IND vs ENG: ಫ್ಲಾಪ್ ಆಟಗಾರರು ಔಟ್: ಮೂರನೇ ಸ್ಥಾನದಲ್ಲಿ ಆಡುತ್ತಾರೆ ವಿರಾಟ್?
ಟೀಮ್ ಇಂಡಿಯಾ 2024ರ ಟಿ20 ವಿಶ್ವಕಪ್ ಸೆಮಿಫೈನಲ್ ಹಂತವನ್ನು ತಲುಪಿದೆ. ಇಂದು ರೋಹಿತ್ ಪಡೆ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಉಭಯ ತಂಡಗಳು ಸಮಬಲದ ಪ್ರದರ್ಶನ ನೀಡಿದರೆ, ಬ್ಲ್ಯೂ ಬಾಯ್ಸ್ ಈ ಬಾರಿಯ ವಿಶ್ವಕಪ್‌ನಲ್ಲಿ ಚೇತೋಹಾರಿ ಪ್ರದರ್ಶನ ನೀಡಿದೆ.
ಟೀಮ್ ಇಂಡಿಯಾ ಪ್ರಸಕ್ತ ಟೂರ್ನಿಯಲ್ಲಿ ಅಜೇಯ ಓಟವನ್ನು ಮುಂದುವರೆಸಿದೆ. ಸೆಮಿಫೈನಲ್ ಗೆದ್ದು ಫೈನಲ್ ಪ್ರವೇಶಿಸುವ ಕನಸು ರೋಹಿತ್ ಬಾಯ್ಸ್‌ದ್ದಾಗಿದೆ. ಈ ಬಾರಿ 2022ರ ಸೆಮಿಫೈನಲ್ ಸೋಲಿನ ಸೇಡನ್ನು ಇಂಗ್ಲೆಂಡ್ ವಿರುದ್ಧ ತೀರಿಸಿಕೊಳ್ಳುವ ವಿಶ್ವಾಸವನ್ನು ಟೀಮ್ ಇಂಡಿಯಾ ಹೊಂದಿದೆ. ಆತ್ಮವಿಶ್ವಾಸದಿಂದ ಕೂಡಿರುವ ಟೀಮ್ ಇಂಡಿಯಾ ಮಹತ್ವದ ಪಂದ್ಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡು ಅಂಗಳಕ್ಕೆ ಇಳಿಯುವ ಸಂಭವವಿದೆ.

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಪರ ಸ್ಟಾರ್ ಆಟಗಾರರು ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಇಬ್ಬರು ಆಟಗಾರರು ಮಾತ್ರ ಹೇಳಿಕೊಳ್ಳುವಂತಹ ಪ್ರದರ್ಶನ ನಿಡುತ್ತಿಲ್ಲ. ಹೀಗಾಗಿ ಇವರ ಸ್ಥಾನದಲ್ಲಿ ಬೇರೆ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಸದ್ಯ ಒಂಬತ್ತು ಆಟಗಾರರ ಸ್ಥಾನ ಫಿಕ್ಸ್ ಎಂದು ಹೇಳಲಾಗುತ್ತಿದೆ. ಇದರಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಅರ್ಷದೀಪ್ ಸಿಂಗ್, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ ಇವರು ಕಣಕ್ಕೆ ಇಳಿಯುವುದು ಪಕ್ಕಾ.
ಆಲ್‌ರೌಂಡರ್‌ಗಳ ಸ್ಥಾನಕ್ಕೆ ಕುತ್ತು?
ಟೀಮ್ ಇಂಡಿಯಾದ ಇಬ್ಬರು ಆಲ್‌ರೌಂಡರ್‌ಗಳಾದ ಶಿವಂ ದುಬೆ ಹಾಗೂ ರವೀಂದ್ರ ಜಡೇಜಾ ಪ್ರಸಕ್ತ ವಿಶ್ವಕಪ್‌ನಲ್ಲಿ ಸ್ಥಿರ ಪ್ರದರ್ಶನವನ್ನು ನೀಡುವಲ್ಲಿ ವಿಫಲರಾಗುತ್ತಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಇವರನ್ನು ಕೈ ಬಿಡುವ ಸಾಧ್ಯತೆ ದಟ್ಟವಾಗಿದೆ. ಇವರ ಸ್ಥಾನದಲ್ಲಿ ಇಬ್ಬರು ಆಟಗಾರರನ್ನು ತಂಡ ಪಿಚ್ ಮರ್ಮ ನೋಡಿಕೊಂಡು ಬದಲಿಸುವ ಸಾಧ್ಯತೆ ಇದೆ.
