Team India Head Coach: ಏನೆಲ್ಲಾ ಅರ್ಹತೆಗಳು ಇರಬೇಕು? ಬಿಸಿಸಿಐ ಹೊರಡಿಸಿದೆ ಸೂಚನೆ
ಟೀಮ್ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರ ಅವಧಿ ಇನ್ನೇನು ಕೆಲವೇ ದಿನಗಳಲ್ಲಿ ಮುಗಿಯಲಿದೆ. ಅವರ ಕಂಟ್ರ್ಯಾಕ್ಟ್ ಈ ವರ್ಷದ ಟಿ20 ವಿಶ್ವಕಪ್ ವರೆಗೂ ಮಾತ್ರ ಇದ್ದು, ಬಳಿಕ ಬ್ಲ್ಯೂ ಬಾಯ್ಸ್‌ಗೆ ನೂತನ ಮೇಷ್ಟ್ರನ್ನು ನೋಡುವ ಕಾರ್ಯ ಆಗುತ್ತಿದೆ. ಈ ಹುದ್ದೆಯ ಮೇಲೆ ಕಣ್ಣು ನೆಟ್ಟವರು ಏನೆಲ್ಲಾ ಆರ್ಹತೆಯನ್ನು ಹೊಂದಿರಬೇಕು ಎಂಬುದನ್ನು ಬಿಸಿಸಿಐ ಈಗಾಗಲೇ ಸೂಚನೆಯನ್ನು ಹೊರಡಿಸಿದೆ.
ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಚುಕ್ಕಾಣಿ ಹಿಡಿದಾಗಿನಿಂದಲೂ ತಂಡ ಸ್ಥಿರ ಪ್ರದರ್ಶನವನ್ನೇ ನೀಡುತ್ತಿದೆ. ರಾಹುಕ್ ದ್ರಾವಿಡ್ ಅಧಿಕಾರ ವಹಿಸಿಕೊಂಡ ಬಳಿಕ ಟೀಮ್ ಇಂಡಿಯಾ ಐಸಿಸಿ ಈವೆಂಟ್‌ಗಳಲ್ಲಿ ಫೈನಲ್ ಸಹ ಪ್ರವೇಶಿಸಿದೆ. ಆದರೆ ವಿಶ್ವ ಚಾಂಪಿಯನ್ ಆಗುವ ಆಸೆ ಕಮರಿದೆ.

ದ್ರಾವಿಡ್ ರಿಪೋರ್ಟ್ ಕಾರ್ಡ್
2023ರಲ್ಲಿ ದ್ರಾವಿಡ್ ಅವರ ಗರಡಿಯಲ್ಲಿ ಭಾರತ ತಂಡದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತು. ಫೈನಲ್ ಪಂದ್ಯದಲ್ಲಿ ಆಸೀಸ್ 209 ರನ್‌ಗಳಿಂದ ಭಾರತವನ್ನು ಮಣಿಸಿ ಪ್ರಶಸ್ತಿಯನ್ನು ಎತ್ತಿ ಹಿಡಿಯಿತು.
2023ರಲ್ಲಿ ಟೀಮ್ ಇಂಡಿಯಾ ಏಷ್ಯಾ ಕಪ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಗಮನ ಸೆಳೆಯಿತು. ದ್ರಾವಿಡ್ ಅವರ ತರಬೇತಿಯಲ್ಲಿ ಟೀಮ್ ಇಂಡಿಯಾ, ಈ ಟೂರ್ನಿಯ ಫೈನಲ್‌ನಲ್ಲಿ ಶ್ರೀಲಂಕಾ ತಂಡವನ್ನು 10 ವಿಕೆಟ್‌ಗಳಿಂದ ಮಣಿಸಿ, ಪ್ರಶಸ್ತಿಯನ್ನು ಗೆದ್ದು ಬೀಗಿತ್ತು.

ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಪಡೆ ಸ್ಥಿರ ಪ್ರದರ್ಶನವನ್ನು ನೀಡಿತು. ಅಲ್ಲದೆ ಲೀಗ್ ಹಂತದಿಂದ ಹಿಡಿದು, ಸೆಮಿಫೈನಲ್ ವರೆಗೂ ಎಲ್ಲ ಪಂದ್ಯಗಳಲ್ಲೂ ಜಯ ಸಾಧಿಸಿ ಅಬ್ಬರಿಸಿತು. ಆದರೆ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮತ್ತೆ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತು. ಈ ಮೂಲಕ ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಫೈನಲ್ ಪ್ರವೇಶಿಸುವ ಆಸೆ ಕಮರಿತು.
ದ್ರಾವಿಡ್ ಕೋಚ್ ಆಗಿದ್ದು ಹೇಗೆ?
ಟೀಮ್ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರ ಅವಧಿಯು 2023ರಲ್ಲಿ ಕೊನೆಗೊಂಡಿತ್ತು. ಅಲ್ಲದೆ ಅವರ ಅಧಿಕಾರ ಅವಧಿಯನ್ನು ಮತ್ತೆ ಬಿಸಿಸಿಐ ಒಂದು ವರ್ಷಗಳ ಅವಧಿಗೆ ಮುಂದುವರೆಸಿತು. ಪ್ರಸಕ್ತ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಹೆಡ್ ಕೋಚ್ ಸ್ಥಾನ ಖಾಲಿ ಆಗಲಿದೆ.

ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ನವೆಂಬರ್ 2021 ರಲ್ಲಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಿಸಲಾಯಿತು. ರವಿಶಾಸ್ತ್ರಿ ಬದಲಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಂಡ ಸೇರಿದ್ದರು. ದ್ರಾವಿಡ್ ಅಧಿಕಾರಾವಧಿಯಲ್ಲಿ ಟೀಮ್ ಇಂಡಿಯಾ ಯಾವುದೇ ಐಸಿಸಿ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ದ್ವಿಪಕ್ಷೀಯ ಸರಣಿಯಲ್ಲಿ ಅವರ ದಾಖಲೆಯು ಅತ್ಯುತ್ತಮವಾಗಿ ಉಳಿದಿದೆ.
ಅಧಿಕಾರಾವಧಿ 3 ವರ್ಷಗಳವರೆಗೆ ಇರುತ್ತದೆ
ಬ್ಯಾಟಿಂಗ್ ಕೋಚ್, ಬೌಲಿಂಗ್ ಕೋಚ್, ಫೀಲ್ಡಿಂಗ್ ಕೋಚ್ ಸೇರಿದಂತೆ ಕೋಚ್ ಸಿಬ್ಬಂದಿಯ ಇತರ ಸದಸ್ಯರನ್ನು ಮುಖ್ಯ ಕೋಚ್ ಆಯ್ಕೆ ಮಾಡಿದ ನಂತರ ತೀರ್ಮಾನಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ತಿಳಿಸಿದ್ದಾರೆ. ಹೊಸ ಕೋಚ್‌ನ ಅಧಿಕಾರಾವಧಿ 3 ವರ್ಷಗಳವರೆಗೆ ಇರುತ್ತದೆ ಎಂದು ಶಾ ಸ್ಪಷ್ಟಪಡಿಸಿದ್ದಾರೆ.
ಮುಖ್ಯ ಕೋಚ್‌ಗೆ ಅರ್ಹತೆ
ಮುಖ್ಯ ತರಬೇತುದಾರರು ಆಗಲು ಬಯಸುವವುರು ಟೆಸ್ಟ್ ಆಡುವ ರಾಷ್ಟ್ರಕ್ಕಾಗಿ ಕನಿಷ್ಠ ಎರಡು ವರ್ಷಗಳ ತರಬೇತಿ ಅನುಭವವನ್ನು ಹೊಂದಿರಬೇಕು. ಅಸೋಸಿಯೇಟ್ ಸದಸ್ಯ/ಎ ತಂಡ/ಐಪಿಎಲ್ ತಂಡಕ್ಕೆ ಮೂರು ವರ್ಷಗಳ ತರಬೇತಿ ಮಾಡಿರು ಅನುಭವವನ್ನು ಹೊಂದಿರಬೇಕು. ಇಷ್ಟೇ ಅಲ್ಲ, ಅರ್ಜಿದಾರರು 30 ಟೆಸ್ಟ್ ಅಥವಾ 50 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರಬೇಕು. ಅರ್ಜಿದಾರರ, ವಯಸ್ಸು 60 ವರ್ಷಕ್ಕಿಂತ ಕಡಿಮೆ ಇರಬೇಕು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications