PV Sindhu: ವಿರಾಟ್‌ ಕೊಹ್ಲಿ ನೀಡಿದ ಆ ಒಂದು ಗುಟ್ಟು ಬಿಚ್ಚಿಟ್ಟ ಪಿವಿ ಸಿಂಧು

PV Sindhu: ಜಗತ್ತಿನಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ವಿರಾಟ್‌ ಕೊಹ್ಲಿ ಅವರು ಬಹುತೇಕ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಅವರು ಕೇವಲ ಕ್ರಿಕೆಟಿಗರನ್ನು ಮಾತ್ರವಲ್ಲದೆ ವಿವಿಧ ಕ್ರೀಡೆಗಳ ಅಥ್ಲೀಟ್‌ಗಳನ್ನು ಕೂಡ ಹುರಿದುಂಬಿಸುತ್ತಾ ಬಂದಿದ್ದಾರೆ. ಇದೀಗ ಅವರಿಂದ ಸ್ಫೂರ್ತಿ ಪಡೆದ ಬಗ್ಗೆ ಭಾರತದ ಪ್ರಸಿದ್ಧ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಹಾಗೂ 2019ರ ವಿಶ್ವ ಚಾಂಪಿಯನ್ ಆಗಿರುವ ಪಿವಿ ಸಿಂಧು ಅವರು ತಮ್ಮ ಜೀವನದ ಹಲವು ಹಂತಗಳಲ್ಲಿ ವಿರಾಟ್ ಕೊಹ್ಲಿ ಹೇಗೆ ಬೆಂಬಲವಾಗಿ ನಿಂತಿದ್ದರು ಎಂಬ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಆರ್‌ಸಿಬಿ ಇನ್ನೋವೇಶನ್ ಲ್ಯಾಬ್ ಇಂಡಿಯನ್ ಸ್ಪೋರ್ಟ್ಸ್ ಸಮಿಟ್‌ನಲ್ಲಿ ಭಾಗವಹಿಸಿದ ಬಳಿಕ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿರಾಟ್ ಕೊಹ್ಲಿಗೆ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ.

PV Sindhu Praises Virat Kohli for Support And Guidance at Royal Challengers Bengaluru Sports Summit

ಪಿವಿ ಸಿಂಧು ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲೇನಿದೆ?

ಸಿಂಧು ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ "ನನಗೆ ಯಾವಾಗ ಮಾರ್ಗದರ್ಶನದ ಅಗತ್ಯವಿತ್ತೋ ಆ ಸಮಯದಲ್ಲಿ ನೀವು ಸರಿಯಾದ ಸಲಹೆ ಮತ್ತು ಸರಿಯಾದ ಮಾತುಗಳೊಂದಿಗೆ ನನ್ನ ಬೆಂಬಲಕ್ಕೆ ನಿಂತಿದ್ದೀರಿ. ಭಾರತೀಯ ಕ್ರೀಡಾ ಕ್ಷೇತ್ರದಲ್ಲಿ ಒಬ್ಬ ನಿಜವಾದ ಹಿರಿಯ ಆಟಗಾರ ಹೇಗಿರಬೇಕು ಎನ್ನುವುದಕ್ಕೆ ನಿಮಗಿಂತ ಉತ್ತಮ ಉದಾಹರಣೆ ಮತ್ತೊಂದಿಲ್ಲ. ಉದಾರ ಮನಸ್ಸಿನವರು, ಸರಳ ವ್ಯಕ್ತಿತ್ವದವರು, ಸ್ಫೂರ್ತಿದಾಯಕರು ಮತ್ತು ಯಾವಾಗಲೂ ಇತರರನ್ನು ಬೆಳೆಸುವ ಮನೋಭಾವವುಳ್ಳವರು," ಎಂದು ಬರೆದುಕೊಂಡಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಧು ಈಗ ಲಯಕ್ಕೆ ಮರಳುತ್ತಿದ್ದಾರೆ. 2025ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದ ಅವರು ಇತ್ತೀಚೆಗೆ ಮಲೇಷ್ಯಾ ಓಪನ್‌ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದರು. ಸದ್ಯ ಅವರು ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್‌ನ ಅಥ್ಲೀಟ್ಸ್ ಕಮಿಷನ್ ಅಧ್ಯಕ್ಷೆಯಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಐಪಿಎಲ್ 2026ರಲ್ಲಿ ವಿರಾಟ್‌ ಕೊಹ್ಲಿ ಅಬ್ಬರ ಮುಂದುವರಿದಿದೆ. ಆರ್‌ಸಿಬಿ ಪರವಾಗಿ ಅವರು ಈ ಸೀಸನ್‌ನ 13 ಪಂದ್ಯಗಳಲ್ಲಿ 542 ರನ್ ಗಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 14,000 ರನ್ ಪೂರೈಸಿದ ಆಟಗಾರ ಎಂಬ ಹೆಗ್ಗಳಿಗೆ ಅವರದ್ದಾಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಅಜೇಯ 105 ರನ್ ಬಾರಿಸಿ ಆರ್‌ಸಿಬಿ ಪ್ಲೇಆಫ್‌ಗೆ ಅರ್ಹತೆ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಾಗಿ ಮಾತ್ರವಲ್ಲದೆ ಮಾರ್ಗದರ್ಶಕನಾಗಿ ಇತರ ಕ್ರೀಡಾಪಟುಗಳಿಗೆ ಹೇಗೆ ಮಾದರಿಯಾಗಿದ್ದಾರೆ ಎಂಬುದನ್ನು ಪಿವಿ ಸಿಂಧು ಅವರು ವಿವರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+