RR vs CSK: ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ರಾಜಸ್ಥಾನ ರಾಯಲ್ಸ್‌ಗೆ ರೋಚಕ ಗೆಲುವು

ಗುವಾಹಟಿಯ ಬರ್ಸಾಪುರ ಕ್ರಿಕೆಟ್ ಮೈದಾನದಲ್ಲಿ ನಡೆದ ನಡೆದ ರೋಚಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (RR) ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ 6 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಆರ್ ಸಿಬಿ ವಿರುದ್ಧ ಸೋಲಿನ ಬಳಿಕ ಸಿಎಸ್‌ಕೆ ಮತ್ತೊಂದು ಸೋಲು ಅನುಭವಿಸಿದೆ. ಈ ಆವೃತ್ತಿಯಲ್ಲಿ ಮೊದಲ ಎರಡು ಪಂದ್ಯ ಸೋತಿದ್ದ ರಾಜಸ್ಥಾನ ರಾಯಲ್ಸ್‌ ಮೊದಲ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು. ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿದ್ದ ರಾಜಸ್ಥಾನ ರಾಯಲ್ಸ್‌ಗೆ ನಿತೀಶ್ ರಾಣಾ ಆಸರೆಯಾದರು.

Rajasthan royals defeted chennai super kings by 6 runs ipl 2025

ಯಶಸ್ವಿ ಜೈಸ್ವಾಲ್ 3 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಆದರೆ ಮೊದಲ ಎರಡು ಪಂದ್ಯಗಳಲ್ಲಿ ವಿಫಲವಾಗಿದ್ದ ನಿತೀಶ್ ರಾಣಾ ಸಿಎಸ್‌ಕೆ ತಂಡದ ಬೌಲರ್ ಗಳ ಬೆವರಿಳಿಸಿದರು. ಕೇವಲ 36 ಎಸೆತಗಳಲ್ಲಿ 10 ಬೌಂಡರಿ 5 ಭರ್ಜರಿ ಸಿಕ್ಸರ್ ಸಹಿತ 81 ರನ್ ಗಳಿಸಿದರು. ರವಿಚಂದ್ರನ್ ಅಶ್ವಿನ್ ವೈಡ್ ಬಾಲ್ ಎಸೆಯುವ ಮೂಲಕ ರಾಣಾರನ್ನು ಸ್ಟಂಪ್ ಮಾಡಿ ಸಿಎಸ್‌ಕೆಗೆ ರಿಲೀಫ್ ನೀಡಿದರು.

Take a Poll

ನಾಯಕ ರಿಯಾನ್ ಪರಾಗ್ 28 ಎಸೆತಗಳಲ್ಲಿ 2 ಬೌಂಡರಿ 2 ಸಿಕ್ಸರ್ ಸಹಿತ 37 ರನ್ ಗಳಿಸಿದರು. ಸಂಜು ಸ್ಯಾಮ್ಸನ್ 20 ರನ್ ಗಳಿಸಿದರೆ, ಹೆಟ್ಮೆಯರ್ 19 ರನ್ ಗಳಿಸಿದರು. ಖಲೀಲ್ ಅಹ್ಮದ್, ನೂರ್ ಅಹ್ಮದ್, ಮತೀಶ ಪತಿರಾನ ತಲಾ ಎರಡು ವಿಕೆಟ್ ಪಡೆದರೆ, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು.

ಹಸರಂಗ, ಸಂದೀಪ್ ಶರ್ಮಾ ಮ್ಯಾಜಿಕ್‌

183 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ ತಂಡಕ್ಕೆ ಜೋಫ್ರಾ ಆರ್ಚರ್ ಆರಂಭದಲ್ಲೇ ಆಘಾತ ನೀಡಿದರು. ರಚಿನ್ ರವೀಂದ್ರ ರನ್ ಗಳಿಸುವ ಮುನ್ನವೇ ಔಟಾದರು. ರಾಹುಲ್ ತ್ರಿಪಾಠಿ ಮತ್ತು ರುತುರಾಜ್ ಗಾಯಕ್ವಾಡ್ ಬಳಿಕ ಚೆನ್ನೈ ತಂಡಕ್ಕೆ ಆಸರೆಯಾದರು. ತ್ರಿಪಾಠಿ 23 ರನ್ ಗಳಿಸಿ ಔಟಾದರು. ನಾಯಕ ರುತುರಾಜ್ ಗಾಯಕ್ವಾಡ್ 44 ಎಸೆತಗಳಲ್ಲಿ 77 ರನ್ ಗಳಿಸುವ ಮೂಲಕ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದರೂ, ಹಸರಂಗ ಎಸೆತದಲ್ಲಿ ಸಿಕ್ಸರ್ ಬಾರಿಸಲು ಹೋಗಿ ವಿಕೆಟ್ ಒಪ್ಪಿಸಿದರು.

ಶಿವಂ ದುಬೆ 18 ರನ್ ಗಳಿಸಿ ಔಟಾದರೆ, ವಿಜಯ್ ಶಂಕರ್ 9 ರನ್ ಗಳಿಸಿದರು. ರವೀಂದ್ರ ಜಡೇಜಾ 22 ಎಸೆತಗಳಲ್ಲಿ ಅಜೇಯ 32 ರನ್ ಗಳಿಸಿದರೂ ತಂಡದ ಸೋಲು ತಪ್ಪಿಸಲು ಆಗಲಿಲ್ಲ. ಎಂಎಸ್ ಧೋನಿ 11 ಎಸೆತಗಳಲ್ಲಿ 16 ರನ್ ಗಳಿಸಿ ಕೊನೆಯ ಓವರ್ ನಲ್ಲಿ ಸಂದೀಪ್ ಶರ್ಮಾಗೆ ವಿಕೆಟ್ ಒಪ್ಪಿಸಿದರು. ಜೇಮಿ ಓವರ್ಟನ್ 4 ಎಸೆತಗಳಲ್ಲಿ ಅಜೇಯ 11 ರನ್ ಗಳಿಸಿದರೂ ಸಿಎಸ್‌ಕೆ 6 ರನ್‌ಗಳಿಂದ ಸೋಲೊಪ್ಪಿಕೊಂಡಿತು. ವನಿಂದು ಹಸರಂಗ 4 ಓವರ್ ಗಳಲ್ಲಿ 35 ರನ್ ನೀಡಿ 4 ವಿಕೆಟ್ ಪಡೆದು ಮಿಂಚಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+