GT vs DC: ಇಬ್ಬರು ಕನ್ನಡಿಗರ ವಿಕೆಟ್ ಪಡೆದು ಪರ್ಪಲ್‌ ಕ್ಯಾಪ್ ಪಡೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ಈವರೆಗಿನ ಐಪಿಎಲ್‌ನಲ್ಲಿ ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ, 2025ರ ಆವೃತ್ತಿಯಲ್ಲಿ ಮಾತ್ರ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡುತ್ತಿದ್ದು ಗುಜರಾತ್‌ ಟೈಟಾನ್ಸ್‌ನ ಪ್ರಮುಖ ಬೌಲರ್ ಆಗಿದ್ದಾರೆ. ಪ್ರತಿ ಪಂದ್ಯದಲ್ಲೂ ವಿಕೆಟ್ ಪಡೆಯುತ್ತಿರುವ ಅವರು ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಗಾಯದಿಂದ ಚೇತರಿಸಿಕೊಂಡ ಬಳಿಕ ಪ್ರಸಿದ್ಧ್ ಕೃಷ್ಣ ಮಾರಕ ಬೌಲಿಂಗ್ ಮಾಡುತ್ತಿದ್ದಾರೆ. ಪಂದ್ಯಾವಳಿಯಲ್ಲಿ ಎರಡನೇ ಬಾರಿಗೆ 4 ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದು, ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 4 ವಿಕೆಟ್ ಪಡೆಯುವ ಮೂಲಕ ಇದೀಗ ಹೆಚ್ಚು ವಿಕೆಟ್ ಪಡೆದ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ (ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಬಳಿಕ).

Prasidh krishna purple cap ahmedabad performance

ನಾಲ್ಕು ವಿಕೆಟ್ ಪಡೆದು ಮಿಂಚಿದ ಕೃಷ್ಣ

ಶನಿವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಇಬ್ಬರು ಕನ್ನಡಿಗರ ವಿಕೆಟ್ ಪಡೆದರು. ಕರುಣ್ ನಾಯರ್, ಕೆಎಲ್ ರಾಹುಲ್ ವಿಕೆಟ್ ಪಡೆದ ಬಳಿಕ, ಅಕ್ಷರ್ ಪಟೇಲ್ ಮತ್ತು ವಿಪ್ರಜ್ ನಿಗಮ್ ಅವರ ವಿಕೆಟ್ ಪಡೆಯುವ ಮೂಲಕ ಮಿಂಚಿದರು. ಈವರೆಗೂ ಆಡಿರುವ 7 ಪಂದ್ಯಗಳಲ್ಲಿ ಪ್ರಸಿದ್ಧ್ ಕೃಷ್ಣ14.36 ಸರಾಸರಿಯಲ್ಲಿ 14 ವಿಕೆಟ್ ಪಡೆಯುವ ಮೂಲಕ ಮೊದಲ ಸ್ಥಾನಕ್ಕೇರಿದರು.

ಈ ಬಾರಿ ಐಪಿಎಲ್‌ನಲ್ಲಿ ಕನ್ನಡಿಗರು ಸಿಕ್ಕಿದ ಅವಕಾಶದಲ್ಲೇ ಉತ್ತಮ ಪ್ರದರ್ಶನ ನೀಡುವ ಮೂಲಕ ಮಿಂಚುತ್ತಿದ್ದಾರೆ. ಆರ್ ಸಿಬಿ ತಂಡದಲ್ಲಿ ದೇವದತ್ ಪಡಿಕ್ಕಲ್ ತಕ್ಕಮಟ್ಟಿಗೆ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕರುಣ್ ನಾಯರ್ ಮತ್ತು ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್‌ನ ಪ್ರಮುಖ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ವೈಶಾಖ್ ವಿಜಯ್‌ಕುಮಾರ್ ಮೊದಲ ಪಂದ್ಯದಲ್ಲೇ ಉತ್ತಮ ಬೌಲಿಂಗ್ ಮೂಲಕ ಪಂಜಾಬ್‌ಕಿಂಗ್ಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಗುಜರಾತ್ ಟೈಟಾನ್ಸ್‌ಗೆ ಗೆಲುವು

ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ಕಳೆದುಕೊಂಡು 203 ರನ್ ಗಳಿಸಿತು. ಈ ಸವಾಲಿನ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ 19.2 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಗಳಿಸುವ ಮೂಲಕ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+