PBKS VS SRH: ಹೈದರಾಬಾದ್ ಮಣಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡ ಪಂಜಾಬ್ ಕಿಂಗ್ಸ್
PBKS VS SRH IPL 2026: ಮುಲ್ಲನ್‌ಪುರ್‌ನಲ್ಲಿ ಇಂದು (ಏಪ್ರಿಲ್ 11) ನಡೆದ ಐಪಿಎಲ್ 2026ರ 17ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್ ಮತ್ತು ನಾಯಕ ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಪಂಜಾಬ್ ಕಿಂಗ್ಸ್ ಜಯಭೇರಿ ಬಾರಿಸಿದೆ.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ಸನ್‌ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್‌ಗಳನ್ನು ಕಲೆಹಾಕಿತು. ಇನ್ನೂ ಎಸ್‌ಆರ್‌ಎಚ್ ನೀಡಿದ ಈ ಬೃಹತ್ ಮೊತ್ತದ ಗುರಿಯನ್ನು ಪಂಜಾಬ್ ಕಿಂಗ್ಸ್ 18.5 ಓವರ್‌ಗಳಲ್ಲಿ ಮುಟ್ಟುವ ಮೂಲಕ ಜಯ ಗಳಿಸಿತು.

ಎಸ್‌ಆರ್‌ಎಚ್ ಪರ ಸ್ಫೋಟಕ ಇನ್ನಿಂಗ್ಸ್ ಆಡಿದ ಅಭಿಷೇಕ್
ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ ಕೇವಲ 28 ಎಸೆತಗಳಲ್ಲಿ 5 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 74 ರನ್ ಸಿಡಿಸಿದರು. ಇವರು ಟ್ರಾವಿಸ್ ಹೆಡ್ ಅವರೊಂದಿಗೆ ಮೊದಲ ವಿಕೆಟ್‌ಗೆ 120 ರನ್‌ಗಳ ಜೊತೆಯಾಟವಾಡಿದರು. ಎಸ್‌ಆರ್‌ಹೆಚ್ ನಿಗದಿತ ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿತು. ಎಸ್‌ಆರ್‌ಎಚ್ ಪರ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ 74, ಹೆನ್ರಿಕ್ ಕ್ಲಾಸೆನ್ 39, ಟ್ರಾವಿಸ್ ಹೆಡ್ 38, ಅನಿಕೇತ್ ವರ್ಮಾ 18, ನಾಯಕ ಇಶಾನ್ ಕಿಶನ್ 27 ರನ್ ಕಲೆಹಾಕಿದರು.
ಪಂಜಾಬ್ ಕಿಂಗ್ಸ್ ಗೆಲುವಿನ ದಡ ಸೇರಿಸಿದ ಅಯ್ಯರ್
ಸನ್‌ರೈಸರ್ಸ್ ಹೈದರಾಬಾದ್ ನೀಡಿದ 220 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್‌ಗೆ ಪ್ರಿಯಾಂಶ್ ಆರ್ಯ (57) ಮತ್ತು ಪ್ರಭ್‌ಸಿಮ್ರಾನ್ ಸಿಂಗ್ (51) ಮೊದಲ ವಿಕೆಟ್‌ಗೆ 99 ರನ್ ಸೇರಿಸುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟರು. ಆರಂಭಿಕರಿಬ್ಬರನ್ನು ಶಿವಾಂಗ್ ಕುಮಾರ್ (3/33) ಔಟ್ ಮಾಡಿದಾಗ ತಂಡದ ಜವಾಬ್ದಾರಿ ಹೊತ್ತ ನಾಯಕ ಶ್ರೇಯಸ್ ಅಯ್ಯರ್, ಕೇವಲ 33 ಎಸೆತಗಳಲ್ಲಿ ಅಜೇಯ 69 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಂಜಾಬ್ ಕಿಂಗ್ಸ್ ಇನ್ನು 7 ಎಸೆತಗಳು ಬಾಕಿ ಇರುವಾಗಲೇ 4 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿ ವಿಜಯೋತ್ಸವ ಆಚರಿಸಿತು.












Click it and Unblock the Notifications