Rahul Dravid: ರಾಹುಲ್ ದ್ರಾವಿಡ್ ರಾಜೀನಾಮೆ: ರಾಜಸ್ಥಾನ್ ರಾಯಲ್ಸ್ ಸ್ಟಾರ್ ವೈಭವ್ ಸೂರ್ಯವಂಶಿಗೆ ಆಘಾತ
Rahul Dravid Resignation: ಈಗಾಗಲೇ ಐಪಿಎಲ್ 2025 ಮುಕ್ತಾಯ ಆಗಿದ್ದು, ಈ ಆವೃತ್ತಿಯಲ್ಲಿ ಆರ್‌ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನೂ 19ನೇ ಆವೃತ್ತಿ ಆರಂಭಕ್ಕೂ ಮುನ್ನವೇ ಹಲವು ಪ್ರಾಂಚೈಸಿಗಳು ತಮ್ಮ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವತ್ತ ಗಮನಹರಿಸಿವೆ. ಈ ನಡುವೆಯೇ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಸ್ಥಾನಕ್ಕೆ ಗುಡ್ ಬೈ ಹೇಳುವ ಮೂಲಕ ಕನ್ನಡಿಗ ರಾಹುಲ್ ದ್ರಾವಿಡ್ ಶಾಕ್ ಕೊಟ್ಟಿದ್ದಾರೆ. ಇದರಿಂದ ಆರ್‌ಆರ್ ಸ್ಟಾರ್ ವೈಭವ್ ಸೂರ್ಯವಂಶಿಗೆ ಆಘಾತವಾಗಿದೆ. ಯಾಕೆ ಅಂತೀರಾ? ಇಲ್ಲಿದೆ ನೋಡಿ ಮಾಹಿತಿ.
ಕನ್ನಡಿಗ ರಾಹುಲ್ ದ್ರಾವಿಡ್ ಅವರು ಐಪಿಎಲ್ 2026 ಆರಂಭಕ್ಕೂ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಹುದ್ದೆಗೆ ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಆಘಾತ ಆದಂತಾಗಿದೆ. ಅಲ್ಲದೆ, ಮತ್ತೊಂದೆಡೆ ಆರ್‌ಆರ್ ತಂಡದ ಸ್ಟಾರ್ ಹಾಗೂ ಯುವ ಆಟಗಾರ ವೈಭವ್ ಸೂರ್ಯವಂಶಿಗೂ ಆಘಾತ ಎದುರಾಂತಾಗಿದೆ. ಹೌದು.. ಹೊಸ ವೈಭವ್‌ನಲ್ಲಿದ್ದ ಹೊಸ ಪ್ರತಿಭೆಯನ್ನು ಹೊರತಂದಿದ್ದೇ ರಾಹುಲ್ ದ್ರಾವಿಡ್ ಅವರು.

ಐಪಿಎಲ್ 2025 ಹರಾಜಿನಲ್ಲಿ 14 ವರ್ಷದ ವೈಭವ್ ಸೂರ್ಯವಂಶಿಯನ್ನು 1.1 ಕೋಟಿ ರೂಪಾಯಿಗೆ ರಾಜಸ್ಥಾನ್ ರಾಯಲ್ಸ್ ಪ್ರಾಂಚೈಸಿ ಖರೀದಿಸಿತ್ತು. ಇದೇ ವೇಳೆ ಈ ಚಿಕ್ಕ ಹುಡುಗನಿಗೆ ಇಷ್ಟೊಂದು ಹಣ ಕೊಟ್ಟು ತಗೊಂಡಿದ್ದಾರೆ. ಇವರು ಮೂರ್ಖರು ಎಂದು ಬಹುತೇಕ ಮಂದಿ ಮಾತನಾಡಿ ಅಣಕಿಸಿದ್ದರು. ಆದರೆ, ಈ ಮೊತ್ತಕ್ಕೆ ತಕ್ಕಂತೆ ವೈಭವ್ ಸೂರ್ಯವಂಶಿ ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಎಲ್ಲಾ ಪ್ರಾಂಚೈಸಿಗಳು ಹಾಗೂ ಕ್ರೀಡಾಭಿಮಾನಿಗಳ ಗಮನ ಸೆಳೆದರು. ಇದಕ್ಕೆ ಪ್ರಮುಖ ಕಾರಣವೇ ಕನ್ನಡಿಗ ರಾಹುಲ್ ದ್ರಾವಿಡ್.
ವೈಭವ್‌ಗೆ ಆಘಾತ: ಸಾಮಾನ್ಯವಾಗಿ ಐಪಿಎಲ್ ಸಮಯದಲ್ಲಿ ಹಿರಿಯ ಆಟಗಾರರಿದ್ದರೆ, ಕಿರಿಯರನ್ನು ಮುಂದೆ ತರುವುದೇ ಕಡಿಮೆ. ಆದರೆ, ರಾಜಸ್ಥಾನ್ ರಾಲಯಲ್ಸ್‌ನಲ್ಲಿ ಕೋಚ್ ರಾಹುಲ್ ದ್ರಾವಿಡ್ 14 ವರ್ಷದ ವೈಭವ್ ಸೂರ್ಯವಂಶಿಗೆ ಅವಕಾಶ ಕಲ್ಪಿಸಿಕೊಟ್ಟರು. ಜೊತೆಗೆ ಉತ್ತೇಜನ ನೀಡಿದರು. ಈ ಅವಕಾಶವನ್ನೇ ಸದುಪಯೋಗಪಡಿಸಿಕೊಂಡ ವೈಭವ್ ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದರು. ಇದೀಗ ಕನ್ನಡಿಗ ರಾಹುಲ್ ದ್ರಾವಿಡ್ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಮುಂದೆ ಯಾರು ಇಷ್ಟರ ಮಟ್ಟಿದೆ ಬೆಂಬಲ ನೀಡುತ್ತಾರೆಯೋ ಎನ್ನುವುದು ವೈಭವ್‌ನಲ್ಲಿ ಕಾಡುವ ಪ್ರಶ್ನೆಯಾಗಿದೆ.
ಐಪಿಎಲ್ 2026 ಆರಂಭಕ್ಕೆ ಇನ್ನೂ ತುಂಬಾ ಸಮಯ ಇದೆ. ಆದರೆ, ಹಲವು ಪ್ರಾಂಚೈಸಿಗಳು ಈಗಲೇ ತಮ್ಮ ತಂಡದಲ್ಲಿ ಬದಲಾವಣೆಗೆ ಮುಂದಾಗಿವೆ. ಈಗಾಗಲೇ ಟ್ರೇಡಿಂಗ್ ವಿಂಡೋವನ್ನ ಕೂಡ ತೆರೆಯಲಾಗಿದೆ. ಇದರ ಅಡಿಯಲ್ಲಿ ಫ್ರಾಂಚೈಸಿ, ಫ್ರಾಂಚೈಸಿಗಳ ನಡುವೆ ಆಟಗಾರರ ವಿನಮಯ ಮಾಡಿಕೊಳ್ಳಬಹುದು ಅಥವಾ ಆಟಗಾರರನ್ನು ಖರೀದಿ ಮಾಡಬಹುದು.
ಈ ನಡುವೆಯೇ ಇದೀಗ ಐಪಿಎಲ್‌ನ ಬಲಿಷ್ಠ ತಂಡಗಳಲ್ಲಿ ಒಂದಾಗಿರುವ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಕನ್ನಡಿಗ ರಾಹುಲ್ ದ್ರಾವಿಡ್ ಗುಡ್ ಬೈ ಹೇಳುವ ಮೂಲಕ ಶಾಕ್ ಕೊಟ್ಟಿದ್ದಾರೆ. ಈ ಬಗ್ಗೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದೆ. ಅಲ್ಲದೆ, ದ್ರಾವಿಡ್ ಅವರೇ ಆರ್‌ಆರ್ ತಂಡದ ಮುಖ್ಯ ಕೋಚ್ ಹುದ್ದೆಯನ್ನು ತೊರೆಯುವುದಾಗಿ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಹುಲ್ ದ್ರಾವಿಡ್ ಕಳೆದ ವರ್ಷವಷ್ಟೇ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಯನ್ನು ಅಲಂಕರಿಸಿದ್ದರು. 2024ರ ಟಿ-20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಗುಡ್ ಬೈ ಹೇಳುದ್ದ ರಾಹುಲ್ ದ್ರಾವಿಡ್, ರಾಜಸ್ಥಾನ ರಾಯಲ್ಸ್ ತಂಡ ಸೇರಿಕೊಂಡ್ರು. ಇದಕ್ಕೂ ಮುಂಚೆ ಅವರು 2011ರಿಂದ 2013ರ ವರೆಗೆ ಆಟಗಾರನಾಗಿ ಈ ತಂಡದ ಭಾಗ ಆಗಿದ್ದರು. ಬಳಿಕ 2015ರ ವರೆಗೆ ಆರ್‌ಆರ್ ತಂಡದ ಮುಖ್ಯ ಕೋಚ್ ಆಗಿ ಕರ್ಯವ್ಯ ನಿರ್ವಹಿಸಿದ್ದರು. ಆದರೆ ಇದೀಗ ದಿಢೀರ್ ರಾಜೀನೇಮೆ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.
ಆರ್‌ಆರ್ ಪ್ರಾಂಚೈಸಿ ಹೇಳಿರುವುದೇನು?: ಇನ್ನು ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು 2026ರ ಐಪಿಎಲ್ಗೂ ಮೊದಲು ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿದಿದ್ದಾರೆ. ಅವರು ಹಲವು ವರ್ಷಗಳಿಂದ ತಂಡದ ಪ್ರಯಾಣದ ಕೇಂದ್ರಬಿಂದು ಆಗಿದ್ದಾರೆ. ಅವರ ನಾಯಕತ್ವವು ಒಂದು ಪೀಳಿಗೆಯ ಆಟಗಾರರ ಮೇಲೆ ಪ್ರಭಾವ ಬೀರಿದೆ. ತಂಡದೊಳಗೆ ಬಲವಾದ ಮೌಲ್ಯಗಳನ್ನು ನಿರ್ಮಿಸಿದೆ. ಅವರಿಗೆ ದೊಡ್ಡ ಹುದ್ದೆಯನ್ನು ನೀಡಲು ನಿರ್ಧರಿಸಲಾಗಿತ್ತು. ಆದರೆ, ಆ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ ಎಂದು ಫ್ರಾಂಚೈಸಿ ತಿಳಿಸಿದೆ. ಅಲ್ಲದೆ, ದ್ರಾವಿಡ್ ಅವರ ಸೇವೆಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ರಾಜಸ್ಥಾನ್ ರಾಯಲ್ಸ್ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications