Paris Paralympics: ಅವನಿ ಲೇಖರಾ, ಮೋನಾ ಅಗರ್ವಾಲ್‌ಗೆ ಪ್ರಧಾನಿ ಮೋದಿ ಅಭಿನಂದನೆ
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಒಂದು ಚಿನ್ನದ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ ಎನ್ನುವ ಕೊರಗನ್ನು ಪ್ಯಾರಾಲಿಂಪಿಕ್ಸ್‌ನಲ್ಲಿ ಅವನಿ ಲೇಖರಾ ನಿವಾರಿಸಿದ್ದಾರೆ. ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಅವನಿ ಲೇಖರಾ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್‌ಎಚ್1 ಸ್ಪರ್ಧೆಯಲ್ಲಿ ಚಿನ್ನ ಗೆದ್ದರೆ, ಮೋನಾ ಅಗರ್ವಾಲ್ ಕಂಚು ಗೆದ್ದಿದ್ದಾರೆ. ಇಬ್ಬರು ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಆರ್2 ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್‌ಎಚ್1 ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವನಿ ಲೇಖರ ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಮೂರು ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳಾ ಅಥ್ಲೀಟ್ ಎಂದು ದಾಖಲೆ ಬರೆದಿದ್ದಾರೆ. ಅವರ ಸಾಧನೆ ಭಾರತವನ್ನು ಹೆಮ್ಮೆ ಪಡುವಂತೆ ಮಾಡುತ್ತದೆ ಎಂದು ಮೋದಿ ಹೇಳಿದ್ದಾರೆ.

ಮೋನಾ ಅಗರ್ವಾಲ್ ಅವರನ್ನು ಮೋದಿ ಪ್ರಶಂಸಿದ್ದಾರೆ. "ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಆರ್2 ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್‌ಎಚ್1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಮೋನಾ ಅಗರ್ವಾಲ್ ಅವರಿಗೆ ಅಭಿನಂದನೆಗಳು. ಆಕೆಯ ಗಮನಾರ್ಹ ಸಾಧನೆಯು ಆಕೆಯ ಸಮರ್ಪಣೆ ಮತ್ತು ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದ. ಮೋನಾ ಅವರ ಸಾಧನೆಗೆ ಭಾರತ ಹೆಮ್ಮೆ ಪಡುತ್ತದೆ" ಎಂದು ಹೇಳಿದ್ದಾರೆ.
ಅವನಿ ಲೇಖರಾ ಸಾಧನೆ
ಅವನಿ ಲೇಖರಾ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಇದೇ ವಿಭಾಗದಲ್ಲಿ ಅವರು ಚಿನ್ನದ ಪದಕ ಗೆದ್ದಿದ್ದರು. ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳಾ ಅಥ್ಲೀಟ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಬೆಳ್ಳಿ ಗೆದ್ದ ಮನೀಶ್ ನರ್ವಾಲ್
ಭಾರತ ಮತ್ತೊಬ್ಬ ಶೂಟರ್ ಮನೀಶ್ ನರ್ವಾಲ್ ಕೂಡ ಬೆಳ್ಳಿ ಪದಕ ಗೆಲ್ಲುವ ಮೂಲಕ ಒಂದೇ ದಿನ ಭಾರತಕ್ಕೆ ಮೂರು ಪದಕ ಸಿಕ್ಕಂತಾಗಿದೆ. 22 ವರ್ಷದ ಮನೀಶ್ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್‌ಎಚ್ 1 ಸ್ಪರ್ಧೆಯಲ್ಲಿ ಒಟ್ಟು 234.9 ಅಂಕಗಳೊಂದಿಗೆ ಬೆಳ್ಳಿ ಗೆದ್ದುಕೊಂಡರು, ದಕ್ಷಿಣ ಕೊರಿಯಾದ ಶೂಟರ್ ವಿರುದ್ಧ ಕಡಿಮೆ ಅಂತರದಲ್ಲಿ ಚಿನ್ನದ ಪದಕ ಗೆಲ್ಲುವ ಅವಕಾಶ ತಪ್ಪಿಸಿಕೊಂಡರು.
ಇದು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಇದೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದ ಮನೀಶ್ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು.












Click it and Unblock the Notifications