PBKS vs CSK: ಸತತ 4ನೇ ಸೋಲು ಕಂಡ ಸಿಎಸ್‌ಕೆ: ಪಂಜಾಬ್‌ ಕಿಂಗ್ಸ್‌ಗೆ ಭರ್ಜರಿ ಗೆಲುವು

ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 18 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಸಿಎಸ್‌ಕೆ ಸೋಲಿನ ಸರಣಿ ಮುಂದುವರೆದಿದ್ದು, ಸತತವಾಗಿ 4ನೇ ಪಂದ್ಯದಲ್ಲಿ ಸೋಲು ಕಂಡಿದೆ.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಪ್ರಿಯಾಂಶ್ ಆರ್ಯ ಅಮೋಘ ಶತಕ ಸಿಡಿಸಿ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ ಗಳ ಬೆವರಿಳಿಸಿದರು. ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡರು. 39 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಪಂಜಾಬ್ ಕಿಂಗ್ಸ್ ಬೃಹತ್ ಮೊತ್ತ ಕಲೆಹಾಕಲು ಮಹತ್ವದ ಕೊಡುಗೆ ನೀಡಿದರು.

42 ಎಸೆತಗಳಲ್ಲಿ 7 ಬೌಂಡರಿ 9 ಭರ್ಜರಿ ಸಿಕ್ಸರ್ ಸಹಿತ 103 ರನ್ ಗಳಿಸಿ ಔಟಾದರು. ಪ್ರಭ್‌ಸಿಮ್ರನ್ ಸಿಂಗ್ ರನ್ ಗಳಿಸುವ ಮುನ್ನವೇ ಔಟಾದರೆ, ನಾಯಕ ಶ್ರೇಯಸ್ ಅಯ್ಯರ್ 9 ರನ್ ಗಳಿಸಿ ಔಟಾದರು. ಮಾರ್ಕಸ್ ಸ್ಟೋಯಿನಿಸ್ 4 ರನ್ ಗಳಿಸಿ ಔಟಾದರು. ನೇಹಲ್ ವಧೇರಾ 9 ರನ್ ಗಳಿಸಿ ಔಟಾದರು. ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 1 ರನ್ ಗಳಿಸಿ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರು.

punjab kings win against csk by 18 runs ipl 2025

ಆದರೆ ಬಳಿಕ ಬಂದ ಶಶಾಂಕ್ ಸಿಂಗ್ ಮತ್ತು ಮಾರ್ಕೊ ಯಾನ್ಸೆನ್‌ ಪಂಜಾಬ್ ಕಿಂಗ್ಸ್‌ಗೆ ಆಸರೆಯಾದರು. ಶಶಾಂಕ್ ಸಿಂಗ್ 36 ಎಸೆತಗಳಲ್ಲಿ 2 ಬೌಂಡರಿ 3 ಭರ್ಜರಿ ಸಿಕ್ಸರ್ ಸಹಿತ ಅಜೇಯ 52 ರನ್ ಗಳಿಸಿದರು. ಮಾರ್ಕೊ ಯಾನ್ಸೆನ್ 19 ಎಸೆತಗಳಲ್ಲಿ 2 ಬೌಂಡರಿ 2 ಸಿಕ್ಸರ್ ಸಹಿತ ಅಜೇಯ 34 ರನ್ ಗಳಿಸಿದರು. ಖಲೀಲ್ ಅಹ್ಮದ್ ಮತ್ತು ರವಿಚಂದ್ರನ್ ಅಶ್ವಿನ್ ತಲಾ 2 ವಿಕೆಟ್ ಪಡೆದರು. ಮುಖೇಶ್ ಚೌಧರಿ ಮತ್ತು ನೂರ್ ಅಹ್ಮದ್ ತಲಾ 1 ವಿಕೆಟ್ ಪಡೆದರು.

ಕೈಕೊಟ್ಟ ಸಿಎಸ್‌ಕೆ ಬ್ಯಾಟರ್ ಗಳು

220 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ ಉತ್ತಮ ಆರಂಭವನ್ನೇ ಪಡೆಯಿತು. ರಚಿನ್ ರವೀಂದ್ರ ಮತ್ತು ಡಿವೋನ್ ಕಾನ್ವೆ ಮೊದಲ ವಿಕೆಟ್‌ಗೆ 61 ರನ್ ಕಲೆಹಾಕಿದರು. ರಚಿನ್ ರವೀಂದ್ರ 36 ರನ್ ಗಳಿಸಿ ಔಟಾದರು. ನಾಯಕ ರುತುರಾಜ್ ಗಾಯಕ್ವಾಡ್ ಕೇವಲ 1 ರನ್ ಗಳಿಸಿ ಔಟಾದರು. ಡಿವೋನ್ ಕಾನ್ವೆ 49 ಎಸೆತಗಳಲ್ಲಿ 6 ಬೌಂಡರಿ 2 ಸಿಕ್ಸರ್ ಸಹಿತ 69 ರನ್ ಗಳಿಸಿ ಕೊನೆಯಲ್ಲಿ ರಿಟೈರ್ಡ್ ಔಟ್ ಆದರು. ಎಂಎಸ್ ಧೋನಿ 12 ಎಸೆತಗಳಲ್ಲಿ 27 ರನ್ ಗಳಿಸಿದರೂ ಸಿಎಸ್‌ಕೆ ತಂಡಕ್ಕೆ ಗೆಲುವು ತಂದುಕೊಡಲು ಆಗಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+