ಒಂದೇ ಸ್ಥಾನಕ್ಕೆ ಇಬ್ಬರ ಫೈಟ್
ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಆಟಗಾರ ಶಿವಂ ದುಬೆ ಅವರ ಸ್ಥಾನವನ್ನು ತುಂಬಲು ಇಬ್ಬರು ಆಟಗಾರರು ತುದಿಗಾಲಿನಲ್ಲಿ ನಿಂತಿದ್ದಾರೆ. ಪ್ರಸಕ್ತ ವರ್ಷ ಭರ್ಜರಿ ಫಾರ್ಮ್‌ನಲ್ಲಿರುವ ಯಶಸ್ವಿ ಜೈಸ್ವಾಲ್ ಹಾಗೂ ಸಂಜು ಸ್ಯಾಮ್ಸನ್ ಒಂದು ಸ್ಥಾನಕ್ಕಾಗಿ ಫೈಟ್ ನಡೆಸುತ್ತಿದ್ದಾರೆ. ಒಂದು ವೇಳೆ ಯಶಸ್ವಿ ಸ್ಥಾನ ಪಡೆದರೆ, ಓಪನಿಂಗ್ ಮಾಡುವ ಸಾಧ್ಯತೆ ಇದೆ. ಆಗ ವಿರಾಟ್ ತಮ್ಮ ಹಳೆಯ ಕ್ರಮಾಂಕದಲ್ಲಿ ಆಡಬಹುದು.
ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ಸಿಕ್ಕಿದ್ದೇ ಆದಲ್ಲಿ, ಇವರು ಮಿಡ್ಲ್ ಆರ್ಡರ್‌ನಲ್ಲಿ ಬ್ಯಾಟಿಂಗ್ ಮಾಡಬಹುದು. ಈ ಸನ್ನಿವೇಶದಲ್ಲಿ ರಿಷಭ್ ಪಂತ್ ಓಪನರ್ ಆಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಆಗಲು ವಿರಾಟ್ ಮೂರನೇ ಸ್ಥಾನದಲ್ಲಿ ಆಡಬಹುದು.
ಚಹಾಲ್‌ಗೆ ಅವಕಾಶ?
ಟೀಮ್ಇಂಡಿಯಾದ ಸ್ಟಾರ್ ಆಟಗಾರ ರವೀಂದ್ರ ಜಡೇಜಾ ಸದ್ಯ ಸ್ಥಿರ ಪ್ರದರ್ಶನ ನೀಡುತ್ತಿಲ್ಲ ಹೀಗಾಗಿ ಇವರ ಸ್ಥಾನದಲ್ಲಿ ಲೆಗ್ ಸ್ಪಿನ್ ಬೌಲರ್ ಯುಜುವೇಂದ್ರ ಚಹಾಲ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಇಂಗ್ಲೆಂಡ್ ಬೌಲರ್‌ಗಳು ವೇಗಿಗಳನ್ನು ಸುಲಭವಾಗಿ ಆಡುತ್ತಾರೆ. ಅಲ್ಲದೆ ಸ್ಪಿನ್ ಬೌಲರ್‌ಗಳನ್ನು ಎದುರಿಸಲು ಹೆಣಗಾಡುತ್ತಾರೆ. ಹೀಗಾಗಿ ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲಿ ಈ ಬದಲಾವಣೆಗಳನ್ನು ಮಾಡಿಕೊಂಡು ಮೈದಾನಕ್ಕೆ ಇಳಿಯುವ ಸಾಧ್ಯತೆ ಇದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications