Virat Kohli: ಪ್ರಧಾನಿ ಮೋದಿಯಿಂದ ಸಚಿನ್‌ವರೆಗೆ : ಕೊಹ್ಲಿ ಶತಕದ ಬಗ್ಗೆ ಪ್ರಮುಖರು ಹೇಳಿದ್ದೇನು?
ಮುಂಬೈನ ವಾಂಖೆಡೆ ಅಂಗಳದಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ ನಿರ್ಮಿಸಿದರು. ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ಸಿಡಿಸುವ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು, ಇತಿಹಾಸ ನಿರ್ಮಿಸಿದರು.
ನ್ಯೂಜಿಲೆಂಡ್ ವಿರುದ್ಧದ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ವಾಂಖೆಡೆಯಲ್ಲಿ ಸಚಿನ್ ತೆಂಡೂಲ್ಕರ್ ಅವರು ಕೂಡ ಹಾಜರಿದ್ದು, ವಿರಾಟ್ ಕೊಹ್ಲಿ ಅವರ ಶತಕವನ್ನು ಕಣ್ತುಂಬಿಕೊಂಡರು.

ವಿರಾಟ್ ಕೊಹ್ಲಿ ಆಟಕ್ಕೆ ಜಗತ್ತಿನ ಹಲವು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿವರೆಗೆ ಹಲವರು ಕೊಹ್ಲಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Today, @imVkohli has not just scored his 50th ODI century but has also exemplified the spirit of excellence and perseverance that defines the best of sportsmanship.
— Narendra Modi (@narendramodi) November 15, 2023
This remarkable milestone is a testament to his enduring dedication and exceptional talent.
I extend heartfelt… pic.twitter.com/MZKuQsjgsR
ನರೇಂದ್ರ ಮೋದಿ ಹೇಳಿದ್ದೇನು?
ಇಂದು, ವಿರಾಟ್ ಕೊಹ್ಲಿ ಅವರು ಕೇವಲ ತಮ್ಮ 50 ನೇ ಏಕದಿನ ಶತಕವನ್ನು ಗಳಿಸಿರುವುದು ಮಾತ್ರವಲ್ಲ ಅತ್ಯುತ್ತಮ ಕ್ರೀಡಾ ಮನೋಭಾವವನ್ನು ವ್ಯಾಖ್ಯಾನಿಸುವ ಶ್ರೇಷ್ಠತೆ ಮತ್ತು ಪರಿಶ್ರಮದ ಮನೋಭಾವವನ್ನು ಸಹ ಪ್ರದರ್ಶಿಸಿದ್ದಾರೆ. ಈ ಗಮನಾರ್ಹ ಮೈಲಿಗಲ್ಲು ಅವರ ನಿರಂತರ ಸಮರ್ಪಣೆ ಮತ್ತು ಅಸಾಧಾರಣ ಪ್ರತಿಭೆಗೆ ಸಾಕ್ಷಿಯಾಗಿದೆ.
ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರು ಮುಂದಿನ ಪೀಳಿಗೆಗೆ ಮಾದರಿಯಾಗುವುದನ್ನು ಮುಂದುವರಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಕೊಹ್ಲಿ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.
The first time I met you in the Indian dressing room, you were pranked by other teammates into touching my feet. I couldn’t stop laughing that day. But soon, you touched my heart with your passion and skill. I am so happy that that young boy has grown into a ‘Virat’ player.
— Sachin Tendulkar (@sachin_rt) November 15, 2023
I… pic.twitter.com/KcdoPwgzkX
ಸಚಿನ್ ತೆಂಡೂಲ್ಕರ್ ಹೇಳಿದ್ದೇನು?
ನಾನು ನಿಮ್ಮನ್ನು ಮೊದಲ ಬಾರಿಗೆ ಭಾರತೀಯ ಡ್ರೆಸ್ಸಿಂಗ್ ರೂಮ್‌ನಲ್ಲಿ ಭೇಟಿಯಾದಾಗ, ನನ್ನ ಪಾದಗಳನ್ನು ಮುಟ್ಟುವಂತೆ ಇತರ ತಂಡದ ಸದಸ್ಯರು ನಿಮ್ಮನ್ನು ತಮಾಷೆ ಮಾಡಿದ್ದರು. ಆ ದಿನ ನನಗೆ ನಗು ತಡೆಯಲಾಗಲಿಲ್ಲ. ಆದರೆ ಶೀಘ್ರದಲ್ಲೇ, ನಿಮ್ಮ ಉತ್ಸಾಹ ಮತ್ತು ಕೌಶಲ್ಯದಿಂದ ನೀವು ನನ್ನ ಹೃದಯವನ್ನು ಮುಟ್ಟಿದ್ದೀರಿ. ಆ ಚಿಕ್ಕ ಹುಡುಗ 'ವಿರಾಟ್' ಆಟಗಾರನಾಗಿ ಬೆಳೆದಿದ್ದಕ್ಕೆ ನನಗೆ ತುಂಬಾ ಖುಷಿಯಾಗಿದೆ.
ಒಬ್ಬ ಭಾರತೀಯ ನನ್ನ ದಾಖಲೆಯನ್ನು ಮುರಿದಿದ್ದಕ್ಕೆ ನಾನು ಹೆಚ್ಚು ಸಂತೋಷಪಡುತ್ತೇನೆ. ವಿಶ್ವಕಪ್ ಸೆಮಿ-ಫೈನಲ್‌ನಂತಹ ದೊಡ್ಡ ವೇದಿಕೆಯಲ್ಲಿ ಇದನ್ನು ಮಾಡಿರುವುದಕ್ಕೆ ಇನ್ನೂ ಸಂತೋಷವಿದೆ ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.
ಇಂಗ್ಲೆಂಡ್‌ನ ಫುಟ್‌ಬಾಲ್ ತಾರೆ ಡೇವಿಡ್ ಬೆಕ್‌ಹ್ಯಾಮ್ ಕೊಹ್ಲಿ ಶತಕವನ್ನು ಶ್ಲಾಘಿಸಿದ್ದಾರೆ. ಸರಿಯಾದ ಸಮಯದಲ್ಲಿ ನಾನು ಭಾರತದಲ್ಲಿದ್ದೇನೆ, ದೀಪಾವಳಿ ಸಂಭ್ರಮವನ್ನು ನೋಡಿದ್ದೇನೆ, ಈಗ ವಿರಾಟ್ ಕೊಹ್ಲಿ 50ನೇ ಶತಕವನ್ನು ನೋಡಿದೆ" ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಗೂಗಲ್ ಇಂಡಿಯಾ ಕೂಡ ಕೊಹ್ಲಿ ಶತಕವನ್ನು ಸಂಭ್ರಮಿಸಿದ್ದು, ಇಂದು ನಗಲು ನೂರು ಕಾರಣಗಳಿವೆ ಎಂದು ಕೊಹ್ಲಿ ಶತಕವನ್ನು ಶ್ಲಾಘಿಸಿದೆ.
ಇವರ ಜೊತೆ ಖ್ಯಾತ ಟೆನಿಸ್ ತಾರೆ ನೊವಾಕ್ ಜೋಕೊವಿಕ್, ತೆಲುಗು ನಟ ಜ್ಯೂನಿಯರ್ ಎನ್‌ಟಿಆರ್, ಹಿಂದಿ ನಟ ಅಜಯ್ ದೇವಗನ್, ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಸೇರಿದಂತೆ ಹಲವು ಗಣ್ಯರು ಕೊಹ್ಲಿ ಶತಕದ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications