Rahul Dravid: ರಾಜಸ್ಥಾನ ರಾಯಲ್ಸ್ ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ
ಭಾರತ ಟಿ20 ವಿಶ್ವಕಪ್ ಗೆದ್ದ ಬಳಿಕ ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿದ್ದರು. ಭಾರತ ತಂಡದ ಭರ್ಜರಿ ಯಶಸ್ಸಿನ ಬಳಿಕ ಅವರು ಮುಂದೆ ಏನು ಮಾಡುತ್ತಾರೆ ಎನ್ನುವ ಕುತೂಹಲ ಇತ್ತು. ಹಲವು ಫ್ರಾಂಚೈಸಿಗಳು ಅವರನ್ನು ಕೋಚ್ ಆಗಿ ನೇಮಿಸಿಕೊಳ್ಳಲು ಆಸಕ್ತಿ ಹೊಂದಿವೆ ಎನ್ನಲಾಗಿತ್ತು, ಇದೀಗ ದ್ರಾವಿಡ್ ಐಪಿಎಲ್ ತಂಡದ ಕೋಚ್ ಆಗಿ ನೇಮಕವಾಗಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡವನ್ನು ಸೇರಿಕೊಂಡಿದ್ದು, ಇದೀಗ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ರಾಹುಲ್ ದ್ರಾವಿಡ್ ಅವರಿಗೆ ರಾಜಸ್ಥಾನ ರಾಯಲ್ಸ್ ತಂಡದ ನಂಟು ಹೊಸದೇನಲ್ಲ, ರಾಜಸ್ಥಾನ ರಾಯಲ್ಸ್ ತಂಡಕ್ಕೆ 2012 ಮತ್ತು 2013ರಲ್ಲಿ ಅವರು ನಾಯಕರಾಗಿದ್ದರು. 2014, 2015ರ ಆವೃತ್ತಿಯಲ್ಲಿ ಅವರು ತಂಡದ ಮಾರ್ಗದರ್ಶಕರಾಗಿದ್ದರು. ಈ ಬಾರಿ ಅವರು ತಂಡದ ಮುಖ್ಯ ಕೋಚ್ ಆಗಿದ್ದಾರೆ.

ಐಪಿಎಲ್‌ನಲ್ಲಿ ರಾಜಸ್ಥಾನ ತಂಡಕ್ಕಾಗಿ ರಾಹುಲ್ ದ್ರಾವಿಡ್ 1,276 ರನ್‌ಗಳನ್ನು ಗಳಿಸಿದ್ದಾರೆ. ದೆಹಲಿ ಕ್ಯಾಪಿಟಲ್ಸ್ ತಂಡದಲ್ಲಿ ಮೆಂಟರ್ ಆಗಿ ಕೂಡ ಕೆಲಸ ಮಾಡಿರುವ ಅನುಭವ ರಾಹುಲ್ ದ್ರಾವಿಡ್ ಅವರಿಗೆ ಇದೆ. ಆಟಗಾರನಾಗಿದ್ದಾಗಿನಿಂದಲೂ ಅವರು ಆರ್‍ಆರ್ ಜೊತೆ ಉತ್ತಮ ಒಡನಾಟ ಹೊಂದಿದ್ದಾರೆ. ಮನೋಜ್ ಬದಾಲೆ ಮತ್ತು ದಿ ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಫ್ರಾಂಚೈಸಿಯ ಜಂಟಿ ಒಡೆತನ ಹೊಂದಿದೆ.
ಸಂಜು ಸ್ಯಾಮ್ಸನ್ ಜತೆ ಕೆಲಸ
ಈಗ ರಾಜಸ್ಥಾನ ರಾಯಲ್ಸ್ ತಂಡದ ಜೊತೆ ದ್ರಾವಿಡ್ ಮತ್ತೆ ಕೆಲಸ ಮಾಡಲಿದ್ದಾರೆ. 2021ರಿಂದ ಸಂಜು ಸ್ಯಾಮ್ಸನ್ ಆರ್ ಆರ್ ತಂಡವನ್ನು ಮುನ್ನಡೆಸುತ್ತಿದ್ದಾರೆ. 2022 ರ ಐಪಿಎಲ್‌ನಲ್ಲಿ ಫೈನಲ್ ತಲುಪಿದ್ದ ರಾಜಸ್ಥಾನ ರಾಯಲ್ಸ್ ಗುಜರಾಥ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿತ್ತು.
ಸಂಗಾಕ್ಕರಗೆ ಹೊಸ ಜವಾಬ್ದಾರಿ
ರಾಹುಲದ್ ದ್ರಾವಿಡ್ ತಂಡದ ಮುಖ್ಯ ಕೋಚ್ ಆಗಿ ನೇಮಕವಾದ ಬಳಿಕ, ಕುಮಾರ ಸಂಗಾಕ್ಕರ ಅವರಿಗೆ ಕ್ರಿಕೆಟ್ ಡೈರೆಕ್ಟರ್ ಜವಾಬ್ದಾರಿ ನೀಡಲಾಗಿದೆ. ಸಂಗಕ್ಕಾರ 2021 ರಲ್ಲಿ ರಾಯಲ್ಸ್‌ಗೆ ಕ್ರಿಕೆಟ್ ನಿರ್ದೇಶಕನ ಪಾತ್ರದಲ್ಲಿ ಸೇರಿಕೊಂಡರು. ಸಂಗಕ್ಕಾರ ಆಟಗಾರರೊಂದಿಗೆ ಅದರಲ್ಲೂ ಸ್ಥಳೀಯ ಪ್ರತಿಭೆಗಳೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡಿದ್ದಾರೆ.
ಈ ಬಾರಿ ಮೆಗಾ ಹರಾಜು
ಈ ಬಾರಿ ಐಪಿಎಲ್‌ನಲ್ಲಿ ಮೆಗಾ ಹರಾಜು ನಡೆಯಲಿದೆ. ಪ್ರಮುಖ ಆಟಗಾರರು ತಂಡವನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ. ರಾಜಸ್ಥಾನ ರಾಯಲ್ಸ್ ಕೂಡ ಹಲವು ಆಟಗಾರರನ್ನು ಕೈಬಿಡುವ ಸಾಧ್ಯತೆ ಇದ್ದು, ಪ್ರಮುಖ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಿದೆ ಎನ್ನಲಾಗಿದೆ.
-
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications