ಯಾಟರ್ ಗಳನ್ನು ಕಟ್ಟಿಹಾಕುವ ವಿಶ್ವಾಸದಲ್ಲಿದ್ದಾರೆ.
ಉಭಯ ತಂಡಗಳ ಆಡುವ ಬಳಗ
ಆರ್ ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್, ಸುಯಶ್ ಶರ್ಮಾ.
ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಶಶಾಂಕ್ ಸಿಂಗ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಯುಜ್ವೇಂದ್ರ ಚಾಹಲ್, ಅರ್ಷ್‌ದೀಪ್ ಸಿಂಗ್, ಹಪ್ರೀತ್ ಬ್ರಾರ್.












Click it and Unblock the Notifications