T20 WC 2024: ಯಶಸ್ವಿ ಔಟ್, ಅಕ್ಷರ್ ಇನ್...ಇದು ಟೀಮ್ ಇಂಡಿಯಾದ ಪ್ಲೇಯಿಂಗ್ XI?
ಟೀಮ್ ಇಂಡಿಯಾದ ಆಟಗಾರರು ಐಪಿಎಲ್‌ನಲ್ಲಿ ಆಡಿ ಅಭಿಮಾನಿಗಳ ಮನ ಗೆದ್ದ ಬಳಿಕ, ಇನ್ನೊಂದು ಮೆಗಾ ಟೂರ್ನಿಗೆ ಸಿದ್ಧತೆ ನಡೆಸಿದ್ದಾರೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಭಾಗವಹಿಸಿದ್ದು, ಎರಡನೇ ಬಾರಿಗೆ ಟೀಮ್ ಇಂಡಿಯಾ ಕಪ್ ಗೆಲ್ಲುವ ಕನಸು ಕಾಣುತ್ತಿದೆ.
ನಾಳೆ ಭಾರತ, ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ತನ್ನ ಏಕೈಕ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದಾದ ಬಳಿಕ ಜೂನ್ 5 ರಂದು ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ಆಡುವ ಹನ್ನೊಂದರ ಸ್ಥಾನವನ್ನು ಸ್ಪಷ್ಟವಾಗಿ ಕಾಣಬಹುದು. ವಿಶ್ವಕಪ್‌ನಲ್ಲಿ ಭಾರತ ತಂಡದ ಸಂಯೋಜನೆ ಹೇಗಿರಬಹುದು? ಎಂಬುದು ಬಹು ಚರ್ಚಿತ ವಿಷಯವಾಗಿದೆ. ಹೇಗಿರಲಿದೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಓಪನರ್ ಯಾರು?
ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರು ಬದಲಿಗೆ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಬಹುದು. ರೈಟ್ ಹಾಗೂ ಲೆಫ್ಟ್ ಕಾಂಬಿನೇಷನ್ ಕೈ ಬಿಟ್ಟು ಟೀಮ್ ಇಂಡಿಯಾ ಅನುಭವಿಗಳಿಗೆ ಮಣೆ ಹಾಕುವ ಸಾಧ್ಯತೆ ಹೆಚ್ಚಿದೆ. ಆರಂಭಿಕ ಪಂದ್ಯಗಳಲ್ಲಿ ಯಶಸ್ವಿ ಮೈದಾನಕ್ಕೆ ಪ್ರವೇಶಿಸುವುದು ಕಷ್ಟ. ಇವರು ಕೆನಾಡ ವಿರುದ್ಧದ ಪಂದ್ಯದಲ್ಲಿ ಆಡುವದನ್ನು ಕಾಣಬಹುದು.
ಮೂರನೇ ಕ್ರಮಾಂಕದಲ್ಲಿ ಯಾರು?
ಒಂದು ವೇಳೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಾಣಿಸಿಕೊಂಡಲ್ಲಿ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು? ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ಸ್ಥಾನದಲ್ಲಿ ವಿಶ್ವದ ಸ್ಟಾರ್ ಟಿ20 ಬ್ಯಾಟರ್ ಸುರ್ಯಕುಮಾರ್ ಯಾದವ್ ಬ್ಯಾಟ್ ಮಾಡಬಹುದು. ಇದಾದ ಬಳಿಕ ರಿಷಬ್ ಪಂತ್ ನಾಲ್ಕನೇ ಮನೆಯ ಅಧಿಪತಿ ಆಗಬಹುದು. ರಿಷಬ್ ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿರುವುದರಿಂದ ಇದು ಟೀಮ್ ಇಂಡಿಯಾಕ್ಕೆ ತುಂಬಾ ಲಾಭದಾಯಕ.
ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ 5ನೇ ಸ್ಥಾನದಲ್ಲಿ ಬ್ಯಾಟ್ ಮಾಡುವುದು ಖಚಿತ ಎಂದು ಹೇಳಲಾಗುತ್ತಿದೆ. ಇನ್ನು ಫಿನಿಷರ್ ಪಾತ್ರದಲ್ಲಿ 6ನೇ ಕ್ರಮಾಂಕದಲ್ಲಿ ಆಡುವ ಅವಕಾಶ ಸಿಗಬಹುದು.

ಮಧ್ಯಮ ಕ್ರಮಾಂಕದಲ್ಲಿ ಯಾರು?
ಟೀಮ್ ಇಂಡಿಯಾದಲ್ಲಿ ಅನುಭವಿ ಆಲ್‌ರೌಂಡರ್‌ಗಳ ದಂಡೇ ಇದೆ. ಅಲ್ಲದೆ ಟೀಮ್ ಇಂಡಿಯಾದ ಕೆಳ ಕ್ರಮಾಂಕದಲ್ಲಿ ಲೆಫ್ಟ್ ಹ್ಯಾಂಡ್ ಬ್ಯಾಟರ್‌ಗಳ ಜಲ್ವಾ ನಡೆಯಲಿದೆ. ಹೀಗಾಗಿ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ಸಿಗುವುದು ಡೌಟ್. ಆಲ್ ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳಲಿರುವ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲರು. ಅಲ್ಲದೆ ಈ ಸ್ಟಾರ್ ಆಟಗಾರರು ಐಪಿಎಲ್‌ನಲ್ಲಿ ಆಡಿ ಮಿಂಚು ಹರಿಸಿದ್ದಾರೆ.
ಅಕ್ಷರ್ ಸ್ಪರ್ಧೆ
ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆಯಲು ತಮ್ಮ ಹಕ್ಕನ್ನು ಪದೇ ಪದೇ ಮಂಡಿಸುತ್ತಲೇ ಇದ್ದಾರೆ. ಅಕ್ಷರ್ 8ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಕ್ಷಮತೆಯನ್ನು ಹೊಂದಿದ್ದಾರೆ. ಇವರು ಪ್ರಸಕ್ತ ಐಪಿಎಲ್‌ನಲ್ಲಿ ಬ್ಯಾಂಟಿಗ್ ಹಾಗೂ ಬೌಂಲಿಗ್‌ನಲ್ಲೂ ತಂಡಕ್ಕೆ ನೆರವಾಗಬಲ್ಲರು.
ವೇಗದ ಬೌಲಿಂಗ್ ನೊಗವನ್ನು ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಕುಲದೀಪ್ ಯಾದವ್ ಸ್ಪಿನ್ ಮೂಲಕ ಎದುರಾಳಿಗಳಿಗೆ ಕಾಡಬಲ್ಲರು. ಈ ಪ್ಲೇಯಿಂಗ್ ಇಲೆವೆನ್‌ನಲ್ಲಿ 9 ಆಟಗಾರರ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ. ಇನ್ನು ಎರಡು ಸ್ಥಾನಕ್ಕಾಗಿ ಫೈಟ್ ನಡೆಯಲಿದೆ. ಟೀಮ್ ಇಂಡಿಯಾ ಯಾವ ಕಾಂಬಿನೇಷನ್‌ನೊಂದಿಗೆ ಟಿ20 ವಿಶ್ವಕಪ್‌ನಲ್ಲಿ ಆಡಲಿದೆ ಎಂಬುದು ಕುತೂಹಲ ಹೆಚ್ಚಿಸಿದೆ.
ಐಪಿಎಲ್‌ನಲ್ಲಿ ಯಶಸ್ವಿ ಪ್ರದರ್ಶನ
ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಯಶಸ್ವಿ ಜೈಸ್ವಾಲ್ ಆಡಿದ 15 ಪಂದ್ಯಗಳಲ್ಲಿ 1 ಶತಕ, 1 ಅರ್ಧಶತಕದ ನೆರವಿನಿಂದ 435 ರನ್ ಸಿಡಿಸಿದ್ದಾರೆ. ಈ ವೇಳೆ ಇವರ ಸ್ಟ್ರೈಕ್ ರೇಟ್ 155.91 ಆಗಿದೆ. ಇವರು 17 ಟಿ20 ಪಂದ್ಯಗಳನ್ನು ಭಾರತದ ಪರ ಆಡಿದ್ದು, 502 ರನ್ ಸಿಡಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 4 ಅರ್ಧಶತಕಗಳು ಸೇರಿವೆ.
ಅಭ್ಯಾಸ ಪಂದ್ಯದಲ್ಲೂ ಯಶಸ್ವಿ ಜೈಸ್ವಾಲ್ ಅವರಿಗೆ ಆಡುವ ಅವಕಾಶವನ್ನು ನೀಡಲಾಗಿರಲಿಲ್ಲ. ಇದನ್ನು ಗಮನಿಸಿದರೆ, ಅವರು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುತ್ತಾರೋ ಇಲ್ಲವು ಎಂಬುದು ಸಂಶಯವಾಗಿದೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications