2027ರ ಏಕದಿನ ವಿಶ್ವಕಪ್‌ಗೆ ಟೀಮ್ ಇಂಡಿಯಾ ಆಯ್ಕೆ ವಿಚಾರದಲ್ಲಿ ಆರ್‌ಸಿಬಿ ಪರ ನಿಂತ ಆರ್.ಅಶ್ವಿನ್

R Ashwin: ಈ ವರ್ಷ ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ನಲ್ಲಿ ಟೀಮ್ ಇಂಡಿಯಾವು ಭರ್ಜರಿಯಾಗಿ ಗೆದ್ದು ಟ್ರೋಫಿ ಎತ್ತಿಹಿಡಿದಿದೆ. ಇದೀಗ ಮುಂಬರುವ 2027ರ ಏಕದಿನ ವರ್ಲ್ಡ್‌ಕಪ್‌ಗೆ ತಯಾರಿ ನಡೆಯುತ್ತಿದ್ದು, ಭಾರತದ ಪರ ಆರ್‌ಸಿಬಿ ಸ್ಟಾರ್ ಆಟಗಾರರನ್ನ ಕಣಕ್ಕಿಳಿಸಬೇಕೆಂದು ಮಾಜಿ ಕ್ರಿಕೆಟರ್ ಆರ್‌.ಅಶ್ವಿನ್ ಅವರು ಬಿಸಿಸಿಐಗೆ ಒತ್ತಾಯಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯ ಜಂಟಿಯಾಗಿ ಆಯೋಜಿಸಲಿರುವ 2027ರ ಐಸಿಸಿ ಏಕದಿನ ವಿಶ್ವಕಪ್ ಸರಣಿಗೆ ಭಾರತೀಯ ತಂಡದ ಆಯ್ಕೆ ಕುರಿತು ಟೀಮ್ ಇಂಡಿಯಾ ಮಾಜಿ ಕ್ರಿಕೆಟರ್ ರವಿಚಂದ್ರನ್ ಅಶ್ವಿನ್ ಮಹತ್ವದ ಸಲಹೆಯನ್ನು ನೀಡಿದ್ದಾರೆ. 2022ರಿಂದ ಭಾರತದ ಏಕದಿನ ತಂಡದಿಂದ ಹೊರಗುಳಿದಿರುವ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಆಯ್ಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

R Ashwin Urges BCCI to Pick RCB Star Player Bhuvneshwar Kumar for ICC ODI World Cup 2027 Squad

ರವಿಚಂದ್ರನ್ ಅಶ್ವಿನ್ ಮಹತ್ವದ ಸಲಹೆ

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಅವರು, ' 2027ರ ಐಸಿಸಿ ಏಕದಿನ ವಿಶ್ವಕಪ್ ಸರಣಿಗೆ ಭುವನೇಶ್ವರ್ ಕುಮಾರ್ ಅವರನ್ನು ಆಯ್ಕೆ ಮಾಡಬೇಕು. ನಾನು ಅವರಲ್ಲಿ ವಿನಂತಿಸಿಕೊಳ್ಳುತ್ತೇನೆ ನೀವು ಪ್ರಥಮ ದರ್ಜೆ ಕ್ರಿಕೆಟ್ ಮತ್ತು ವಿಜಯ್ ಹಜಾರೆ ಟ್ರೋಫಿ ಸೇರಿದಂತೆ ಎಲ್ಲಾ ಪ್ರಮುಖ ದೇಶಿಯ ಸರಣಿಗಳನ್ನು ತಪ್ಪದೇ ಆಡಿ ಸಿದ್ಧರಾಗಿ ಅಂತಾ. ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಭಾರತಕ್ಕೆ ಅವರಂತಹ ಅನುಭವಿ ಬೌಲರ್‌ನ ಅಗತ್ಯ ಹೆಚ್ಚಿರಲಿದೆ,' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತದ ಪರ ಭುವಿ ಕೊನೆಯದಾಗಿ ಆಡಿದ್ದು ಯಾವಾಗ?

