Champions Trophy: ಭಾರತದ ಆಟವನ್ನು ಶ್ಲಾಘಿಸಿದ ಪ್ರಧಾನಿ ಮೋದಿ; ಮನೆಮಗನ ಆಟ ಖುಷಿಕೊಟ್ಟಿದೆ ಎಂದ ಸಿಎಂ ಸಿದ್ದರಾಮಯ್ಯ!

ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾವಳಿಯಲ್ಲಿ ಅಜೇಯವಾಗಿ ಫೈನಲ್ ಪ್ರವೇಶಿಸಿದ್ದು ಫೈನಲ್‌ನಲ್ಲಿ ಪಂದ್ಯ ಗೆಲ್ಲುವಲ್ಲಿ ಯಶಸ್ವಿಯಾಯಿತು. ಭಾರತದ ಈ ಗೆಲುವಿಗೆ ಕೋಟ್ಯಂತರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತ ಗೆಲ್ಲುತ್ತಿದ್ದಂತೆ ಕೋಟ್ಯಂತರ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಲಕ್ಷಾಂತರ ಅಭಿಮಾನಿಗಳು ಪೋಸ್ಟ್ ಹಾಕಿ ಭಾರತ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯ ನಾಯಕರು, ಸಿನಿಮಾ ನಟರು ಸೇರಿದಂತೆ ಹಲವು ಮಂದಿ ಭಾರತದ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

pm narendra modi and many leaders congratulate india for winning champions trophy

ಪ್ರಧಾನಿ ನರೇಂದ್ರ ಮೋದಿ ಭಾರತದ ಗೆಲುವಿಗೆ ಶುಭಾಶಯ ತಿಳಿಸಿ ಪೋಸ್ಟ್ ಹಾಕಿದ್ದಾರೆ. ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ! ಎಂದು ಭಾರತದ ಆಟವನ್ನು ಹೊಗಳಿರುವ ಅವರು, "ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಪಂದ್ಯಾವಳಿಯಾದ್ಯಂತ ಅದ್ಭುತವಾಗಿ ಆಡಿದ್ದಾರೆ. ಅದ್ಭುತ ಸರ್ವತೋಮುಖ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು." ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನೆಮಗನ ಆಟ ಖುಷಿ ಕೊಟ್ಟಿದೆ ಎಂದ ಸಿದ್ದರಾಮಯ್ಯ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು ಭಾರತದ ಆಟವನ್ನು ಮೆಚ್ಚಿಕೊಂಡಿದ್ದಾರೆ. "ಅಮೋಘ‌ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು. ಬೌಲಿಂಗ್, ಬ್ಯಾಟಿಂಗ್, ಕ್ಷೇತ್ರರಕ್ಷಣೆ ಹೀಗೆ ಎಲ್ಲಾ ವಿಭಾಗಗಳಲ್ಲೂ ನಮ್ಮವರ ಆಟ ಹುಬ್ಬೇರಿಸುವಂತಿತ್ತು. ಪ್ರತಿ ಪಂದ್ಯದಲ್ಲೂ ರನ್ ಗಳಿಸುತ್ತಾ, ನಿರಂತರವಾಗಿ ತಂಡವನ್ನು ಗೆಲುವಿನ ದಡ ಸೇರಿಸುತ್ತಿರುವ ನಾಡಿನ ಮನೆಮಗ ಕೆ.ಎಲ್. ರಾಹುಲ್ ಆಟ ಹೆಚ್ಚು ಖುಷಿಕೊಟ್ಟಿದೆ. ಭಾರತ ಗೆದ್ದಿದೆ, ಈ ಸಲ ಕಪ್ ನಮ್ದೆ." ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಂದ್ಯವನ್ನು ನೇರಪ್ರಸಾರದಲ್ಲಿ ನೋಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಭಾರತದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. "ಶುಭಾಶಯಗಳು ಟೀಂ ಇಂಡಿಯಾ! ಚಾಂಪಿಯನ್ಸ್ ಟ್ರೋಫಿ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ ಟೀಂ ಇಂಡಿಯಾಗೆ ಹಾರ್ದಿಕ ಶುಭಾಶಯಗಳು. ರೋಹಿತ್ ಶರ್ಮಾ ಅವರ 76 ರನ್ ಮತ್ತು ಕೆಎಲ್ ರಾಹುಲ್ ಅವರ ಅಜೇಯ 34 ರನ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದೆ. ಟೀಂ ಇಂಡಿಯಾದ ಒಗ್ಗಟ್ಟಿನ ಪ್ರದರ್ಶನ ಶ್ಲಾಘನೀಯ. ಇಂದು ಕನಕಪುರದಲ್ಲಿ ಪಂದ್ಯಾವಳಿಯ ಕೊನೆಯ ಕ್ಷಣಗಳನ್ನು ವೀಕ್ಷಿಸಿದೆ." ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+