36 ವರ್ಷದ ಭುವನೇಶ್ವರ್ ಕುಮಾರ್ ಭಾರತದ ಪರ ಕೊನೆಯದಾಗಿ ಏಕದಿನ ಪಂದ್ಯವನ್ನು ಜನವರಿ 2022ರಲ್ಲಿ ಆಡಿದ್ದರು. ಗಾಯದ ಸಮಸ್ಯೆಗಳು ಮತ್ತು ಹೊಸ ಯುವ ಆಟಗಾರರಿಗೆ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಆಯ್ಕೆದಾರರು ಇತ್ತೀಚಿನ ಸರಣಿಗಳಲ್ಲಿ ಅವರನ್ನು ಪರಿಗಣಿಸಿರಲಿಲ್ಲ.

ಆದರೆ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026ರ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅದ್ಭುತ ಪ್ರದರ್ಶನ ನೀಡಿದ್ದರು. ಈ ವೇಳೆ ಅವರು 16 ಪಂದ್ಯಗಳಲ್ಲಿ ಬರೋಬ್ಬರಿ 28 ವಿಕೆಟ್‌ಗಳನ್ನು ಕಬಳಿಸಿ ಸರಣಿಯ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡು ತಮ್ಮ ಸಾಮರ್ಥ್ಯವನ್ನು ಮರುಸಾಬೀತುಪಡಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಪಿಚ್‌ಗಳು ಆರಂಭಿಕ ಓವರ್‌ಗಳಲ್ಲಿ ಸ್ವಿಂಗ್ ಬೌಲರ್‌ಗಳಿಗೆ ಹೆಚ್ಚಿನ ನೆರವು ನೀಡುತ್ತವೆ. ಇಂತಹ ಸ್ಥಿತಿಯಲ್ಲಿ ಭುವನೇಶ್ವರ್ ಕುಮಾರ್ ಅವರಂತಹ ಅನುಭವಿ ಸ್ವಿಂಗ್ ಮಾಂತ್ರಿಕ ಅಲ್ಲಿನ ವಾತಾವರಣಕ್ಕೆ ಅತ್ಯಂತ ಸೂಕ್ತ ಹಾಗೂ ಅಪಾಯಕಾರಿ ಬೌಲರ್ ಆಗಬಲ್ಲರು ಎಂಬುದು ಅಶ್ವಿನ್ ಅವರ ಅಭಿಪ್ರಾಯವಾಗಿದೆ.

ಆರ್‌.ಅಶ್ವಿನ್ ಹೆಸರಿಸಿದ ತಂಡದಲ್ಲಿ ಯಾರೆಲ್ಲಾ ಇದ್ದಾರೆ?

2027ರ ವಿಶ್ವಕಪ್‌ಗಾಗಿ ತಾವೇ ರೂಪಿಸಿದ ಸಂಭಾವ್ಯ ಪಟ್ಟಿಯಲ್ಲಿ ಆರ್‌.ಅಶ್ವಿನ್ ಅವರು ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಒಳಗೊಂಡಂತೆ ನಾಯಕ ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಪ್ರಮುಖರನ್ನಾಗಿ ಸೇರಿಸಿಕೊಂಡಿದ್ದಾರೆ.

ವೇಗದ ಬೌಲಿಂಗ್ ವಿಭಾಗವನ್ನು ಬಲಪಡಿಸಲು ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರೊಂದಿಗೆ ಭುವನೇಶ್ವರ್ ಕುಮಾರ್ ಹಾಗೂ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವುದು ಭಾರತಕ್ಕೆ ಅತ್ಯಂತ ಲಾಭದಾಯಕ ಆಗಲಿದೆ ಎಂದು ಆರ್‌.ಅಶ್ವಿನ್ ಅವರು ಹೇಳಿದ್ದಾರೆ. ಒಟ್ಟಿನಲ್ಲಿ ಏಕದಿನ ವಿಶ್ವಕಪ್ 2027 ಟೂರ್ನಿಗೆ ಸೇರಿಸಿಕೊಂಡರೆ ಹೆಚ್ಚು ಅನುಕೂಲ ಆಗಲಿದೆ ಎನ್ನುವುದು ಅವರ ಹೇಳಿಕೆಯ ಅರ್ಥವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+